ಹೊಸದಿಲ್ಲಿ: ದೆಹಲಿ-ಹರಿಯಾಣ ಗಡಿಯಲ್ಲಿ ರೈತರ ಪ್ರತಿಭಟನಾ ಸ್ಥಳದ ಬಳಿ ವೇಗವಾಗಿ ಬಂದ ಟ್ರಕ್ಕೊಂದು ಡಿವೈಡರ್ ಮೇಲೆ ಹರಿದ ಪರಿಣಾಮ ಮೂವರು ಮಹಿಳೆಯರು ಸಾವನ್ನಪ್ಪಿದ ಘಟನೆ ನಡೆದಿದೆ. ಟ್ರಕ್ ಢಿಕ್ಕಿ ಹೊಡೆದಾಗ ಮಹಿಳೆಯರು ಡಿವೈಡರ್ ಮೇಲೆ ಕುಳಿತು ಆಟೋ ರಿಕ್ಷಾಕ್ಕಾಗಿ ಕಾಯುತ್ತಿದ್ದರು ಎನ್ನಲಾಗಿದೆ.
ಅಪಘಾತದ ಸ್ಥಳದಿಂದ ಟ್ರಕ್ ಚಾಲಕ ಓಡಿಹೋಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ:10 ರೂ. ಗೆ ನಡೆಯಿತು ಕೊಲೆ! ಸಾರಾಯಿ ಕುಡಿಯಲು ಹಣ ಕೊಡದ ಸ್ನೇಹಿತನನ್ನೇ ಕೊಂದರು!
ಇಬ್ಬರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟರೆ, ಒಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಾಥಮಿಕ ವರದಿಗಳ ಪ್ರಕಾರ ಮಹಿಳೆಯರು ಪಂಜಾಬ್‌ನ ಮಾನ್ಸಾ ಜಿಲ್ಲೆಗೆ ಸೇರಿದವರು.
ಟಿಕ್ರಿ ಗಡಿಗೆ ಸಮೀಪದಲ್ಲಿ ಅಪಘಾತ ಸಂಭವಿಸಿದೆ. ಪಂಜಾಬ್, ಹರಿಯಾಣ ಮತ್ತು ಇತರೆಡೆಗಳಿಂದ ರೈತರು ದೆಹಲಿಯ ಗಡಿಯಲ್ಲಿ ಸುಮಾರು 11 ತಿಂಗಳುಗಳಿಂದ ಮೂರು ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.