Advertisement

ಮರ ಕಳವು: ರೈತ ಸಂಘ ಆರೋಪ

02:22 PM Sep 01, 2020 | Suhan S |

ಶ್ರೀರಂಗಪಟ್ಟಣ: ತಾಲೂಕಿನ ಕೆ.ಶೆಟ್ಟಹಳ್ಳಿ ಮೀಸಲು ಅರಣ್ಯ ಇತರೆಡೆ ಅರಣ್ಯ ಇಲಾಖೆ ಸಿಬ್ಬಂದಿಯೇ ಮರಗಳನ್ನು ಕಡಿದು ಮಾರಾಟ ಮಾಡುತ್ತಿದ್ದಾರೆ ಎಂದು ರೈತ ಸಂಘ ಹಾಗೂ ದಲಿತ ಸಂಘರ್ಷ ಸಮಿತಿ ಮುಖಂಡರು ಆರೋಪಿಸಿದರು.

Advertisement

ತಾಲೂಕಿನ ಕೆ.ಶೆಟ್ಟಹಳ್ಳಿ ಮೀಸಲು ಅರಣ್ಯದಲ್ಲಿ, ಗುರುತು ಮಾಡದ ಮರಗಳನ್ನು ಕಡಿದಿರುವ ಸ್ಥಳಕ್ಕೆ ತೆರಳಿ ವೀಕ್ಷಿಸಿದ ಪ್ರಗತಿಪರ ಸಂಘಟನೆಗಳ ಕಾರ್ಯಕರ್ತರು, ಅರಣ್ಯಾ ಅಧಿಕಾರಿಗಳ ವಿರುದ್ಧ ಆರೋಪ ಮಾಡಿದರು. ಬೆಲೆ ಬಾಳುವ ಮರಗಳನ್ನು ಕಡಿದು ಖಾಸಗಿ ವಾಹನದಲ್ಲಿ ಸಾಗಿಸುವ ಹುನ್ನಾರ ನಡೆಸುತ್ತಿದ್ದಾರೆ ಎಂದು ಇಲಾಖೆ ಸಿಬ್ಬಂದಿ ಮಾಹಿತಿ ನೀಡಿದ್ದಾರೆ. ಕಡಿದು ಇಟ್ಟಿರುವ ಇನ್ನೂ ಸಾಕಷ್ಟು ಮರಗಳು ಬಿದ್ದಿವೆ. ನಿಯಮಾನುಸಾರ ಕಡಿದ ಮರಗಳಿಗೆ ಸಂಖ್ಯೆ ಹಾಕದೆ ಮರ ಕಡಿದು ಹಾಕಿರುವುದು ಕಂಡುಬಂದಿದೆ. ತನಿಖೆ ನಡೆಸಬೇಕು ಎಂದು ಮೋಹನಕುಮಾರ್‌ ಆಗ್ರಹಿಸಿದರು.

ರೈತ ಸಂಘದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಮಂಜೇಶ್‌ಗೌಡ ಮಾತನಾಡಿ, ತಾಲೂಕಿನಲ್ಲಿ ಎರಡು ವರ್ಷಗಳಿಂದ ಬೆಲೆ ಬಾಳುವ ಮರಗಳನ್ನು ಅರಣ್ಯ ಇಲಾಖೆಯ ಅಧಿಕಾರಿಗಳೇ ಕಡಿದು ಸಾಗಿಸುತ್ತಿದ್ದಾರೆ ಎಂಬ ದೂರುಗಳು ಬಂದಿವೆ. ಅಪರೂಪದ ರಕ್ತ ಚಂದನ ಮರಗಳ ಕಳವು ನಡೆದಿರುವ ಶಂಕೆ ಇದೆ. ಈ ಬಗ್ಗೆ ಅಧಿಕಾರಿಗಳಿಗೆ ದೂರು ನೀಡಲಾಗುವುದು ಎಂದು ತಿಳಿಸಿದರು. ವಲಯ ಅರಣ್ಯಾಧಿಕಾರಿ (ಆರ್‌ ಎಫ್ಒ) ಸುನೀತಾ ಪ್ರತಿಕ್ರಿಯಿಸಿ, ಅರಣ್ಯ ಇಲಾಖೆ ಸಿಬ್ಬಂದಿ ಮರ ಕಳವು ಮಾಡಿರುವ ಬಗ್ಗೆ ನನಗೆ ಮಾಹಿತಿ ಇಲ್ಲ. ವನ ಪಾಲಕರಿಂದ ಮಾಹಿತಿ ಪಡೆಯುತ್ತೇನೆ. ಅಗತ್ಯವಿದ್ದರೆ ಖದ್ದು ಸ್ಥಳ ಪರಿಶೀಲನೆ ನಡೆಸುತ್ತೇನೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next