ಬ್ರಹ್ಮಾವರ: ಜನರು ಸರಕಾರಿ ಸೌಲಭ್ಯ ಪಡೆಯುವುದು ಹಕ್ಕು, ಭಿಕ್ಷೆ ಅಲ್ಲ. ಆದ್ದರಿಂದ ಸಿದ್ದರಾಮಯ್ಯನವರ ನೇತೃತ್ವದ ರಾಜ್ಯ ಸರಕಾರ ಹತ್ತು ಹಲವು ಜನೋಪಯೋಗಿ ಕಾರ್ಯಕ್ರಮ ಗಳನ್ನು ಸಮರ್ಪಕವಾಗಿ ಜಾರಿಗೆ ತಂದಿದೆ ಎಂದು ಸಚಿವ ಪ್ರಮೋದ್ ಮಧ್ವರಾಜ್ ಹೇಳಿದರು.
ಅವರು ಬುಧವಾರ ಹಂದಾಡಿ ಬೇಳೂರು ಶ್ರೀ ಬಬ್ಬುಸ್ವಾಮಿ ದೇವಸ್ಥಾನದ ವಠಾರದಲ್ಲಿ ಹಂದಾಡಿ ಗ್ರಾಮ ಮಟ್ಟದ ಜನಸಂಪರ್ಕ ಸಭೆ ಉದ್ಘಾಟಿಸಿ ಮಾತನಾಡಿದರು. ಕ್ಷೇತ್ರದ ಜನರ ಸಮಸ್ಯೆಗಳಿಗೆ ಸ್ಪಂದಿಸುವ ದೃಷ್ಟಿಯಿಂದ ರಾಜ್ಯದ ಇತಿಹಾಸದಲ್ಲೇ ಪ್ರಥಮ ಬಾರಿಗೆ ಉಡುಪಿ ವಿಧಾನ ಸಭಾ ಕ್ಷೇತ್ರದಲ್ಲಿ ಗ್ರಾಮಮಟ್ಟದ ಜನ ಸಂಪರ್ಕ ಸಭೆ ಹಮ್ಮಿಕೊಳ್ಳಲಾಗುತ್ತಿದೆ. ತಾಲೂಕು ಮಟ್ಟದ ಎಲ್ಲ ಇಲಾಖಾ ಅಧಿಕಾರಿಗಳು ಸಭೆಗೆ ಹಾಜರಾಗುವು ದರಿಂದ ಸರಕಾರವೇ ಜನರ ಸಮೀಪಕ್ಕೆ ತೆರಳಿದಂತಾಗುತ್ತದೆ. ಉಡುಪಿ ಕ್ಷೇತ್ರ ದಲ್ಲಿ ದಾಖಲೆಯ 1,600 ಕೋಟಿ ರೂ. ಅಭಿವೃದ್ಧಿ ಕೆಲಸಗಳ ಪರಾಮರ್ಶೆಗಾಗಿ “ಗ್ರಾಮದೆಡೆ ವಿಶ್ವಾಸದ ನಡೆ’ ಇಡಲಾಗುತ್ತಿದೆ ಎಂದು ಸಚಿವರು ಹೇಳಿದರು.
ಇದೇ ಸಂದರ್ಭ ವಿವಿಧ ಫಲಾನು ಭವಿಗಳಿಗೆ ಸವಲತ್ತು ವಿತರಿಸಲಾಯಿತು. ಗ್ರಾಮಸ್ಥರ ನೂರಾರು ಅರ್ಜಿ ಸ್ವೀಕರಿಸಿ ಬಹುತೇಕ ಸ್ಥಳದಲ್ಲಿಯೇ ಪರಿಹಾರ ಕಂಡುಕೊಳ್ಳಲಾಯಿತು.
ಜಿ.ಪಂ. ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ಸದಸ್ಯ ಮೈರ್ಮಾಡಿ ಸುಧಾಕರ ಶೆಟ್ಟಿ, ಮಾಜಿ ಸದಸ್ಯೆ ಮಲ್ಲಿಕಾ ಬಿ. ಪೂಜಾರಿ, ತಾ.ಪಂ. ಅಧ್ಯಕ್ಷೆ ನಳಿನಿ ಪ್ರದೀಪ್ ರಾವ್, ಮಾಜಿ ಅಧ್ಯಕ್ಷ ನಿತ್ಯಾನಂದ ಶೆಟ್ಟಿ ಹಾರಾಡಿ, ಸದಸ್ಯರಾದ ಸುಧೀರ್ ಕುಮಾರ್ ಶೆಟ್ಟಿ, ಕುಸುಮಾ ಪೂಜಾರಿ, ಪಂಚಾಯತ್ ಅಧ್ಯಕ್ಷೆ ಪ್ರತಿಮಾ ಶೆಟ್ಟಿ, ತಾ.ಪಂ. ಮಾಜಿ ಸದಸ್ಯ ಶೀನ ಪೂಜಾರಿ, ಎಸ್. ನಾರಾಯಣ್, ರವಿರಾಜ್ ಶೆಟ್ಟಿ ಹೇರೂರು, ನಿತ್ಯಾನಂದ ಬಿ.ಆರ್, ರಾಜೇಶ್ ಶೆಟ್ಟಿ ಕುಮ್ರಗೋಡು, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಶೇಷಪ್ಪ, ಬ್ರಹ್ಮಾವರ ವಿಶೇಷ ತಹಶೀಲ್ದಾರ್ ಪ್ರದೀಪ್ ಕುಡೇìಕರ್ ಉಪಸ್ಥಿತರಿದ್ದರು.
ಕಂದಾಯ ಅಧಿಕಾರಿ ಲಕ್ಷ್ಮೀನಾರಾ ಯಣ ಭಟ್ ನಿರೂಪಿಸಿದರು.