ಅಗರ್ತಲಾ (ತ್ರಿಪುರ): ತ್ರಿಪುರಾದ ಮೊದಲ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಹಿಮಾಂಶು ಮೋಹನ್ ಚೌಧರಿ(84) ಅವರು ಮಂಗಳವಾರ ನಿಧನರಾದರು.
1971 ರ ಬಾಂಗ್ಲಾದೇಶ ವಿಮೋಚನಾ ಯುದ್ಧದ ಸಮಯದಲ್ಲಿ ಹಿಮಾಂಶು ಅವರು ತ್ರಿಪುರಾದ ಸೋನಮುರಾ ಉಪವಿಭಾಗದ ಉಪವಿಭಾಗಾಧಿಕಾರಿ ಆಗಿದ್ದರು. ಈ ವೇಳೆ ಅವರು 2.5 ಲಕ್ಷ ಬಾಂಗ್ಲಾದೇಶೀಯರಿಗೆ ಸಹಾಯ ಹಸ್ತವನ್ನು ಚಾಚಿದ್ದರು.
ನಿರಾಶ್ರಿತರಿಗೆ ಟೆಂಟ್‌ಗಳು ಮತ್ತು ತಾತ್ಕಾಲಿಕ ಅಡುಗೆ ಮನೆಗಳನ್ನು ಸ್ಥಾಪಿಸುವ ಮೂಲಕ ಆಹಾರ ಮತ್ತು ಆಶ್ರಯವನ್ನು ಒದಗಿಸುವಲ್ಲಿ ಯಶಸ್ವಿಯಾಗಿದ್ದರು.
ಚೌಧರಿ ಅವರಿಗೆ 1972 ರಲ್ಲಿ ಕೇಂದ್ರ ಸರ್ಕಾರವು ದೇಶದ ಮೂರನೇ ಅತ್ಯುನ್ನತ ನಾಗರಿಕ ಗೌರವವನ್ನು ನೀಡಿತು.
Related Articles
ಆಗಿನ ಬಾಂಗ್ಲಾದೇಶ ಸರ್ಕಾರವು ಅವರ ಕೊಡುಗೆಯನ್ನು ಶ್ಲಾಘಿಸಿ 2013 ರಲ್ಲಿ ಫ್ರೆಂಡ್ ಆಫ್ ಬಾಂಗ್ಲಾದೇಶ ಪದಕವನ್ನು ನೀಡಿ ಗೌರವಿಸಿತು.
ಸಂತಾಪ
ಹಿಮಾಂಶು ನಿಧನಕ್ಕೆ ತ್ರಿಪುರ ಸಿಎಂ ಮಾಣಿಕ್ ಸಹಾ ಸಂತಾಪ ಸೂಚಿಸಿದ್ದಾರೆ. ತ್ರಿಪುರಾದ ಮೊದಲ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಹಿಮಾಂಶು ಮೋಹನ್ ಚೌಧರಿ ಅವರು ನಿಧನರಾದ ಸುದ್ದಿ ತಿಳಿದು ತೀವ್ರ ದುಃಖವಾಗಿದೆ, ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ. ಓಂ ಶಾಂತಿ ಎಂದು ಕಂಬನಿ ಮಿಡಿದಿದ್ದಾರೆ.