Advertisement

ಬಲಿಷ್ಠ ಭಾರತದಿಂದ ಶತ್ರು ರಾಷ್ಟ್ರಗಳಿಗೆ ನಡುಕ; ಸಚಿವ ಬಿ.ಸಿ. ಪಾಟೀಲ್‌

06:26 PM Aug 16, 2022 | Team Udayavani |

ಚಿತ್ರದುರ್ಗ: ಸ್ವಾತಂತ್ರ್ಯ ಬಂದ 75 ವರ್ಷಗಳಲ್ಲಿ ಭಾರತ ಇಡುತ್ತಿರುವ ಪ್ರತಿ ಹೆಜ್ಜೆಯೂ ಶತ್ರುಗಳಲ್ಲಿ ನಡುಕ ಹುಟ್ಟಿಸುತ್ತಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ. ಪಾಟೀಲ್‌ ಹೇಳಿದರು.

Advertisement

ನಗರದ ಮುರುಘರಾಜೇಂದ್ರ ಕ್ರೀಡಾಂಗಣದಲ್ಲಿ ಸೋಮವಾರ ಜಿಲ್ಲಾಡಳಿತ ಆಯೋಜಿಸಿದ್ದ 76ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ಕಳೆದ 75 ವರ್ಷಗಳಲ್ಲಿ ಭಾರತ ಸಾಕಷ್ಟು ಒಳಿತು, ಕೆಡುಕುಗಳನ್ನು ನೋಡಿದೆ, ಯುದ್ಧಗಳನ್ನು ಮಾಡಿದೆ. 200 ವರ್ಷಗಳ ಕಾಲ ಬ್ರಿಟಿಷರು ನಮ್ಮನ್ನು ಆಳಿ, ಇಲ್ಲಿನ ಸಂಪತ್ತನ್ನೆಲ್ಲಾ ದೋಚಿದರೂ ಮತ್ತೆ ನಮ್ಮ ದೇಶವನ್ನು ಸಮೃದ್ಧವಾಗಿ ಕಟ್ಟಿದ್ದೇವೆ.

ಕೃಷಿ, ಐಟಿ-ಬಿಟಿ, ಸೇನೆ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲೂ ಭಾರತ ಬಲವಾಗಿದೆ. ಹಸಿರು ಕ್ರಾಂತಿಯಿಂದ ಜಗತ್ತಿನ ಬೇರೆ ದೇಶಗಳಿಗೆ ಆಹಾರ ರಫ್ತು ಮಾಡುವಷ್ಟು ಬೆಳೆದಿದ್ದೇವೆ ಎಂದು ಬಣ್ಣಿಸಿದರು. ಸ್ವಾತಂತ್ರ್ಯಕ್ಕಾಗಿ ಲಕ್ಷಾಂತರ ಹಿರಿಯರು ತ್ಯಾಗ ಬಲಿದಾನ ಮಾಡಿದ್ದಾರೆ. ಕೆಂಪುಕೋಟೆಯ ಮೇಲೆ ರಾಷ್ಟ್ರಧ್ವಜ ಹಾರಿಸುವವರೆಗೆ ನಡೆದ ಹೋರಾಟದ ಎಲ್ಲ ಘಟನೆ, ಪ್ರಯತ್ನಗಳೂ ರಾಷ್ಟ್ರೀಯ ಚಳವಳಿಯ ಭಾಗಗಳೇ ಆಗಿವೆ.

ಸ್ವಾತಂತ್ರ್ಯ ಹೋರಾಟದ ಕಾಲಗತಿಯಲ್ಲಿ ಹುತಾತ್ಮರು ಹಾಗೂ ಮಹಾತ್ಮರು ಮಾಡಿರುವ ತ್ಯಾಗ ಬಲಿದಾನಗಳು ಜನಮಾನಸದಿಂದ ಮರೆಯಾಗದಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಸ್ವಾತಂತ್ರ್ಯ ಬಂದಾಗ ನಮ್ಮ ದೇಶದ ಒಟ್ಟು ಜನಸಂಖ್ಯೆ 38 ಕೋಟಿ. ಈಗ ಅದಕ್ಕೆ 100 ಕೋಟಿ ಸೇರಿದೆ. ಇದು ನಮಗೆ ದೊಡ್ಡ ಸವಾಲು. ಅದನ್ನು ಮೀರಿ ಬೆಳೆಯುವ ಅವಕಾಶವಿದೆ ಎಂದರು. ಪ್ರಧಾನಿ ನರೇಂದ್ರ ಮೋದಿ ಅವರ ಆಶಯದಂತೆ ದೇಶದ ಪ್ರತಿ ಮನೆಯಲ್ಲೂ ತಿರಂಗಾ ಹಾರಾಡುತ್ತಿದೆ. ಎಲ್ಲ ನಾಗರಿಕರನ್ನು ದೇಶಾಭಿಮಾನದ ಕಡೆಗೆ ಭಾವನಾತ್ಮಕವಾಗಿ ಸ್ಪಂ ದಿಸುವ ವಾತಾವರಣ ಸೃಷ್ಟಿಸಲಾಗಿದೆ ಎಂದು ತಿಳಿಸಿದರು.

ಶಾಸಕ ಜಿ.ಎಚ್‌. ತಿಪ್ಪಾರೆಡ್ಡಿ, ನಗರಸಭೆ ಅಧ್ಯಕ್ಷೆ ಬಿ. ತಿಪ್ಪಮ್ಮ, ನಗರಾಭಿವೃದ್ಧಿ ಪ್ರಾ ಧಿಕಾರದ ಅಧ್ಯಕ್ಷ ಜಿ.ಟಿ. ಸುರೇಶ್‌, ಜಿಲ್ಲಾ ಧಿಕಾರಿ ಕವಿತಾ ಎಸ್‌. ಮನ್ನಿಕೇರಿ, ಜಿಪಂ ಸಿಇಒ ಡಾ| ಕೆ. ನಂದಿನಿದೇವಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ. ಪರಶುರಾಮ, ಅಪರ ಜಿಲ್ಲಾ ಧಿಕಾರಿ ಇ. ಬಾಲಕೃಷ್ಣ, ಉಪವಿಭಾಗಾ ಧಿಕಾರಿ ಆರ್‌. ಚಂದ್ರಯ್ಯ ಸೇರಿದಂತೆ ಜಿಲ್ಲೆ, ತಾಲೂಕು ಮಟ್ಟದ ಅ ಧಿಕಾರಿಗಳು ಭಾಗವಹಿಸಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next