Advertisement
ಸುಬ್ರಹ್ಮಣ್ಯ ದಿಂದ ಬೆಂಗಳೂರಿಗೆ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಕ.ರಾ.ಸಾ.ಸಂ. ಬಸ್ ನ ಮೇಲೆ ಮರ ಬಿದ್ದಿದ್ದು ಅದೃಷ್ಟವಶಾತ್ ಪ್ರಯಾಣಿಕರು ಸಂಭಾವ್ಯ ಅಪಾಯದಿಂದ ಪಾರಾಗಿದ್ದಾರೆ. ಈಗಾಗಲೇ ವಿಪರಿತ ಮಳೆಯೂ ಸುರಿಯುತ್ತಿದ್ದು ಈ ಮಳೆಗೆ ಅಪಾಯಕಾರಿಯಾಗಿರುವ ಮರಗಳು ಉರುಳಿದೆ ಎಂದು ಹೇಳಲಾಗುತ್ತಿದೆ.
ಈ ರಸ್ತೆಯಲ್ಲಿ ಆಗಾಗ ರಸ್ತೆ ಬದಿಯ ಮರಗಳು ಬೀಳುತ್ತಿದ್ದರೂ ಅರಣ್ಯ ಇಲಾಖೆ ಮಾತ್ರ ಇನ್ನೂ ಎಚ್ಚೆತ್ತುಕೊಳ್ಳಲಿಲ್ಲ, ಈಗಾಗಲೇ ಅಪಾಯಕಾರಿ ಮರಗಳೆಂದು ಗುರುತಿಸಿದ್ದರೂ ಅಂತಹ ಮರಗಳನ್ನು ತೆರವುಗೊಳಿಸಲು ಕಾನೂನಿನ ಕುಂಟು ನೆಪ ಹೇಳುತ್ತಿರುವ ಅರಣ್ಯ ಇಲಾಖಾ ಅಧಿಕಾರಿಗಳು ಅಪಾಯ ಸಂಭವಿಸಿದಾಗ ಸ್ಥಳಕ್ಕೆ ಭೇಟಿ ನೀಡುವ ಕೆಲಸ ಮಾತ್ರ ಮಾಡುತ್ತಾರೆ. ಇನ್ನಾದರೂ ರಸ್ತೆ ಬದಿಯ ಮರ ತೆರವುಗೊಳಿಸುವಲ್ಲಿ ಅರಣ್ಯ ಅಧಿಕಾರಿಗಳು ಪ್ರಾಮಾಣಿಕ ಪ್ರಯತ್ನ ನಡೆಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ. ಇದನ್ನೂ ಓದಿ : ಹುಣಸೂರು: ಅಪರಿಚಿತ ಕಾರು ಢಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವು