ರಾಯಚೂರು: ಚಲಿಸುತ್ತಿದ್ದ ಲಾರಿ ಸ್ಟಿಯರಿಂಗ್ ತುಂಡಾದ ಪರಿಣಾಮ ಲಾರಿಯಲ್ಲಿದ್ದ ನಾಲ್ವರ ಪೈಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾನವಿ ತಾಲೂಕಿನ ಕಲ್ಲೂರು ಸಮೀಪ ನಡೆದಿದೆ.
ಕಾರಟಗಿಯಿಂದ ರಾಯಚೂರಿಗೆ ಲಾರಿಯಲ್ಲಿ ಭತ್ತ ಕಟಾವು ಮಾಡುವ ಯಂತ್ರವನ್ನು ಸಾಗಿಸಲಾಗುತ್ತಿತ್ತು. ಮಾರ್ಗ ಮಧ್ಯ ಲಾರಿ ಸ್ಟಿಯರಿಂಗ್ ಕಟ್ ಆಗಿದೆ. ಇದರಿಂದ ನಿಯಂತ್ರಣ ತಪ್ಪಿದ ಲಾರಿ ಮಗುಚಿ ಬಿದ್ದಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ:ಡೋಣಿ ನದಿ ಪ್ರವಾಹ: ಮುನ್ನೆಚ್ಚರಿಕೆ ಕ್ರಮಕ್ಕೆ ಎಂ.ಬಿ.ಪಾಟೀಲ ಸೂಚನೆ
ಸಿರವಾರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ಗಾಯಾಳಗಳನ್ನು ಮಾನವಿ ಆಸ್ಪತ್ರೆಗೆ ರವಾನಿಸಲಾಗಿದೆ.
ಸಿರವಾರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.