Advertisement

100 ಎಕರೆ ಪ್ರದೇಶದಲ್ಲಿ ಟ್ರೀ ಪಾರ್ಕ್‌ ನಿರ್ಮಾಣ

03:24 PM Jul 29, 2020 | Suhan S |

ಹೊಳಲ್ಕೆರೆ: ಪರಿಸರ ಸಂರಕ್ಷಣೆ ದೃಷ್ಟಿಯಿಂದ 2 ಕೋಟಿ ರೂ. ಅನುದಾನದಲ್ಲಿ 100 ಎಕರೆ ಪ್ರದೇಶದಲ್ಲಿ ಟ್ರೀ ಪಾರ್ಕ್‌ ನಿರ್ಮಾಣ ಮಾಡುವುದು ಹಾಗೂ ಕ್ಷೇತ್ರದಲ್ಲಿ ಒಂದು ಕೋಟಿ ಸಸ್ಯಗಳನ್ನು ಬೆಳೆಸುವ ಸಂಕಲ್ಪ ಮಾಡಿರುವುದಾಗಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನೂತನ ಅಧ್ಯಕ್ಷ ಹಾಗೂ ಶಾಸಕ ಎಂ. ಚಂದ್ರಪ್ಪ ತಿಳಿಸಿದರು.

Advertisement

ಪರಿಸರ ದಿನಾಚರಣೆ ಅಂಗವಾಗಿ ಹನುಮಂತ ದೇವರ ಕಣಿವೆಯಲ್ಲಿ ನೂತನ ಟ್ರೀ ಪಾರ್ಕ್‌ ನಿರ್ಮಾಣಕ್ಕೆ ಸಸಿ ನೆಟ್ಟು ಚಾಲನೆ ನೀಡಿ ಅವರು ಮಾತನಾಡಿದರು. ಪರಿಸರವನ್ನು ನಿರ್ಲಕ್ಷಿಸಿದರೆ ಮನುಕುಲಕ್ಕೆ ಅಪಾಯ ತಪ್ಪಿದ್ದಲ್ಲ. ನಮ್ಮ ಸುತ್ತಮುತ್ತಲಿನ ಪರಿಸರದ ಸಂರಕ್ಷಣೆ ಮಾಡುವುದು ಎಲ್ಲರ ಹೊಣೆ. ಈ ನಿಟ್ಟಿನಲ್ಲಿ ಅರಣ್ಯ ಇಲಾಖೆ ಸಹಯೋಗದಲ್ಲಿ ಟ್ರೀ ಪಾರ್ಕ್‌ ನಿರ್ಮಾಣ ಮಾಡುತ್ತಿದ್ದೇವೆ. ಇಲ್ಲಿ ಹತ್ತು ಸಾವಿರಕ್ಕೂ ಅಧಿಕ ವಿವಿಧ ಜಾತಿಯ ಗಿಡಗಳನ್ನು ಬೆಳೆಸುತ್ತೇವೆ. 2 ಸಾವಿರ ಹಣ್ಣಿನ ಗಿಡಗಳನ್ನು ಹಾಕುತ್ತೇವೆ. ಪಾರ್ಕ್‌ ಸುತ್ತಲೂ ತಂತಿ ಬೆಲೆ ಹಾಕುತ್ತೇವೆ. ಪ್ರವಾಸಿಗರನ್ನು ಸೇಳೆಯಲು ವಿಶೇಷ ವಿನ್ಯಾಸದ ಪಾರ್ಕ್‌, ಮಕ್ಕಳಿಗೆ ಆಟೋಪಕರಣ, ಹೋಟೆಲ್‌, ನಿರ್ಮಾಣ ಮಾಡಲಾಗುವುದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next