Advertisement
ಈ ಮಧ್ಯೆ, ಮಂಗಳವಾರ ಬೆಳಗ್ಗೆ ದರ್ಶನ್ ತಾಯಿ ಮೀನಾ ತೂಗುದೀಪ್ ಆಸ್ಪತ್ರೆಗೆ ಧಾವಿಸಿ ಮಗನ ಆರೋಗ್ಯ ವಿಚಾರಿಸಿದರು. ದರ್ಶನ್ ಪುತ್ರ ವಿನೀಶ್ ಸಹ ಅಜ್ಜಿಯೊಂದಿಗೆ ಆಸ್ಪತ್ರೆಗೆ ಆಗಮಿಸಿದ್ದರು. ಇದೇ ವೇಳೆ, ಮಾಜಿ ಸಚಿವ ಎಚ್.ಆಂಜನೇಯ, ನಟ ವಿನೋದ್ ಪ್ರಭಾಕರ್ ಸಹ ಆಸ್ಪತ್ರೆಗೆ ಆಗಮಿಸಿ, ಮೂವರು ನಟರ ಯೋಗಕ್ಷೇಮ ವಿಚಾರಿಸಿದರು. ಇದೇ ವೇಳೆ, ಆಸ್ಪತ್ರೆ ಸುತ್ತಮುತ್ತ ಪೊಲೀಸ್ ಭದ್ರತೆ ಮುಂದುವರಿದಿದ್ದು,ಸಿಆರ್‌ಪಿಎಫ್ ತುಕಡಿಯನ್ನು ನಿಯೋಜಿಸಲಾಗಿದೆ. ಅಲ್ಲದೆ, ಚಿಕಿತ್ಸೆ ಪಡೆಯುತ್ತಿರುವ ದರ್ಶನ್ ಹಾಗೂ ಇನ್ನಿತರ ನಟರ ಫೋಟೋ ತೆಗೆಯದಂತೆ ಆಸ್ಪತ್ರೆ ಸಿಬ್ಬಂದಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಅಪಘಾತಕ್ಕೆ ಕಾರು ಚಾಲಕನ ನಿರ್ಲಕ್ಷ್ಯವೇ ಕಾರಣ ಎಂದು ದೂರಲಾಗಿದ್ದು, ಈ ಸಂಬಂಧ ಕಾರು ಚಾಲಕನ ವಿರುದ್ಧ ದೂರು ದಾಖಲಾಗಿದೆ.