Advertisement

ಕೋವಿಡ್ ಕಾಲದ ಹಗರಣಗಳ ನ್ಯಾಯಾಂಗ ತನಿಖೆಯಲ್ಲಿ ಸತ್ಯಾಂಶ ಹೊರಬರಲಿದೆ: ದಿನೇಶ್ ಗುಂಡೂರಾವ್

02:54 PM Jul 31, 2023 | Team Udayavani |

ಬೆಂಗಳೂರು: ಕೋವಿಡ್ ಕಾಲದಲ್ಲಿ ನಡೆದ ಹಗರಣಗಳನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸುತ್ತೇವೆ. ಮುಖ್ಯಮಂತ್ರಿಯವರ ಗಮನಕ್ಕೆ ಎಲ್ಲ ವಿಚಾರಗಳನ್ನು ತರಲಾಗಿದೆ. ಪಬ್ಲಿಕ್ ಅಕೌಂಟ್ಸ್ ಸಮಿತಿ ವರದಿಯಲ್ಲಿ ಸಾಕಷ್ಟು ಅಂಶಗಳಿವೆ. ಕೆಲವು ಉಪಕರಣಗಳನ್ನು ಹೆಚ್ಚು ದುಬಾರಿಗೆ ಬೆಲೆಗೆ ಖರೀದಿ ಮಾಡಿದ್ದಾರೆ ಎಂಬ ಆರೋಪವಿದೆ. ತನಿಖೆಯಲ್ಲಿ ಸತ್ಯಾಸತ್ಯತೆ ಹೊರಬರಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

Advertisement

ಆಸ್ಪತ್ರೆಗಳಲ್ಲಿ ಶವಗಳ ಮಾಫಿಯಾ ನಡೆಯುತ್ತಿದೆ ಎಂಬ ಎನ್.ಆರ್ ರಮೇಶ್ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಅವರು ಸಾಕಷ್ಟು ಆರೋಪ ಮಾಡುತ್ತಿರುತ್ತಾರೆ. ಅವರ ಬಳಿ ಮಾಹಿತಿ ಇದ್ದರೆ ಒದಗಿಸಲಿ. ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.

ಜಯನಗರ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿದ ಅವರು, ಆಸ್ಪತ್ರೆಯಲ್ಲಿ ಸ್ವಚ್ಚತೆ, ಡಾಕ್ಟರ್ ಗಳ ಹಾಜರಾತಿ ಬಗ್ಗೆ ಸಾಕಷ್ಟು ದೂರು ಬಂದಿತ್ತು. ಸಾಮಾಜಿಕ ಕಾರ್ಯಕರ್ತನ ಬಗ್ಗೆ ದೂರು ಬಂದಿತ್ತು. ವಿಧಾನಸಭೆಯಲ್ಲಿ ಜಯನಗರ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸುವುದಾಗಿ ಹೇಳಿದ್ದೆ. ಆದೇ ರೀತಿ ಇಂದು ಜಯನಗರ ಶಾಸಕರ ಸಮೇತ ಆಸ್ಪತ್ರೆಗೆ ಭೇಟಿ ನೀಡಿದ್ದೇನೆ. ಹೊರಗಿನಿಂದ ಬಂದು ಆಸ್ಪತ್ರೆಯಲ್ಲಿ ಹಸ್ತಕ್ಷೇಪ ಮಾಡುವುದು ತಪ್ಪು. ಏನೆಲ್ಲಾ ತೊಂದರೆಯಾಗುತ್ತಿದೆ ಅದಕ್ಕೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next