Advertisement

ನಕಲಿ ವೋಟರ್ ಐಡಿ ಪ್ರಕರಣ: ಶಾಸಕ ಮುನಿರತ್ನಗೆ ಮತ್ತಷ್ಟು ಸಂಕಷ್ಟ?

05:22 PM Nov 11, 2020 | keerthan |

ಬೆಂಗಳೂರು: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ನಕಲಿ ವೋಟರ್ ಐಡಿ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಮುನಿರತ್ನಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ.

Advertisement

ಆರ್.ಆರ್. ನಗರ ಕ್ಷೇತ್ರ ವ್ಯಾಪ್ತಿಯ ಅಪಾರ್ಟ್ ಮೆಂಟ್ ಒಂದರಲ್ಲಿ ನಕಲಿ ಮತದಾರರ ಗುರುತಿನ ಚೀಟಿ ಪತ್ತೆಯಾದ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ಸಂತೋಷ್ ಕುಮಾರ್ ಮತ್ತು ಆನಂದ್ ಕುಮಾರ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಎ.ಎಸ್. ಓಕ್ ನೇತೃತ್ವದ ಹೈಕೋರ್ಟ್ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಸಂಬಂಧಿಸಿದಂತೆ ಜಾಲಹಳ್ಳಿ ಪೊಲೀಸರು ನಡೆಸಿರುವ ತನಿಖೆಯನ್ನು ಪರಿಶೀಲಿಸಲು ಹಿರಿಯ ಐಪಿಎಸ್ ಅಧಿಕಾರಿಯೊಬ್ಬರನ್ನು ರಾಜ್ಯ ಪೊಲೀಸ್ ಮಹಾನಿರ್ದೇಶಕರು ನೇಮಿಸಬೇಕು. ತನಿಖೆ ಸರಿಯಾಗಿ ನಡೆದಿದೆಯೇ ಇಲ್ಲವೇ ಎನ್ನುವುದನ್ನು ಎಲ್ಲ ಆಯಾಮಗಳಿಂದ ಅವರು ಪರಿಶೀಲಿಸಬೇಕು. ತನಿಖೆ ನಡೆಸಬಹುದಾದ ಅಂಶಗಳೇನಾದರೂ ಇದ್ದರೆ ಅವುಗಳನ್ನೂ ಗುರುತಿಸಬೇಕು. ಪರಿಶೀಲನಾ ವರದಿಯನ್ನು ಡಿ.15ರೊಳಗೆ ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ಪೀಠ ನಿರ್ದೇಶಿಸಿತು.

2018ರ ವಿಧಾನಸಭಾ ಚುನಾವಣೆಯ ವೇಳೆಗೆ ಜಾಲಹಳ್ಳಿಯ ಅಪಾರ್ಟ್ ಮೆಂಟ್ ಒಂದರಲ್ಲಿ ಸಾವಿರಾರು ವೋಟಿಂಗ್ ಐಡಿ ಕಾರ್ಡುಗಳು ಹಾಗೂ ಆಗ ಮುನಿರತ್ನ ಸ್ಪರ್ಧಿಸಿದ್ದ ಪಕ್ಷದ ಕರಪತ್ರಗಳು ಪತ್ತೆಯಾಗಿದ್ದವು. ಚುನಾವಣೆಯಲ್ಲಿ ಮುನಿರತ್ನ ಅಕ್ರಮ ಎಸಗಿದ್ದಾರೆ ಎಂದು ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಎರಡು ದೂರುಗಳು ದಾಖಲಾಗಿದ್ದವು.

Advertisement

Udayavani is now on Telegram. Click here to join our channel and stay updated with the latest news.

Next