Advertisement

ಅಮೆರಿಕದ ದಾಳಿಯಲ್ಲಿ ಒಸಾಮಾ ಬಿನ್ ಲಾಡೆನ್ ಮಗ ಹಂಝಾ ಸಾವು: ಖಚಿತಪಡಿಸಿದ ಟ್ರಂಪ್

09:29 AM Sep 15, 2019 | Nagendra Trasi |

ವಾಷಿಂಗ್ಟನ್: ಅಫ್ಘಾನಿಸ್ತಾನ-ಪಾಕಿಸ್ತಾನ ಪ್ರದೇಶದಲ್ಲಿ ಭಯೋತ್ಪಾದಕರ ವಿರುದ್ಧ ಅಮೆರಿಕ ನಡೆಸಿದ ಕಾರ್ಯಾಚರಣೆಯಲ್ಲಿ ಅಲ್ ಖೈದಾದ ಭಯೋತ್ಪಾದಕ ಸಂಘಟನೆ ನಾಯಕ ದಿ.ಒಸಾಮಾ ಬಿನ್ ಲಾಡೆನ್ ಪುತ್ರ ಹಂಝಾ ಬಿನ್ ಲಾಡೆನ್ ಬಲಿಯಾಗಿದ್ದಾನೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶನಿವಾರ ಖಚಿತಪಡಿಸಿದ್ದರು.

Advertisement

ಇತ್ತೀಚೆಗೆ ಲಾಡೆನ್ ಮಗ ಹಂಝಾ ಲಾಡೆನ್ ಸಾವನ್ನಪ್ಪಿರುವುದಾಗಿ ಆಂಗ್ಲ ಮಾಧ್ಯಮವೊಂದು ವರದಿ ಮಾಡಿತ್ತು. ಆದರೆ ಈ ಬಗ್ಗೆ ಸ್ಪಷ್ಟನೆ ನೀಡಲು ಟ್ರಂಪ್ ನಿರಾಕರಿಸಿದ್ದರು. ಇದೀಗ ಶನಿವಾರ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ಹಂಝ ಸಾವನ್ನಪ್ಪಿರುವುದನ್ನು ಸ್ಪಷ್ಟಪಡಿಸಿದ್ದಾರೆ.

ಆದರೆ ಅಫ್ಘಾನಿಸ್ತಾನ-ಪಾಕಿಸ್ತಾನ ಪ್ರದೇಶದಲ್ಲಿ ಯಾವ ಸಂದರ್ಭದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಹಂಝಾ ಬಲಿಯಾಗಿದ್ದಾನೆ ಎಂಬ ಮಾಹಿತಿಯನ್ನು ಟ್ರಂಪ್ ನೀಡಿಲ್ಲ ಎಂದು ವರದಿ ವಿವರಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next