Advertisement

ರಾಷ್ಟ್ರಪತಿ ಹುದ್ದೆಗೆ ಬುಡಕಟ್ಟು ಮಹಿಳೆ ಸಾಮಾಜಿಕ ನ್ಯಾಯವಲ್ಲ: ಸಿದ್ದರಾಮಯ್ಯ

03:17 PM Jun 23, 2022 | Team Udayavani |

ಮೈಸೂರು : ರಾಷ್ಟ್ರಪತಿ ಹುದ್ದೆಗೆ ಎನ್ ಡಿಎ ಬುಡಕಟ್ಟು ಮಹಿಳೆ ದ್ರೌಪದಿ ಮುರ್ಮು ಅವರನ್ನು ಆಯ್ಕೆ ಮಾಡಿರುವುದು ”ಸಾಮಾಜಿಕ ನ್ಯಾಯವೂ ಅಲ್ಲ, ವಿಶೇಷವೂ ಅಲ್ಲ” ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಗುರುವಾರ ಹೇಳಿಕೆ ನೀಡಿದ್ದಾರೆ.

Advertisement

ಸುದ್ದಿಗಾರರೊಂದಿಗೆ ಮಾತನಾಡಿ, ಆ ರೀತಿ ಇದ್ದರೆ ಆರ್ ಎಸ್ ಎಸ್ ಮುಖ್ಯ ಸರಸಂಘ ಚಾಲಕರಾಗಿ ಆಯ್ಕೆ ಮಾಡಲಿ. ಮೋಹನ್ ಭಾಗವತ್ ಸ್ಥಾನಕ್ಕೆ ದ್ರೌಪದಿ ಮುರ್ಮುರಂತಹ ಮಹಿಳೆಯನ್ನು ತರಲಿ. ಆಕೆ ಬಿಜೆಪಿಯವರೇ ಆಗಿದ್ದಾರೆ. ರಾಜ್ಯಪಾಲೆ ಸೇರಿ ಹಲವು ಹುದ್ದೆ ಅಲಂಕರಿಸಿದ್ದಾರೆ. ರಾಷ್ಟ್ರಪತಿಯಾಗಿ ಅಂತಹ ಕೆಲಸ ಮಾಡಲು ಇವರು ಬಿಡುವುದಿಲ್ಲ.ಹಿಂದೆ ರಾಜೇಂದ್ರ ಪ್ರಸಾದ್ ಅವರು ಮಾಡಿದಂತೆ ಕೆಲಸ ಮಾಡಲು ಆಗುತ್ತದಾ? ರಾಮನಾಥ್ ಕೋವಿಂದ್ ಕೂಡ ರಾಷ್ಟ್ರಪತಿ ಆಗಿದ್ದರು. ಅವರು ಏನು ಮಾಡಿದರು ? ಇದು ಅವರಂತೆ ನಾಮಕವಾಸ್ಥೆಗೆ ಮಾಡುತ್ತಿದ್ದಾರೆ ಎಂದರು.

ಕರ್ನಾಟಕದ ಬಿಜೆಪಿಯ ಚಾಳಿ ದೇಶಕ್ಕೆ
ಮಹರಾಷ್ಟ್ರದ ರಾಜಕೀಯ ಬಿಕ್ಕಟ್ಟಿನ ಕುರಿತು ಪ್ರತಿಕ್ರಿಯಿಸಿ, ಬಿಜೆಪಿ ಭ್ರಷ್ಟಾಚಾರದ ಹಣದಲ್ಲಿ ಆಪರೇಷನ್ ಕಮಲಕ್ಕೆ ಮುಂದಾಗಿದೆ.ಇದು ಪ್ರಜಾಪ್ರಭುತ್ವಕ್ಕೆ ಮಾರಕ. ಕರ್ನಾಟಕದ ಬಿಜೆಪಿಯ ಚಾಳಿ ದೇಶಕ್ಕೆ ಹಬ್ಬಿಸಿದ್ದಾರೆ. ಇದನ್ನು ತಡೆಗಟ್ಟಲು ಪಕ್ಷಾಂತರ ಕಾಯ್ದೆ ತಿದ್ದುಪಡಿ ಆಗಬೇಕು. ಒಂದು ಪಕ್ಷದಿಂದ ಆಯ್ಕೆಯಾದವನು ಬೇರೆ ಸ್ಥಾನಕ್ಕೆ ಹೋಗದಂತೆ ತಡೆಯಬೇಕು. ಹೋದರೆ 10 ವರ್ಷ ಆತ ಚುನಾವಣೆಗೆ ನಿಲ್ಲದಂತೆ ಆದೇಶ ಮಾಡಬೇಕು. ಪ್ರಜಾಪ್ರಭುತ್ವದ ಉಳಿವಿಗೆ ಇದರ ಅವಶ್ಯಕತೆ ಇದೆ. ಆಪರೇಷನ್ ಕಮಲ ಹುಟ್ಟು ಹಾಕಿದ್ದೇ ಬಿಜೆಪಿಯವರು.
2008ರಲ್ಲಿ ಯಡಿಯೂರಪ್ಪ ಮೊದಲ ಆಪರೇಷನ್ ಕಮಲ ಮಾಡಿದರು.ಎಲ್ಲೂ ಅವರಿಗೆ ಬಹುಮತ ಬಂದಿಲ್ಲ. ಎಲ್ಲಾ ಕಡೆ ಹಣ ಕೊಟ್ಟು ಶಾಸಕರನ್ನು ಖರೀದಿಸಿ ಸರ್ಕಾರ ಮಾಡಿದ್ದಾರೆ ಎಂದು ಕಿಡಿ ಕಾರಿದರು.

