Advertisement

BJP ಕಾರ್ಯಕರ್ತನ ಮೇಲೆ ಟಿಎಂಸಿ ಕಾರ್ಯಕರ್ತರಿಂದ ಮೂತ್ರ ವಿಸರ್ಜನೆ: ಆರೋಪ

06:36 PM Jul 15, 2023 | Team Udayavani |

ಪಶ್ಚಿಮ ಮಿಡ್ನಾಪುರ : ಮಧ್ಯ ಪ್ರದೇಶದ ಸಿಧಿ ಜಿಲ್ಲೆಯಲ್ಲಿ ಬುಡಕಟ್ಟು ಜನಾಂಗದ ವ್ಯಕ್ತಿ, ಉತ್ತರ ಪ್ರದೇಶದ ಸೋನಭದ್ರದಲ್ಲಿ ದಲಿತ ವ್ಯಕ್ತಿಯ ಮೇಲೆ ಮೂತ್ರ ವಿಸರ್ಜನೆ ಮಾಡಿದ ಕುರಿತು ದೇಶದಲ್ಲಿ ಆಕ್ರೋಶ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಕಾರ್ಯಕರ್ತನೊಬ್ಬನ ಮೇಲೆ ಟಿಎಂಸಿ ಕಾರ್ಯಕರ್ತರು ಮೂತ್ರ ವಿಸರ್ಜಿಸಿರುವ ಕುರಿತು ಆರೋಪ ಕೇಳಿ ಬಂದಿದೆ.

Advertisement

ಪಶ್ಚಿಮ ಮಿಡ್ನಾಪುರ ಜಿಲ್ಲೆಯಲ್ಲಿ ಗುರುವಾರ ರಾತ್ರಿ ನೀರು ಕೇಳಿದಾಗ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರು ಸ್ಥಳೀಯ ಬಿಜೆಪಿ ಕಾರ್ಯಕರ್ತನನ್ನು ಅಪಹರಿಸಿ, ಹಲ್ಲೆ ನಡೆಸಿ ಮುಖದ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾರೆ. ಇತ್ತೀಚೆಗೆ ಮುಕ್ತಾಯಗೊಂಡ ಪಂಚಾಯತ್ ಚುನಾವಣೆಯ ಪೋಲಿಂಗ್ ಏಜೆಂಟ್ ಆಗಿದ್ದ ಬಿಜೆಪಿ ಕಾರ್ಯಕರ್ತನನ್ನು ಆಡಳಿತ ಪಕ್ಷದ ಕಾರ್ಯಕರ್ತರು ಅಪಹರಿಸಿ ಗಾರ್ಬೆಟಾದ ಸ್ಥಳೀಯ ಪಕ್ಷದ ಕಚೇರಿಗೆ ಕರೆದೊಯ್ದು ಚಿತ್ರಹಿಂಸೆ ನೀಡಿ ಮುಖದ ಮೇಲೆ ಮೂತ್ರ ವಿಸರ್ಜಿಸಿ ಅವಮಾನ ಮಾಡಿದ್ದಾರೆ. ಶುಕ್ರವಾರ ತಡರಾತ್ರಿ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.ಈ ಕುರಿತು ಪ್ರಕರಣ ದಾಖಲಾಗಿದೆ. ಪಕ್ಷದ ಉಪಾಧ್ಯಕ್ಷ ಸಮಿತ್ ದಾಸ್ ನೇತೃತ್ವದ ಬಿಜೆಪಿ ನಿಯೋಗ ಶನಿವಾರ ಬೆಳಗ್ಗೆ ಆಸ್ಪತ್ರೆಗೆ ತೆರಳಿ ಸಂತ್ರಸ್ತನನ್ನು ಭೇಟಿಯಾಗಿದ್ದಾರೆ.

ತೃಣಮೂಲ ಕಾಂಗ್ರೆಸ್ ಶಾಸಕ ಮತ್ತು ಪಶ್ಚಿಮ ಮಿಡ್ನಾಪುರದ ಪಕ್ಷದ ಜಿಲ್ಲಾ ಸಂಯೋಜಕ ಅಜಿತ್ ಮೈತಿ ಅವರು ಆರೋಪಗಳನ್ನು ತಳ್ಳಿಹಾಕಿದ್ದಾರೆ.ಗರ್ಬೆಟಾ ಪ್ರದೇಶದಲ್ಲಿ ಚುನಾವಣೆಗಳು ಸಂಪೂರ್ಣವಾಗಿ ಶಾಂತಿಯುತವಾಗಿವೆ. ಯಾವುದೇ ರೀತಿಯ ಉದ್ವಿಗ್ನತೆಯನ್ನು ತಪ್ಪಿಸಲು ನಾವು ವಿಜಯೋತ್ಸವವನ್ನು ಸೀಮಿತ ಮತ್ತು ವಿನಮ್ರ ರೀತಿಯಲ್ಲಿ ಆಯೋಜಿಸಿದ್ದೇವೆ. ಈ ಪ್ರದೇಶದಲ್ಲಿ ಉದ್ವಿಗ್ನತೆಯನ್ನು ಸೃಷ್ಟಿಸಲು ಬಿಜೆಪಿ ಈಗ ಕಥೆಗಳನ್ನು ಕಟ್ಟುತ್ತಿದೆ ” ಎಂದು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next