Advertisement

ಕಡಬ: ಚಲಿಸುತ್ತಿದ್ದ ಓಮ್ನಿ ವಾಹನದ ಮೇಲೆ ಬಿದ್ದ ಮರ, ಹೆದ್ದಾರಿಯಲ್ಲಿದೆ ಅಪಾಯಕಾರಿ ಮರಗಳು

01:56 PM Sep 12, 2020 | keerthan |

ಕಡಬ: ಚಲಿಸುತ್ತಿದ್ದ ಓಮ್ನಿಯ ಮೇಲೆ ಮರವೊಂದು ಮುರಿದು ಬಿದ್ದ ಪರಿಣಾಮ ಓಮ್ನಿ ಜಖಂಗೊಂಡು ಅದರ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ಉಪ್ಪಿನಂಗಡಿ-ಕಡಬ ರಾಜ್ಯ ಹೆದ್ದಾರಿಯ ಕೊಯಿಲ ಸಮೀಪದ ನೀರಾಜೆ ಎಂಬಲ್ಲಿ ಶನಿವಾರ ಬೆಳಿಗ್ಗೆ ನಡೆದಿದೆ.

Advertisement

ಎಡೆಬಿಡದೆ ಸುರಿಯುತ್ತಿದ್ದ ಮಳೆಗೆ ಕೊಯಿಲ ನೀರಾಜೆ ಸಮೀಪ ರಸ್ತೆ ಬದಿಯಲ್ಲಿದ್ದ ಹಲಸಿನ ಮರವೊಂದು ಮುರಿದುಬಿದ್ದಿದೆ. ಕೊಯಿಲದಿಂದ ಆತೂರಿಗೆ ಕೊಯಿಲ ಶ್ರೀರಾಮ ಎಲೆಕ್ಟ್ರಿಕಲ್ಸ್‌ನ ಮಾಲಕ ಯೋಗೀಶ್‌ರವರು ಚಲಾಯಿಸಿಕೊಂಡು ಹೋಗುತ್ತಿದ್ದ ಓಮ್ನಿ ಕಾರಿನ ಮೇಲೆಯೇ ಮರ ಮುರಿದು ಬಿದ್ದಿದೆ.

ಘಟನೆಯಲ್ಲಿ ಓಮ್ನಿ ಜಖಂಗೊಂಡಿದ್ದು ಚಾಲಕ ಯೋಗೀಶ್‌ರವರು ಸಣ್ಣಪುಟ್ಟ ಗಾಯದೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಮರ ರಸ್ತೆಗೆ ಮುರಿದು ಬಿದ್ದ ಪರಿಣಾಮ ಸುಮಾರು ಅರ್ಧತಾಸು ರಸ್ತೆಯಲ್ಲಿ ವಾಹನ ಸಂಚಾರಕ್ಕೂ ಅಡಚಣೆ ಉಂಟಾಗಿತ್ತು. ಬಳಿಕ ಸ್ಥಳೀಯರು ಮರ ತೆರವುಗೊಳಿಸಿ ಸುಗಮ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಇದನ್ನೂ ಓದಿ: ಬೈಕಿನಲ್ಲಿ ಜಲಾವೃತಗೊಂಡ ಸೇತುವೆ ದಾಟುವ ಸಾಹಸ ಮಾಡಿ ನೀರು ಪಾಲಾದ ಯುವಕ

ಇನ್ನಷ್ಟೂ ಅಪಾಯಕಾರಿ ಮರಗಳು:

Advertisement

ಉಪ್ಪಿನಂಗಡಿ-ಕಡಬ ರಾಜ್ಯ ಹೆದ್ದಾರಿಯ ಪಕ್ಕದಲ್ಲಿ ಸಾಕಷ್ಟು ಅಪಾಯಕಾರಿ ಮರಗಳಿದ್ದು ಕೆಲವೊಂದು ಮರಗಳು ಮುರಿದು ಬೀಳುವ ಹಂತದಲ್ಲಿವೆ. ರಸ್ತೆ ಬದಿ ಅಪಾಯಕಾರಿ ಸ್ಥಿತಿಯಲ್ಲಿರುವ ಮರಗಳನ್ನು ಮರಗಳನ್ನು ತೆರವುಗೊಳಿಸುವ ಮೂಲಕ ಮುಂದೆ ಸಂಭವಿಸಬಹುದಾದ ಅನಾಹುತ ತಪ್ಪಿಸುವಂತೆ ಸಾರ್ವಜನಿಕರಿಂದ ಆಗ್ರಹ ವ್ಯಕ್ತವಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next