ಇದನ್ನೂ ಓದಿ : ದ್ರೌಪದಿ ಮುರ್ಮು ಭೇಟಿ ಮಾಡಿದ ಪ್ರಧಾನಿ ನರೇಂದ್ರ ಮೋದಿ

ಗಮನಕ್ಕೆ ಬಂದಿಲ್ಲ
ರಮೇಶ್ ಜಾರಕಿಹೋಳಿ ಪ್ರಕರಣ ಮತ್ತೆ ಸಿಬಿಐಗೆ ವಿಚಾರ ನನ್ನ ಗಮನಕ್ಕೆ ಬಂದಿಲ್ಲ. ಸತ್ಯ ಗೊತ್ತಿಲ್ಲದೆ ನಾನು ಮಾತನಾಡುವುದಿಲ್ಲ ಎಂದರು.

Advertisement

ಪ್ರಧಾನಿ ನರೇಂದ್ರ ಮೋದಿ ರಾಜ್ಯ ಭೇಟಿ ವಿಚಾರಕ್ಕೆ ಪ್ರತಿಕ್ರಿಯಿಸಿ, ಮೋದಿ ಹೇಳಿದ ಡಬಲ್ ಇಂಜಿನ್ ಸರ್ಕಾರ ಏನು ಮಾಡಿದೆ ?ಅದು ಮಾಡಿರುವ ಅಭಿವೃದ್ಧಿ ಕಾರ್ಯದ ಪಟ್ಟಿ ಕೊಡಿ. ಸುಮ್ಮನೇ ಸುಳ್ಳು ಹೇಳಿ ಮೋದಿ ಹೋಗಿದ್ದಾರೆ. ಮೋದಿ ಏನೂ ಮಾಡುವುದಿಲ್ಲ ಅನ್ನುವುದು ರಾಜ್ಯ ನಾಯಕರಿಗೆ ಗೊತ್ತಿದೆ. ಅದಕ್ಕೆ ಅವರು ಯಾವುದೇ ಮನವಿ ನೀಡಿಲ್ಲ ಎಂದರು.

ಮೋದಿ ಕಾರ್ಯಕ್ರಮಕ್ಕೆ 25 ಕೋಟಿ ರೂಪಾಯಿಗಿಂತ ಹೆಚ್ಚು ಖರ್ಚು ಮಾಡಲಾಗಿದೆ. ರಸ್ತೆ ಆಗಿದಷ್ಟೇ ಜನರಿಗೆ ಆದ ಲಾಭ ಎಂದರು.

ಜೆಡಿಎಸ್ ಶಾಸಕ ಜಿ. ಟಿ. ದೇವೇಗೌಡ ವಿಚಾರದ ಕುರಿತು ಪ್ರತಿಕ್ರಿಯಿಸಿ, ಬೇರೆ ಪಕ್ಷದ ಶಾಸಕನ ಬಗ್ಗೆ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ.ಹೋಗಿ, ಅವರು ಮೈಸೂರಿನಲ್ಲೇ ಇದ್ದಾರೆ. ಅವರನ್ನೇ ಕೇಳಿ, ನನ್ನನ್ನು ಏಕೆ ಕೇಳುತ್ತೀರಿ? ಎಂದು ಗರಂ ಆದರು.

Advertisement

Udayavani is now on Telegram. Click here to join our channel and stay updated with the latest news.

Next