Advertisement

ರಸ್ತೆ ಬದಿಯ ಗುಡಿಸಲುಗಳ ಮೇಲೆರಗಿದ ಯಮರೂಪಿ ಟ್ರಕ್: 8 ಮಂದಿ ಸಾವು

08:50 AM Aug 09, 2021 | Team Udayavani |

ಸೂರತ್: ಚಾಲಕನ ನಿಯಂತ್ರಣ ತಪ್ಪಿದ ಕಾರಣ ಟ್ರಕ್ ಒಂದು ರಸ್ತೆ ಬದಿಯ ಗುಡಿಸಲುಗಳ ಮೇಲೆ ಹರಿದ ಪರಿಣಾಮ ಗುಡಿಸಲುಗಳಲ್ಲಿ ಮಲಗಿದ್ದ ಎಂಟು ಮಂದಿ ಸಾವನ್ನಪ್ಪಿದ ಘಟನೆ ಗುಜರಾತ್ ನ ಅಮ್ರೆಲಿ ಜಿಲ್ಲೆಯಲ್ಲಿ ನಡೆದಿದೆ.

Advertisement

ಅಮ್ರೆಲಿಯ ಸಾವರ್ಕುಂಡ್ಲದಲ್ಲಿ ಈ ಘಟನೆ ನಡೆದಿದ್ದು, ನಾಲ್ಕು ಮಂದಿ ಗಾಯಗೊಂಡಿದ್ದಾರೆ. ಅವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಮುಂಜಾನೆ ಮೂರು ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಸ್ಥಳದಲ್ಲಿ ಆಕ್ರಂದನ ಮುಗಿಲು ಮುಟ್ಟಿತ್ತು. ಸ್ಥಳೀಯ ಪೊಲೀಸರು ಆಗಮಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಿದರು.

ಇದನ್ನೂ ಓದಿ:ಹಾಕಿ ಕ್ಯಾಪ್ಟನ್ ರಾಣಿ ರಾಂಪಾಲ್ ಎಂಬ ಹುಟ್ಟು ಹೋರಾಟಗಾರ್ತಿ

ಘಟನೆಯ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಗುಜರಾತ್ ಸಿಎಂ ವಿಜಯ್ ರೂಪಾನಿ, ಘಟನೆಯಲ್ಲಿ ಸಾವನ್ನಪ್ಪಿರುವ ಜನರ ಕುಟುಂಬಿಕರಿಗೆ ನಾಲ್ಕು ಲಕ್ಷ ರೂ. ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ. ಅದಲ್ಲದೆ ಘಟನೆಯ ಬಗ್ಗೆ ಕೂಡಲೇ ತನಿಖೆ ನಡೆಸುವಂತೆ ಅಮ್ರೆಲಿ ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದಾರೆ.

Advertisement

ದುರ್ಘಟನೆಗೆ ಕಾರಣವಾದ ಟ್ರಕ್ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಆತ ಮದ್ಯ ಸೇವಿಸಿ ಚಾಲನೆ ಮಾಡುತ್ತಿದ್ದನೆ ಎನ್ನುವುದನ್ನು ತನಿಖೆ ಮಾಡಲಾಗುತ್ತದೆ ಎಂದು ವರದಿಯಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next