ನವದೆಹಲಿ : ರಸ್ತೆ ಬದಿ ಮಲಗಿದ್ದವರ ಮೇಲೆ ಟ್ರಕ್ ಹರಿದು ನಾಲ್ವರು ಸಾವನ್ನಪ್ಪಿ , ಮೂವರು ಗಂಭೀರ ಗಾಯಗೊಂಡ ಘಟನೆ ಸೀಮಾಪುರಿ ಪ್ರದೇಶದಲ್ಲಿ ಬುಧವಾರ ಮುಂಜಾನೆ ಸಂಭವಿಸಿದೆ.
ಮೃತರನ್ನು ಕರೀಂ (52 ವರ್ಷ), ಚೋಟ್ಟೆ ಖಾನ್ (25 ವರ್ಷ), ಶಾ ಆಲಂ (38 ವರ್ಷ) ಹಾಗೂ ರಾಹುಲ್ (45 ವರ್ಷ) ಎಂದು ಗುರುತಿಸಲಾಗಿದೆ.
ಬುಧವಾರ ಮುಂಜಾನೆ 1.30 ರ ಸುಮಾರಿಗೆ ಘಟನೆ ನಡೆದಿದ್ದು ಸೀಮಾಪುರಿ ಪ್ರದೇಶದಲ್ಲಿ ರಸ್ತೆಯ ವಿಭಜಕದ ಮೇಲೆ ಮಲಗಿದ್ದ ಏಳು ಮಂದಿಯ ಮೇಲೆ ಟ್ರಕ್ ಹರಿದು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಮತ್ತಿಬ್ಬರು ಆಸ್ಪತ್ರೆಗೆ ಕೊಂಡೊಯ್ಯುವ ವೇಳೆ ಮೃತಪಟ್ಟಿದ್ದಾರೆ.
ಘಟನೆ ನಡೆದ ವೇಳೆ ಟ್ರಕ್ ಚಾಲಕ ವಾಹನ ನಿಲ್ಲಿಸದೆ ಪರಾರಿಯಾಗಿದ್ದಾನೆ. ಘಟನೆಯಲ್ಲಿ ಗಂಭೀರ ಗಾಯಗೊಂಡ ಮೂವರನ್ನು ಆಸ್ಪತ್ತ್ರೆಗೆ ದಾಖಲಿಸಲಾಗಿದೆ.
ಪ್ರಕರಣ ದಾಖಲಿಸಿಕೊಂಡ ಪೊಲೀಸರು ವಾಹನ ಚಾಲಕನ ಪತ್ತೆಗೆ ಬಲೆ ಬಿಸಿದ್ದಾರೆ.
ಇದನ್ನೂ ಓದಿ : ಕೊರಗಜ್ಜನ ಪ್ರಾರ್ಥನೆಗೆ ಇರಿಸಿದ್ದ ವೀಳ್ಯದೆಲೆಯಲ್ಲಿ ಮೂಡಿದ ಬೇರು!: ಅಚ್ಚರಿ ಮೂಡಿಸಿದ ಘಟನೆ