Advertisement
ಹಿರಿಯೂರು ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಬುಧವಾರ ಜಿಲ್ಲಾ ಕಾಂಗ್ರೆಸ್‌ನಿಂದ ಹಮ್ಮಿಕೊಂಡಿದ್ದ ಕಾಡುಗೊಲ್ಲರ ಜತೆಗಿನ ಸಂವಾದದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಕಾಡುಗೊಲ್ಲರಿಗೆ ಮೀಸಲಾತಿ ಕಲ್ಪಿಸುವಂತೆ ಕೇಂದ್ರಕ್ಕೆ ಶಿಫಾರಸು ಮಾಡಿತ್ತು. ಕಾಡುಗೊಲ್ಲ ಸಮುದಾಯ ಹಟ್ಟಿಗಳಲ್ಲಿ ವಾಸ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಮುಂದೆ ನಮ್ಮ ಸರ್ಕಾರ ಬಂದಾಗ ಎಲ್ಲವನ್ನೂ ಕಂದಾಯ ಗ್ರಾಮ ಮಾಡುತ್ತೇವೆ ಎಂದರು.
Related Articles
– ಹಾಲಸ್ವಾಮಿ, ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ
Advertisement
ಕಾಡುಗೊಲ್ಲರ ಆಚಾರ-ವಿಚಾರ ಭಿನ್ನ. ಹಟ್ಟಿಗಳನ್ನು ಕಟ್ಟಿಕೊಂಡು ವಾಸಿಸುತ್ತೇವೆ. ನಮ್ಮ ಸಮುದಾಯಕ್ಕೆ ಶಿಕ್ಷಣದ ಕೊರತೆ ಇದ್ದು, ರಾಜಕೀಯ ಸ್ಥಾನಮಾನಗಳು ಸಿಕ್ಕಿಲ್ಲ. ಹಾಗಾಗಿ ಕಾಡುಗೊಲ್ಲ ಸಮುದಾಯಕ್ಕೆ ಎಸ್‌ಟಿ ಮೀಸಲಾತಿ ಕಲ್ಪಿಸಬೇಕು.– ಜಯಮ್ಮ ಬಾಲರಾಜ್, ವಿಧಾನ ಪರಿಷತ್ ಮಾಜಿ ಸದಸ್ಯೆ ತುಮಕೂರು ಹಾಗೂ ಚಿತ್ರದುರ್ಗ ಜಿಲ್ಲೆಗಳಲ್ಲಿ ಕಾಡುಗೊಲ್ಲರ ಸಂಖ್ಯೆ ಹೆಚ್ಚಾಗಿದ್ದರೂ ನಿರ್ಲಕ್ಷéಕ್ಕೊಳಗಾಗಿದ್ದಾರೆ. ಸಮುದಾಯಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ ಇದೆ.
– ಎ.ವಿ. ಉಮಾಪತಿ, ಮಾಜಿ ಶಾಸಕ ರಾಜ್ಯದಲ್ಲಿ ಕಾಡುಗೊಲ್ಲರದು ನೊಂದ ಸಮುದಾಯವಾಗಿದ್ದರೂ ಪರಿಶಿಷ್ಟರ ಸ್ಥಾನ ಸಿಕ್ಕಿಲ್ಲ. ಕೇಂದ್ರಕ್ಕೆ ಶಿಫಾರಸಾಗಿ ಎಂಟು ವರ್ಷವಾದರೂ ಮೀಸಲಾತಿ ಜಾರಿಯಾಗಿಲ್ಲ.
– ಮಹೇಶ್, ಕಾಡುಗೊಲ್ಲ ಸಮುದಾಯದ ಮುಖಂಡ