Advertisement
ಗುವಿವಿಯಲ್ಲಿ ಶುಕ್ರವಾರ ಮಹರ್ಷಿ ವಾಲ್ಮೀಕಿ ಬುಡಕಟ್ಟು ಅಧ್ಯಯನ ಮತ್ತು ಸಂಶೋಧನಾ ಕೇಂದ್ರ, ಬೆಂಗಳೂರಿನ ಬುಡಕಟ್ಟು ಕಲ್ಯಾಣ ನಿರ್ದೇಶನಾಲಯದ ಆಶ್ರಯದಲ್ಲಿ ಡಾ| ಬಿ.ಆರ್. ಅಂಬೇಡ್ಕರ್ ಭವನದಲ್ಲಿ ನಡೆಯುತ್ತಿದ್ದ ಭಾರತೀಯ ಸಮಾಜಕ್ಕೆ ಮಹರ್ಷಿ ವಾಲ್ಮೀಕಿ ಅವರ ಕೊಡುಗೆ, ಕರ್ನಾಟಕ ರಾಜ್ಯದ ಬುಡಕಟ್ಟು ಸಮುದಾಯಗಳ ಸಮಸ್ಯೆಗಳು ಮತ್ತು ಸವಾಲುಗಳು ಕುರಿತು ಆಯೋಜಿಸಿದ್ದರಾಷ್ಟ್ರೀಯ ವಿಚಾರ ಸಂಕಿರಣದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.
ಮಾರ್ಪಾಟುಗಳು ಆಗುತ್ತಿವೆ. ಮೂಲ ಬುಡಕಟ್ಟು ಸಂಸ್ಕೃತಿ ಮಾಯವಾಗುವ ಹಂತಕ್ಕೆ ತಲುಪಿದೆ. ಭಾರತ ಸರಕಾರ ಹಾಗೂ ಆಯಾ ರಾಜ್ಯ ಸರಕಾರಗಳು ಸಂಶೋಧನೆಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕು. ಹಣದ ನೆರವು ನೀಡಬೇಕು. ಈ ಕುರಿತು ವಿಷಯ ತಜ್ಞರು, ಸಂಸ್ಕೃತಿ ಸಂಶೋಧಕರು ಕೂಡ ಹೆಚ್ಚು ಆಸಕ್ತಿವಹಿಸಬೇಕು ಎಂದರು. ಅಧ್ಯಕ್ಷತೆ ವಹಿಸಿದ್ದ ಗುವಿವಿ ಕುಲಪತಿ ಪ್ರೊ| ಎಸ್.ಆರ್.ನಿರಂಜನ್ ಮಾತನಾಡಿ, ಎರಡು ದಿನಗಳಿಂದ ವಿವಿಯಲ್ಲಿ ಭಾರತೀಯ ಸಮಾಜಕ್ಕೆ ಮಹರ್ಷಿ ವಾಲ್ಮೀಕಿ ಅವರ ಕೊಡುಗೆ ಮತ್ತು ಕರ್ನಾಟಕ ರಾಜ್ಯದ ಬುಡಕಟ್ಟು ಸಮುದಾಯಗಳ ಸಮಸ್ಯೆಗಳು ಮತ್ತು ಸವಾಲುಗಳು ಕುರಿತು ಹಲವಾರು ತಜ್ಞರು ಮಾತನಾಡಿದ್ದಾರೆ. ತಮ್ಮ ಅಭಿಪ್ರಾಯ ಮಂಡಿಸಿದ್ದಾರೆ. ಈ ನಿಟ್ಟಿನಲ್ಲಿ ನಿರಂತರ ಸಂಶೋಧನೆ ಅಗತ್ಯವೆಂದು ಹಾಗೂ ಸಂಶೋಧಕರು ಹೆಚ್ಚು ಬುಡಕಟ್ಟು ಸಂಸ್ಕೃತಿಯನ್ನು ಇನ್ನಷ್ಟು ಸಂಶೋಧನೆ
ಒಳಪಡಿಸಬೇಕು ಎಂದರು.
Related Articles
Advertisement
ಕುಲಸಚಿವ ಡಾ| ದಯಾನಂದ ಅಗಸರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿವಿಯ ಮಹರ್ಷಿ ವಾಲ್ಮೀಕಿ ಬುಡಕಟ್ಟು ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ನಿರ್ದೇಶಕ ಬಿ.ಶೀರಾಮಲು ನಿರೂಪಿಸಿದರು. ರಾಜ್ಯ ಬುಡಕಟ್ಟು ಕಲ್ಯಾಣ ನಿರ್ದೇಶನಾಲಯದ ಕೆ.ರೇವಣಪ್ಪ ವಂದಿಸಿದರು. ಗುವಿವಿ ಪ್ರಾಧ್ಯಾಪಕರು, ವಿದ್ಯಾರ್ಥಿಗಳು ಹಾಗೂ ಇತರರು ಇದ್ದರು.