Advertisement

ಮಹಾಮಾರಿ ಕೋವಿಡ್ 19 ವೈರಸ್ ಗೆ ಒಂದು ಲಕ್ಷಕ್ಕೂ ಅಧಿಕ ಜನ ಸಾವನ್ನಪ್ಪಲಿದ್ದಾರೆ: ಟ್ರಂಪ್

08:28 AM May 05, 2020 | Nagendra Trasi |

ವಾಷಿಂಗ್ಟನ್:ಮಾರಣಾಂತಿಕ ಕೋವಿಡ್ 19 ವೈರಸ್ ನಿಂದ ಸಾವನ್ನಪ್ಪುವವರ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದ್ದು, ಅಮೆರಿಕದಲ್ಲಿ ಒಂದು ಲಕ್ಷಕ್ಕೂ ಅಧಿಕ ಮಂದಿ ಸಾವನ್ನಪ್ಪುವ ಸಾಧ್ಯತೆ ಇದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಂದಾಜಿಸಿದ್ದಾರೆ.

Advertisement

ಫಾಕ್ಸ್ ನ್ಯೂಸ್ ನ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಅವರು ಈ ವರ್ಷದ ಕೊನೆಯಲ್ಲಿ ಕೋವಿಡ್ 19 ನಿರ್ಮೂಲನಾ ಲಸಿಕೆಯನ್ನು ಪಡೆಯಲಿದ್ದೇವೆ. ಇದರಲ್ಲಿ ನಮಗೆ ತುಂಬಾ ವಿಶ್ವಾಸವಿದೆ ಎಂದು ಟ್ರಂಪ್ ತಿಳಿಸಿದ್ದರು. ಈ ಮಾರಕ ರೋಗ ಹರಡಲು ಚೀನಾವೇ ಕಾರಣ ಎಂದು ಟ್ರಂಪ್ ಮತ್ತೊಮ್ಮೆ ಆರೋಪಿಸಿದ್ದಾರೆ.

ಅಮೆರಿಕದಲ್ಲಿ ಹತ್ತು ಲಕ್ಷಕ್ಕೂ ಅಧಿಕ ಮಂದಿ ಕೋವಿಡ್ 19 ಸೋಂಕಿಗೆ ಒಳಗಾಗಿದ್ದಾರೆ. 67 ಸಾವಿರ ಜನರು ಸಾವನ್ನಪ್ಪಿದ್ದಾರೆ. ವ್ಯಾಪಾರ, ವಹಿವಾಟು ಸ್ಥಗಿತಗೊಂಡಿದ್ದು, ಅಮೆರಿಕದ ಆರ್ಥಿಕ ಪರಿಸ್ಥಿತಿ ಮೇಲೆ ದೊಡ್ಡ ಹೊಡೆತ ನೀಡಿರುವುದಾಗಿ ವರದಿ ತಿಳಿಸಿದೆ.

ನಾವು ದೇಶದಲ್ಲಿ ಒಂದು ಲಕ್ಷಕ್ಕೂ ಅಧಿಕ ಜನರನ್ನು ಕಳೆದುಕೊಳ್ಳಲಿದ್ದೇವೆ. ಇದೊಂದು ಆಘಾತಕಾರಿ ವಿಷಯವಾಗಿದೆ ಎಂದು ಟ್ರಂಪ್ ಕಳವಳವ್ಯಕ್ತಪಡಿಸಿದ್ದಾರೆ. ಕೋವಿಡ್ 10 ವೈರಸ್ ನಿಂದ 60ರಿಂದ 70 ಸಾವಿರ ಜನರು ಸಾವನ್ನಪ್ಪುವ ಸಾಧ್ಯತೆ ಇದೆ ಎಂದು ಈ ಮೊದಲು ಟ್ರಂಪ್ ಲೆಕ್ಕಾಚಾರ ಹಾಕಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next