ಮುಸ್ಲಿಂ ಮಹಿಳೆಯರು (ವಿವಾಹದ ಹಕ್ಕುಗಳ ರಕ್ಷಣೆ) ಮಸೂದೆಗೆ ಲೋಕಸಭೆಯಲ್ಲಿ ಅಂಗೀಕಾರ ಸಿಕ್ಕಿದ್ದು, ರಾಜ್ಯಸಭೆಯಲ್ಲಿ ಅನುಮೋದನೆ ದೊರೆಯದ ಹಿನ್ನೆಲೆಯಲ್ಲಿ ಕೇಂದ್ರ ಈ ಬಗ್ಗೆ ಚಿಂತನೆ ನಡೆಸುತ್ತಿದೆ. ಅಧ್ಯಾದೇಶದ ಜತೆಗೆ ಸಂಸತ್ ಅಧಿವೇಶನ ಕರೆದು ಅದನ್ನು ಅಂಗೀಕರಿಸುವ ಬಗ್ಗೆಯೂ ಸಮಾಲೋಚನೆಗಳು ನಡೆದಿವೆ ಎಂದು “ದ ಇಕನಾಮಿಕ್ ಟೈಮ್ಸ್’ ವರದಿ ಮಾಡಿದೆ.
Advertisement
ಇತ್ತೀಚೆಗಷ್ಟೇ ಮುಕ್ತಾಯವಾದ ಚಳಿಗಾಲದ ಅಧಿವೇಶನದಲ್ಲಿ ಕಾಂಗ್ರೆಸ್, ಇತರ ವಿಪಕ್ಷಗಳ ಸದಸ್ಯರು ಮಸೂದೆಯನ್ನು ಸಂಸತ್‌ನ ಆಯ್ಕೆ ಸಮಿತಿಗೆ ಒಪ್ಪಿಸುವ ಬಗ್ಗೆ ಪಟ್ಟು ಹಿಡಿದಿದ್ದರು. ಆದರೆ ಸರಕಾರ ಈ ಪ್ರಸ್ತಾವವನ್ನು ಸಾರಾಸಗಟಾಗಿ ತಿರಸ್ಕರಿಸಿತ್ತು. ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳು ಆಡಳಿತ ಇರುವ ರಾಜ್ಯಗಳಲ್ಲಿ ಮಸೂದೆಗೆ ಬೆಂಬಲ ಸಿಕ್ಕಿದ್ದರೆ, ವಿಪಕ್ಷ ಕಾಂಗ್ರೆಸ್ ಮತ್ತು ಅದರ ಮಿತ್ರ ಪಕ್ಷಗಳ ರಾಜ್ಯ ಸರಕಾರಗಳು ಅದನ್ನು ವಿರೋಧಿಸಿವೆ. ಜ. 29ರಿಂದ ಆರಂಭವಾಗುವ ಬಜೆಟ್ ಅಧಿವೇಶನದಲ್ಲಿ ಮತ್ತೆ ಈ ಮಸೂದೆ ರಾಜ್ಯಸಭೆಯಲ್ಲಿ ಮಂಡನೆಯಾಗುವ ಸಾಧ್ಯತೆ ಇದೆ.