Advertisement

ಎಸ್‌ಪಿ ನಾಯಕನ ಕಾರನ್ನೇ 500 ಮೀಟರ್‌ ದೂರ ಎಳೆದೊಯ್ದ ಟ್ರಕ್ : ಅಪಘಾತದ ವಿಡಿಯೋ ವೈರಲ್

10:50 AM Aug 08, 2022 | Team Udayavani |

ನವದೆಹಲಿ : ಉತ್ತರ ಪ್ರದೇಶದ ಮೈನ್‌ಪುರಿಯಲ್ಲಿ ಸಮಾಜವಾದಿ ಪಕ್ಷದ ನಾಯಕ ದೇವೇಂದ್ರ ಸಿಂಗ್ ಯಾದವ್ ಅವರು ಪ್ರಯಾಣಿಸುತ್ತಿದ್ದ ಕಾರಿಗೆ ಟ್ರಕ್ ವೊಂದು ಢಿಕ್ಕಿ ಹೊಡೆದು ಕಾರನ್ನು ಸುಮಾರು 500 ಮೀಟರ್‌ಗೂ ಹೆಚ್ಚು ದೂರ ಎಳೆದೊಯ್ದ ಘಟನೆ ಭಾನುವಾರ ರಾತ್ರಿ ನಡೆದಿದೆ.

Advertisement

ತನ್ನ ಪಕ್ಷದ ಕಚೇರಿಯಿಂದ ಮನೆಗೆ ತೆರಳುತ್ತಿದ್ದ ವೇಳೆ ವೇಗವಾಗಿ ಬಂದ ಟ್ರಕ್ ಕಾರಿಗೆ ಢಿಕ್ಕಿ ಹೊಡೆದಿದ್ದು ಸುಮಾರು ಐನೂರು ಮೀಟರ್ ದೂರದ ವರೆಗೆ ಎಳೆದೊಯ್ದಿದೆ ಅದೃಷ್ಟವಶಾತ್ ಘಟನೆಯಲ್ಲಿ ಸಮಾಜವಾದಿ ಪಕ್ಷದ ನಾಯಕ ದೇವೇಂದ್ರ ಸಿಂಗ್ ಯಾದವ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಟ್ರಕ್ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಘಟನೆಯ ದೃಶ್ಯವನ್ನು ಅಲ್ಲಿನ ಜನ ಸೆರೆಹಿಡಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಇದನ್ನೂ ಓದಿ : ದಕ್ಷಿಣಕನ್ನಡ ಜಿಲ್ಲೆಯಲ್ಲಿ ರಾತ್ರಿ ನಿರ್ಬಂಧ ರದ್ದು ; ನಿಷೇಧಾಜ್ಞೆ ವಿಸ್ತರಣೆ

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next