Advertisement

ಎಲ್ಲಾ ಜಾತಿ ಧರ್ಮದವರನ್ನು ಪ್ರೀತಿ- ಘನತೆಯಿಂದ ನಡೆಸಿಕೊಳ್ಳುವುದು ನಮ್ಮ ಧರ್ಮ: ಸಿದ್ದರಾಮಯ್ಯ

12:53 PM Oct 15, 2023 | Team Udayavani |

ಮೈಸೂರು: ಬರಗಾಲವಿದ್ದರೂ ನಮ್ಮ ಸಂಪ್ರದಾಯ ಮತ್ತು ವೈಭವಕ್ಕೆ ಕೊರತೆ ಇಲ್ಲದಂತೆ ಅರ್ಥಪೂರ್ಣ ದಸರಾ ಆಚರಿಸಲಾಗುವುದು. ನಮ್ಮ ಪರಂಪರೆ ಮತ್ತು ಹಿರಿಮೆಯನ್ನು ಜಗತ್ತಿಗೆ ಸಾರಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.

Advertisement

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಚಾಮುಂಡಿ ಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿ ದೇವಿಗೆ ಅಗ್ರ ಪೂಜೆ ಸಲ್ಲಿಸುವ ಮೂಲಕ ಸಾಂಪ್ರದಾಯಿಕವಾಗಿ ಚಾಲನೆ ನೀಡಿ ಮಾತನಾಡಿದರು.

ಕನ್ನಡ ನಾಡಿನ ಸಮೃದ್ಧಿ, ಪ್ರಗತಿ, ಸಂಸ್ಕೃತಿ ಮತ್ತು ವೈಭವವನ್ನು ದಸರಾ ಮೂಲಕ ಜಗತ್ತಿಗೆ ಸಾರುವ ಕೆಲಸವನ್ನು ನಾವು ಮಾಡುತ್ತೇವೆ. ಸಾಂಸ್ಕೃತಿಕವಾಗಿ ಬಹಳ ಶ್ರೀಮಂತ ನಾಡು ನಮ್ಮದು. ನಮ್ಮ ಜನ ಬಹಳ ಸುಸಂಸ್ಕೃತರು. ಪ್ರೀತಿ ಹಂಚುವವರು. ಎಲ್ಲಾ ಜಾತಿ ಧರ್ಮದವರನ್ನು ಅತ್ಯಂತ ಪ್ರೀತಿಯಿಂದ, ಘನತೆಯಿಂದ ನಡೆಸಿಕೊಳ್ಳುವುದು ನಮ್ಮ ಧರ್ಮ ಮತ್ತು ಕರ್ತವ್ಯ ಎಂದರು.

ರಾಜ್ಯದ 116 ತಾಲ್ಲೂಕುಗಳಲ್ಲಿ ಮಳೆ ಇಲ್ಲದೆ ತೀವ್ರ ಬರಗಾಲದ ಸ್ಥಿತಿ ಇದೆ. ಮಳೆ ಇಲ್ಲದೆ ನಾಡಿನ ರೈತ ಕುಲ, ನಾಡಿನ ಜನತೆ ಕಷ್ಟದಲ್ಲಿದ್ದಾರೆ. ಆದ್ದರಿಂದ ಅದ್ದೂರಿ ಇಲ್ಲದ ವೈಭವಕ್ಕೆ ಕೊರತೆ ಇಲ್ಲದ ಅರ್ಥಪೂರ್ಣ ದಸರಾ ಆಚರಿಸಬೇಕು ಎನ್ನುವುದು ನಮ್ಮ ಉದ್ದೇಶ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next