Advertisement
ಹೊಸದಿಲ್ಲಿಯಲ್ಲಿ ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ ಮತ್ತು ಅಖೀಲ ಭಾರತ ಮೋಟಾರ್ ಟ್ರಾನ್ಸ್‌ಪೊàರ್ಟ್ ಕಾಂಗ್ರೆಸ್ (ಎಐಎಂಟಿಸಿ) ನಡುವೆ ನಡೆದ ಸಂಧಾನ ಮಾತುಕತೆ ಬಳಿಕ ಮುಷ್ಕರ ಮುಕ್ತಾಯ ಗೊಳಿಸುವ ಬಗ್ಗೆ ತೀರ್ಮಾನಿಸಲಾಯಿತು. ಈ ಬಗ್ಗೆ ಮಾತನಾಡಿದ ಎಐಎಂಟಿಸಿ ಅಧ್ಯಕ್ಷ ಮಲ್ಕಿತ್ ಸಿಂಗ್ ಭಾಲ್, ಹೊಸ ಕಾಯ್ದೆಗಳನ್ನು ಇನ್ನೂ ಜಾರಿ ಮಾಡ ಲಾಗಿಲ್ಲ. ಕೇಂದ್ರ ಗೃಹ ಕಾರ್ಯದರ್ಶಿಯವರ ಜತೆಗಿನ ಮಾತುಕತೆಯಲ್ಲಿ ಎಲ್ಲ ವಿವಾದಾತ್ಮಕ ಅಂಶಗಳನ್ನು ಇತ್ಯರ್ಥಗೊಳಿಸಲಾಗಿದೆ ಎಂದರು.
ಇದಕ್ಕೆ ಮುನ್ನ ಕೇಂದ್ರ ಸರಕಾರದ ಹೊಸ ಕಾಯ್ದೆಗೆ ಉತ್ತರ ಭಾರತದ ಆರು ರಾಜ್ಯಗಳಲ್ಲಿ ಭಾರೀ ಪ್ರತಿಭಟನೆ ವ್ಯಕ್ತವಾಗಿತ್ತು. ಕೆಲವೆಡೆ ಪೆಟ್ರೋಲ್ ಬಂಕ್‌ಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಇದರಿಂದಾಗಿ ದೇಶದಾದ್ಯಂತ ತೈಲೋತ್ಪನ್ನ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂಬ ಭೀತಿಯಿಂದ ವಾಹನ ಮಾಲಕರು ಬಂಕ್‌ಗಳಲ್ಲಿ ಟ್ಯಾಂಕ್ ಭರ್ತಿ ಮಾಡಿಕೊಳ್ಳಲು ಸಾಲುಗಟ್ಟಿ ನಿಂತಿದ್ದರು.
Related Articles
Advertisement