Advertisement

ಸರ್ಕಾರಕ್ಕೆ ನಾನೇ ಟ್ರಬಲ್‌ ಶೂಟರ್‌: ಸಿದ್ದು

06:00 AM Oct 01, 2018 | |

ಮೈಸೂರು: ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಸುಭದ್ರವಾಗಿದ್ದು, ಸರ್ಕಾರವನ್ನು ಅಸ್ಥಿರಗೊಳಿಸುವ ಯಾವುದೇ ಪ್ರಯತ್ನಕ್ಕೆ ಅವಕಾಶ
ನೀಡಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಜೆಡಿಎಸ್‌-ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರ ಐದು ವರ್ಷ ಆಡಳಿತ ಪೂರೈಸಲಿದೆ ಎಂದು ಪುನರುಚ್ಚರಿಸಿದರು. ಸರ್ಕಾರ ಅಸ್ಥಿರಗೊಳಿಸುವ ಪ್ರಯತ್ನ ಕೇವಲ ಮಾಧ್ಯಮಗಳ ಸೃಷ್ಟಿ. ಇದರಲ್ಲಿ ಸತ್ಯಾಂಶವಿಲ್ಲ. ಸುಮ್ಮಿಶ್ರ ಸರ್ಕಾರಕ್ಕೆ ನಾನು ಟ್ರಬಲ್‌ ಶೂಟರ್‌ ಆಗಿರುವುದರಿಂದ ನನ್ನನ್ನು ಸಮನ್ವಯ ಸಮಿತಿಯ ಅಧ್ಯಕ್ಷರನ್ನಾಗಿ ಮಾಡಲಾಗಿದೆ. ಅಗತ್ಯ ಸಂದರ್ಭದಲ್ಲಿ ಮಾತ್ರ ಸಮನ್ವಯ ಸಮಿತಿಯ ಸಭೆ ನಡೆಯಲಿದೆ.

ಸಣ್ಣ ಪುಟ್ಟ ಸಮಸ್ಯೆ, ವ್ಯತ್ಯಾಸಗಳನ್ನು ಅಲ್ಲಲ್ಲೇ ಪರಿಹರಿಸಿಕೊಳ್ಳಲಾಗುವುದು ಎಂದರು.ಅ.3ರ ನಂತರ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಸಚಿವ ಸಂಪುಟ ವಿಸ್ತರಣೆಯಾಗಲಿದೆ. ಯಾರಿಗೆ ಸಚಿವಗಿರಿ ಕೊಡಬೇಕು ಎನ್ನುವುದನ್ನು ಪಕ್ಷದ ಹೈಕಮಾಂಡ್‌ ನಿರ್ಧರಿಸಲಿದೆ ಎಂದರು.

ವರ್ಚಸ್ಸು ಉಳಿಸಿಕೊಂಡ ಸಿದ್ದು: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಪರಾಭವಗೊಂಡರೂ ಸಿದ್ದರಾಮಯ್ಯನವರು ತಮ್ಮ ವರ್ಚಸ್ಸನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ನೂರಾರು ಮುಖಂಡರು, ಕಾರ್ಯಕರ್ತರು ಸಿದ್ದರಾಮಯ್ಯ ನಿವಾಸದ ಮುಂದೆ ಭಾನುವಾರ ಜಮಾಯಿಸಿದ್ದರು.

ಮೈಸೂರು ಮಹಾನಗರ ಪಾಲಿಕೆ ಮೇಯರ್‌ ಆಯ್ಕೆ, ದಸರಾ ಮಹೋತ್ಸವದ ಉಪ ಸಮಿತಿಗಳಿಗೆ ಹೆಸರನ್ನು ನೀಡುವ ಕುರಿತು
ಸೇರಿದಂತೆ ಹಲವು ವಿಚಾರಗಳ ಬಗ್ಗೆ ಸಮಾಲೋಚನೆ ನಡೆಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next