Advertisement

ಇಂದು ಅತೃಪ್ತ ಶಾಸಕರ ವಿಚಾರಣೆ

12:04 AM Jul 11, 2019 | Team Udayavani |

ಬೆಂಗಳೂರು: ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಜನವರಿಯಲ್ಲಿ ಕಾಂಗ್ರೆಸ್‌ ನೀಡಿದ್ದ ದೂರಿನ ಅನ್ವಯ ಗುರುವಾರ ಸ್ಪೀಕರ್‌ ರಮೇಶ್‌ ಕುಮಾರ್‌ ಅವರು ಗೋಕಾಕ್‌ ಶಾಸಕ ರಮೇಶ ಜಾರಕಿಹೊಳಿ ಹಾಗೂ ಅಥಣಿ ಶಾಸಕ ಮಹೇಶ್‌ ಕುಮಟಳ್ಳಿ ಅವರನ್ನು ವಿಚಾರಣೆಗೆ ಕರೆದಿದ್ದಾರೆ.

Advertisement

ಪಕ್ಷಾಂತರ ನಿಷೇಧ ಕಾಯ್ದೆ ಅಡಿಯಲ್ಲಿ ರಮೇಶ್‌ ಜಾರಕಿಹೊಳಿ, ಮಹೇಶ್‌ ಕುಮಟಳ್ಳಿ ವಿರುದ್ಧ ಕ್ರಮ ಕೈಗೊಂಡು ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸುವಂತೆ ಕಾಂಗ್ರೆಸ್‌ ನಾಯಕರು ಆಗ್ರಹಿಸಿದ್ದರು. ಅವರ ಮನವಿ ಮೇರೆಗೆ ಗುರುವಾರ ಕಾಂಗ್ರೆಸ್‌ನ ಇಬ್ಬರು ಶಾಸಕರಿಗೆ ವಿಚಾರಣೆಗೆ ಹಾಜರಾಗುವಂತೆ ಸ್ಪೀಕರ್‌ ನೋಟಿಸ್‌ ನೀಡಿದ್ದಾರೆ.

ವಿಚಾರಣೆಗೆ ಇಬ್ಬರೂ ಹಾಜರಾಗುತ್ತಾರಾ?, ಇಲ್ಲವ? ಎನ್ನುವುದು ಕುತೂಹಲ ಮೂಡಿಸಿದೆ. ಈ ಇಬ್ಬರು ಶಾಸಕರನ್ನು ಸ್ಪೀಕರ್‌ ರಮೇಶ್‌ ಕುಮಾರ್‌ ಅವರು ಅನರ್ಹಗೊಳಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next