ಪಶ್ಚಿಮ ಬಂಗಾಳ : ಪಶ್ಚಿಮ ಬಂಗಾಳ ಶಿಕ್ಷಕರ ನೇಮಕಾತಿ ಹಗರಣದಲ್ಲಿ ಸಂಬಂಧ ಹೊಂದಿರುವ ಆರೋಪದ ಮೇಲೆ ತೃಣಮೂಲ ಕಾಂಗ್ರೆಸ್ ಶಾಸಕ ಮಾಣಿಕ್ ಭಟ್ಟಾಚಾರ್ಯ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿದೆ.
ಮಾಣಿಕ್ ಭಟ್ಟಾಚಾರ್ಯ ಅವರನ್ನು ಜಾರಿ ನಿರ್ದೇಶನಾಲಯವು ಸೋಮವಾರ ರಾತ್ರಿ ತೀವ್ರ ವಿಚಾರಣೆ ನಡೆಸಿ ಇಂದು (ಮಂಗಳವಾರ) ಮುಂಜಾನೆ ಬಂಧಿಸಿದೆ.
ಈ ಹಿಂದೆ ಬಂಗಾಳದ ಮಾಜಿ ಸಚಿವ ಪಾರ್ಥ ಚಟರ್ಜಿ ಅವರನ್ನು ಬಂಧಿಸಲಾಗಿತ್ತು ಇದೀಗ ಮಾಣಿಕ್ ಭಟ್ಟಾಚಾರ್ಯ ಅವರ ಬಂಧನದೊಂದಿಗೆ ಹಗರಣಕ್ಕೆ ಸಂಬಂಧಿಸಿ ಬಂಧಿತರಾದ ಎರಡನೇ ತೃಣಮೂಲ ಕಾಂಗ್ರೆಸ್ ನ ನಾಯಕರಾಗಿದ್ದಾರೆ.
ಮಾಣಿಕ್ ಭಟ್ಟಾಚಾರ್ಯ ಈ ಹಿಂದೆ ಪಶ್ಚಿಮ ಬಂಗಾಳದ ಪ್ರಾಥಮಿಕ ಶಿಕ್ಷಣ ಮಂಡಳಿಯ ಅಧ್ಯಕ್ಷರಾಗಿದ್ದರು. ಅವರ ಅಧಿಕಾರಾವಧಿಯಲ್ಲಿಯೇ ನೇಮಕಾತಿ ಹಗರಣ ನಡೆದಿದೆ ಎಂದು ಇಡಿ ಮೂಲಗಳು ಹೇಳಿವೆ. ಹಗರಣದ ವಿಚಾರ ಬೆಳಕಿಗೆ ಬರುತ್ತಿದ್ದಂತೆ ಭಟ್ಟಾಚಾರ್ಯ ಅವರನ್ನು ಅಧ್ಯಕ್ಷ ಸ್ಥಾನದಿಂದ ತೆಗೆದುಹಾಕಲಾಗಿದೆ.
ಮಾಣಿಕ್ ಭಟ್ಟಾಚಾರ್ಯ ಅವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಇಡಿ ಅಧಿಕಾರಿಗಳು ಹೇಳಿದ್ದಾರೆ.
ಇದನ್ನೂ ಓದಿ : ಮಂಗಳೂರು : “ಚಾರಣ ಹಾದಿ’ ರಚಿಸಲು ಜಿಲ್ಲಾಡಳಿತ ಮುಂದು