Advertisement

ತ್ರಿವೇಂದ್ರ ಸಿಂಗ್ ಉತ್ತರಾಖಂಡ್ ಸಿಎಂ ಆಗಿ ಪದಗ್ರಹಣ; ಪ್ರಧಾನಿ ಹಾಜರ್

03:20 PM Mar 18, 2017 | Team Udayavani |

ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಆಪ್ತ, ತ್ರಿವೇಂದ್ರ ಸಿಂಗ್ ರಾವತ್ ಅವರು ಶನಿವಾರ ಉತ್ತರಾಖಂಡ್ ರಾಜ್ಯದ 9ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ರಾವತ್ ಜೊತೆ 9 ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.

Advertisement

ಕಳೆದ ತಿಂಗಳು ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಭೇರಿ ಬಾರಿಸಿತ್ತು. ಬಳಿಕ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಉತ್ತರಾಖಂಡ್ ಬಿಜೆಪಿ ಮಾಜಿ ಅಧ್ಯಕ್ಷ ತ್ರಿವೇಂದ್ರ ಸಿಂಗ್ ರಾವತ್ ಅವರನ್ನು ಶಾಸಕಾಂಗ ಪಕ್ಷದ ನಾಯಕನನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಲಾಗಿತ್ತು.

ಇಂದು ಡೆಹ್ರಾಡೂನ್ ನ ಪರೇಡ್ ಮೈದಾನದಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ರಾಜ್ಯಪಾಲ ಕೆಕೆ ಪೌಲ್ ರಾವತ್ ಗೆ ಪ್ರತಿಜ್ಞಾವಿಧಿ ಬೋಧಿಸಿದರು. ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸೇರಿದಂತೆ ಪಕ್ಷದ ಪ್ರಮುಖ ಗಣ್ಯರು ಭಾಗವಹಿಸಿದ್ದರು.

ಕಾಂಗ್ರೆಸ್ ಮುಖಂಡ, ಉತ್ತರಾಖಂಡ್ ಮಾಜಿ ಸಿಎಂ ಹರೀಶ್ ರಾವತ್ ಕೂಡಾ ತ್ರಿವೇಂದ್ರ ಸಿಂಗ್ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಂಡಿದ್ದರು. 

Advertisement

Udayavani is now on Telegram. Click here to join our channel and stay updated with the latest news.

Next