ಮಂಗಳೂರು: ಸಂವಿಧಾನ ಶಿಲ್ಪಿ ಡಾ| ಬಿ.ಆರ್. ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿನವನ್ನು ಜಿಲ್ಲಾಡಳಿತದ ವತಿಯಿಂದ ನಗರದ ಕುದ್ಮಲ್ ರಂಗರಾವ್ ಪುರಭವನದ ಮುಂಭಾಗದಲ್ಲಿ ಬುಧವಾರ ಆಚರಿಸಲಾಯಿತು.
ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್, ಪೊಲೀಸ್ ಅಧೀಕ್ಷಕ ರಿಷ್ಯಂತ್ ಕುಮಾರ್, ಮಹಾ ನಗರ ಪಾಲಿಕೆ ಆಯುಕ್ತ ಆನಂದ್ ಸಿ.ಎಲ್. ಅವರು ಡಾ| ಬಿ.ಆರ್. ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಗೌರವ ಸಲ್ಲಿಸಿದರು.
ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಮಾಲತಿ, ಐಟಿಡಿಪಿ ಯೋಜನಾ ಸಮನ್ವಾಯಾಧಿಕಾರಿ ಶಿವಕುಮಾರ್, ಜಿಲ್ಲಾ ವಾರ್ತಾಧಿಕಾರಿ ಖಾದರ್ ಶಾ, ಮಂಗಳೂರು ತಾಲೂಕು ಸಹಾಯಕ ನಿರ್ದೇಶಕ ಸುರೇಶ್ ಅಡಿಗ ಉಪಸ್ಥಿತರಿದ್ದರು.
ಮಣಿಪಾಲ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಬುಧವಾರ ಸಂವಿಧಾನಶಿಲ್ಪಿ ಡಾ| ಬಿ.ಆರ್. ಅಂಬೇಡ್ಕರ್ ಅವರ 67ನೇ ಪುಣ್ಯಸ್ಮರಣೆಯ ಪ್ರಯುಕ್ತ ಜಿಲ್ಲಾಧಿಕಾರಿ ಸಂಕೀರ್ಣದ ಮುಂಭಾಗದಲ್ಲಿರುವ ಡಾ| ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಹಾಗೂ ಪುಷ್ಪ ನಮನ ಸಲ್ಲಿಸಲಾಯಿತು.
ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ, ಜಿಪಂ ಸಿಇಒ ಪ್ರಸನ್ನ ಎಚ್., ಜಿಲ್ಲಾ ವರಿಷ್ಠಾಧಿಕಾರಿ ಡಾ.| ಅರುಣ್ ಕೆ., ಅಪರ ಜಿಲ್ಲಾಧಿಕಾರಿ ಮಮತಾದೇವಿ ಜಿ.ಎಸ್., ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಅನಿತಾ ವಿ. ಮಡ್ಲೂರ್, ಅಂಬೇಡ್ಕರ್ ಅಭಿವೃದ್ಧಿ ನಿಗಮದ ಶಂಕರ್ ಉಪಸ್ಥಿತರಿದ್ದರು.