ಕೊಲ್ಕತ್ತಾ: ಪಶ್ಚಿಮ ಬಂಗಾಳದ ಗವರ್ನರ್ ಸಿ.ವಿ. ಆನಂದ ಬೋಸ್ ವಿರುದ್ಧ ಮಹಿಳೆಗೆ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ.
ರಾಜಭವನದಲ್ಲಿ ಕೆಲಸ ಮಾಡುತ್ತಿರುವ ಮಹಿಳೆಯೊಬ್ಬರು ಇಂದು ರಾಜ್ಯಪಾಲರನ್ನು ಭೇಟಿ ಮಾಡಲು ಹೋದಾಗ ಕಿರುಕುಳಕ್ಕೆ ಒಳಗಾಗಿರುವುದಾಗಿ ಆರೋಪಿಸಿದ್ದಾರೆ. ಅಲ್ಲದೇ, ಈ ಬಗ್ಗೆ ಕೋಲ್ಕತ್ತಾದ ಹರೇ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿರುವುದಾಗಿ ವರದಿಯಾಗಿದೆ.
ಆದರೆ ಈ ಆರೋಪವನ್ನು ರಾಜ್ಯಪಾಲರು ತಳ್ಳಿ ಹಾಕಿದ್ದು ನನ್ನ ಹೆಸರು ಕೆಡಿಸುವ ಉದ್ದೇಶದಿಂದ ಈ ರೀತಿಯ ಕೆಲಸ ಮಾಡಲಾಗಿದೆ ಎಂದು ಆರೋಪವನ್ನು ತಳ್ಳಿಹಾಕಿದ್ದಾರೆ.
ಚುನಾವಣಾ ರ‍್ಯಾಲಿ ನಿಮಿತ್ತ ಪಶ್ಚಿಮ ಬಂಗಾಳಕ್ಕೆ ಬಂದಿದ್ದ ಪ್ರಧಾನಿ ಮೋದಿ ಅವರು ರಾಜಭವನದಲ್ಲೇ ಗುರುವಾರ ರಾತ್ರಿ ಉಳಿದುಕೊಂಡಿದ್ದು ಇಂದು(ಶುಕ್ರವಾರ) ಚುನಾವಣಾ ರ‍್ಯಾಲಿಯಲ್ಲಿ ಭಾಗಿಯಾಗಲಿದ್ದಾರೆ ಈ ನಡುವೆ ರಾಜ್ಯಪಾಲರ ಕುರಿತು ಆರೋಪಗಳು ಕೇಳಿಬಂದಿವೆ.
ಈ ನಡುವೆ ಘಟನೆ ಕುರಿತಂತೆ ಟ್ವೀಟ್ ಮಾಡಿದ ತೃಣಮೂಲ ಕಾಂಗ್ರೆಸ್ ‘ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರಿಗೆ ನಾರಿ ಕಾ ಸಮ್ಮಾನ್‌ನಲ್ಲಿ ನಿಜವಾಗಿಯೂ ನಂಬಿಕೆ ಇಟ್ಟಿದ್ದರೆ ಈ ಸಂತ್ರಸ್ತರಿಗೆ ನ್ಯಾಯ ಒದಗಿಸಬೇಕು ಎಂದು ಹೇಳಿದ್ದಾರೆ.