ಅಂಬಾಲಾ: ಟ್ರಾವೆಲರ್ ಮಿನಿ ಬಸ್ಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಏಳು ಜನರು ಸಾವನ್ನಪ್ಪಿದ ಘಟನೆ ಹರಿಯಾಣದ ಅಂಬಾಲಾದಲ್ಲಿ ಗುರುವಾರ ತಡರಾತ್ರಿ ನಡೆದಿದೆ. ಘಟನೆಯಲ್ಲಿ 25 ಮಂದಿ ಗಾಯಗೊಂಡಿದ್ದಾರೆ.
ಅಂಬಾಲಾ-ದೆಹಲಿ-ಜಮ್ಮು ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ ಎಂದು ಅಂಬಾಲಾ ಕ್ಯಾಂಟ್ನ ಸಿವಿಲ್ ಆಸ್ಪತ್ರೆಯ ಡಾ.ಕೌಶಲ್ ಕುಮಾರ್ ತಿಳಿಸಿದ್ದಾರೆ.
ಕಳೆದ ವಾರವಷ್ಟೇ, ರಾಜ್ಯದ ನುಹ್ ಪ್ರದೇಶದಲ್ಲಿ ಟೂರಿಸ್ಟ್ ಬಸ್ ಗೆ ಬೆಂಕಿ ತಗುಲಿದ ನಂತರ ಒಂಬತ್ತು ಜನರು ಸಜೀವ ದಹನವಾಗಿದ್ದರು ಮತ್ತು 15 ಮಂದಿ ಗಾಯಗೊಂಡಿದ್ದರು.
ಕುಂಡ್ಲಿ-ಮನೇಸರ್-ಪಲ್ವಾಲ್ (ಕೆಎಂಪಿ) ಎಕ್ಸ್ಪ್ರೆಸ್ವೇಯಲ್ಲಿ ಸುಮಾರು 2 ಮೀ ದೂರದಲ್ಲಿ ಈ ಘಟನೆ ನಡೆದಿದೆ. ಬಸ್ನಲ್ಲಿ ಸುಮಾರು 60 ಜನರು ಇದ್ದರು, ಎಲ್ಲರೂ ಪಂಜಾಬ್ನ ಹೋಶಿಯಾರ್ಪುರ ಮತ್ತು ಲುಧಿಯಾನ ನಿವಾಸಿಗಳು.
ಇವರೆಲ್ಲರೂ ಮಥುರಾ ಮತ್ತು ವೃಂದಾವನದಿಂದ ಧಾರ್ಮಿಕ ತೀರ್ಥಯಾತ್ರೆಗಳನ್ನು ಮುಗಿಸಿ ಹಿಂತಿರುಗುತ್ತಿದ್ದರು. ಗಾಯಗೊಂಡವರೆಲ್ಲರೂ ಚೇತರಿಸಿಕೊಂಡಿದ್ದಾರೆ ಎಂದು ಸದರ್ ತೌರು ಠಾಣಾಧಿಕಾರಿ ಇನ್ಸ್ಪೆಕ್ಟರ್ ಜಿತೇಂದ್ರ ಕುಮಾರ್ ತಿಳಿಸಿದ್ದಾರೆ.