Advertisement

Tribute: ರಾಜೌರಿಯಲ್ಲಿ ಹುತಾತ್ಮರಾದ 5 ಸೇನಾ ಯೋಧರಿಗೆ ಭಾವಪೂರ್ಣ ಶ್ರದ್ಧಾಂಜಲಿ

01:09 PM Nov 24, 2023 | sudhir |

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಹುತಾತ್ಮರಾದ ಐವರು ವೀರ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ರೋಮಿಯೋ ಫೋರ್ಸ್ ಪ್ರಧಾನ ಕಚೇರಿಯಲ್ಲಿ ನಡೆದ ಶ್ರದ್ಧಾಂಜಲಿ ಸಭೆಯಲ್ಲಿ ಹಲವಾರು ಹಿರಿಯ ಸೇನಾ ಅಧಿಕಾರಿಗಳು ವೀರಯೋಧರಿಗೆ ಗೌರವ ಸಲ್ಲಿಸಿದರು ಮತ್ತು ಅವರ ಪಾರ್ಥೀವ ಶರೀರದ ಮೇಲೆ ಪುಷ್ಪನಮನ ಸಲ್ಲಿಸಿದರು.

Advertisement

ಲೆಫ್ಟಿನೆಂಟ್ ಜನರಲ್ ಮನೋಜ್ ಸಿನ್ಹಾ, ಡಿಜಿಪಿ ರಶ್ಮಿ ರಂಜನ್, ಮತ್ತು ಉತ್ತರ ಸೇನಾ ಕಮಾಂಡರ್ ಲೆಫ್ಟಿನೆಂಟ್ ಜನರಲ್ ಉಪೇಂದ್ರ ದ್ವಿವೇದಿ ವೀರಯೋಧರಿಗೆ ಗೌರವ ಸಲ್ಲಿಸಿದರು.

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ದ್ವಿವೇದಿ, ನಾವು ನಮ್ಮ ಸೇನಾ ಸಿಬ್ಬಂದಿಯನ್ನು ಕಳೆದುಕೊಂಡಿರುವುದು ದುಃಖದ ಸಂಗತಿ ಆದರೆ ನಮ್ಮ ಯೋಧರು ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆ. ನಮ್ಮ ವೀರ ಸೈನಿಕರು ತಮ್ಮ ಪ್ರಾಣದ ಬಗ್ಗೆ ಯೋಚಿಸದೆ ತರಬೇತಿ ಪಡೆದ ವಿದೇಶಿ ಭಯೋತ್ಪಾದಕರನ್ನು ನಿರ್ಮೂಲನೆ ಮಾಡುವ ಕೆಲಸವನ್ನು ಮಾಡಿದ್ದಾರೆ, ಇದು ಭಯೋತ್ಪಾದಕರಿಗೆ ದೊಡ್ಡ ಹಿನ್ನಡೆಯಾಗಿದೆ ಎಂದು ಹೇಳಿದರು.

ಎರಡು ದಿನಗಳ ಕಾಲ ದಾರಂಸಾಲ್ನ ಬಾಜಿಮಲ್ ಪ್ರದೇಶದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್ ಕೌಂಟರ್ ನಲ್ಲಿ ಐವರು ಯೋಧರು ಹುತಾತ್ಮರಾಗಿದ್ದು ಈ ವೇಳೆ ಇಬ್ಬರು ಲಷ್ಕರ್ ಉಗ್ರರು ಹತರಾಗಿದ್ದಾರೆ.

ಉಗ್ರರ ವಿರುದ್ಧ ಹೋರಾಡುವಾಗ ಪ್ರಾಣತ್ಯಾಗ ಮಾಡಿದವರಲ್ಲಿ ಕರ್ನಾಟಕದ ಮಂಗಳೂರಿನ ನಿವಾಸಿ ಕ್ಯಾಪ್ಟನ್ ಎಂ.ವಿ.ಪ್ರಾಂಜಲ್, ಉತ್ತರ ಪ್ರದೇಶದ ಆಗ್ರಾ ನಿವಾಸಿ ಕ್ಯಾಪ್ಟನ್ ಶುಭಂ ಗುಪ್ತಾ, ಜಮ್ಮು ಮತ್ತು ಕಾಶ್ಮೀರದ ಪೂಂಚ್ ನಿವಾಸಿ ಹವಾಲ್ದಾರ್ ಅಬ್ದುಲ್ ಮಜೀದ್, ಉತ್ತರಾಖಂಡ್ನ ನೈನಿತಾಲ್​ನಿಂದ ಲ್ಯಾನ್ಸ್ ನಾಯಕ್ ಸಂಜಯ್ ಬಿಷ್ಟ್ ಮತ್ತು ಉತ್ತರ ಪ್ರದೇಶದ ಅಲಿಗಢದಿಂದ ಪ್ಯಾರಾಟ್ರೂಪರ್ ಸಚಿನ್ ಲಾರ್​ ಸೇರಿದ್ದಾರೆ.

Advertisement

ಇದನ್ನೂ ಓದಿ: Odisha: ಕೋಣೆಯೊಳಗೆ ಹಾವು ಬಿಟ್ಟು ಪತ್ನಿ, ಮಗುವನ್ನು ಸಾಯಿಸಿದ ವ್ಯಕ್ತಿಯ ಬಂಧನ

 

Advertisement

Udayavani is now on Telegram. Click here to join our channel and stay updated with the latest news.

Next