Advertisement
ನಗರದ ಶುಭಮಂಗಳ ಸಮುದಾಯ ಭವನದಲ್ಲಿ ಬಿಜೆಪಿ ಜಿಲ್ಲಾ ವಿಶೇಷ ಕಾರ್ಯಕಾರಣಿ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಕೇಂದ್ರ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಸಾಧನೆಗಳನ್ನು ಹಾಗೂ ಹಿಂದಿನ ರಾಜ್ಯ ಬಿಜೆಪಿ ಸರ್ಕಾರದ ಸಾಧನೆಗಳನ್ನು ಸಾರುವ ಮೂಲಕ ಬಿಜೆಪಿ ಕಾರ್ಯಕರ್ತರು ಸಂಘಟನೆಯಲ್ಲಿ ತೊಡಗಿಕೊಳ್ಳಬೇಕು ಎಂದು ಕರೆ ನೀಡಿದರು. ಪ್ರಧಾನಿ ನರೇಂದ್ರ ಮೋದಿ ಅವರು ಹಲವು ಜನಪರ ಯೋಜನೆಗಳನ್ನು ಜಾರಿಗೊಳಿಸಿದ್ದಾರೆ.
ಬಿಜೆಪಿ ಸರ್ಕಾರ ಆಡಳಿತಕ್ಕೆ ಬರುವ ಅನಿವಾರ್ಯತೆ ಇದೆ. ಈ ನಿಟ್ಟಿನಲ್ಲಿ ಪ್ರಯತ್ನ ಸಾಗಬೇಕು ಎಂದು ಹೇಳಿದರು. ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹಲವು ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಜಗತ್ತಿನಲ್ಲೇ ಭಾರತವನ್ನು ಶಕ್ತಿಶಾಲಿ ರಾಷ್ಟ್ರವನ್ನಾಗಿಸಿದೆ. ವಿಶ್ವದೆಲ್ಲೆಡೆ ದೇಶಕ್ಕೆ ಗೌರವ ದೊರಕುವಂತೆ ಮಾಡಿದೆ. ಅಲ್ಲದೇ ಈ ಹಿಂದೆ ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ ಜನಸಾಮಾನ್ಯರಿಗಾಗಿ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿತ್ತು. ಇದೆಲ್ಲವನ್ನು ಜನರಿಗೆ ತಲುಪಿಸಬೇಕು ಎಂದು ಹೇಳಿದರು. ಕಾಂಗ್ರೆಸ್ ಮುಕ್ತ ರಾಷ್ಟ್ರವನ್ನಾಗಿಸಲು ಮುಂದಡಿ ಇಡಲಾಗಿದೆ. ಇನ್ನು 6 ತಿಂಗಳಲ್ಲಿ ಚುನಾವಣೆ ಎದುರಾಗಲಿದೆ. ಕಾರ್ಯಕರ್ತರು ಮೈಮರೆಯದೇ ಪಕ್ಷದ ಸಂಘಟನೆಯಲ್ಲಿ ತೊಡಗಿಕೊಳ್ಳಬೇಕು. ಜನರ ಸಮಸ್ಯೆಗಳನ್ನು ಆಲಿಸಿ ಪರಿಹರಿಸಲು ಮುಂದಾಗಬೇಕು. ರಾಷ್ಟ್ರ ನಾಯಕರೇ ಪ್ರತಿನಿತ್ಯ 17 ರಿಂದ 18 ಗಂಟೆ ಪಕ್ಷಕ್ಕಾಗಿ ಕೆಲಸ ಮಾಡುತ್ತಿದ್ದಾರೆ. ಕಾರ್ಯಕರ್ತರಾದ ನಾವು ಅವರ ಮನಃಸ್ಥಿತಿಯನ್ನು ಬೆಳೆಸಿಕೊಳ್ಳಬೇಕಿದೆ ಎಂದರು.
Related Articles
ಆರೋಪಿಸಿದರು.
Advertisement
ರಾಜ್ಯದಲ್ಲಿ ಭೀಕರ ಬರಗಾಲ ಎದರುರಾಗಿದೆ. ಮಳೆ ಇಲ್ಲದೆ ರೈತ ಸಮುದಾಯ ಆತಂಕಕ್ಕೆ ಒಳಗಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಯಾವುದಕ್ಕೆ ಆದ್ಯತೆ ಕೊಡಬೇಕಿತ್ತು ಅದನ್ನು ಬಿಟ್ಟು ರಾಜ್ಯದಲ್ಲಿ ಗೊಂದಲ ಸೃಷ್ಟಿ ಮಾಡುವ, ಧಮನಕಾರಿ ಚಿಂತನೆಯತ್ತ ರಾಜ್ಯ ಸರ್ಕಾರ ಮುಂದಾಗಿದೆ ಎಂದು ದೂರಿದರು. ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ರೈತರು ಪಡೆದಿರುವ ಸಾಲವನ್ನು ರಾಜ್ಯ ಸರ್ಕಾರವೇ ಮನ್ನಾ ಮಾಡಬೇಕು. ದೇಶದ ಹಲವು ರಾಜ್ಯಗಳು ಈ ಕಾರ್ಯ ಮಾಡಿವೆ. ರಾಜ್ಯ ಸರ್ಕಾದ ವೈಫಲ್ಯವನ್ನು ವಿರೋಧಿಸಲು ಪ್ರಬಲವಾದ ಹೋರಾಟ ಅಗತ್ಯವಾಗಿದೆ ಎಂದರು. ರಾಜ್ಯದಲ್ಲಿ ಅತ್ಯಂತ ಕೆಟ್ಟ ಸರ್ಕಾರ ಅಧಿಕಾರದಲ್ಲಿದೆ. ಕಳೆದ 4 ವರ್ಷಗಳ ರಾಜ್ಯ ಸರ್ಕಾರದ ಆಡಳಿತಾವಧಿಯಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ನಡೆದಿಲ್ಲ. ಕೇವಲ ಫ್ಲೆಕ್ಸ್, ಬ್ಯಾನರ್, ಜಾಹಿರಾತು ಮೂಲಕ ಜನರನ್ನು ಮರುಳು ಮಾಡತೊಡಗಿದೆ. ಪಕ್ಷದ ಕಾರ್ಯಕರ್ತರು ಸತ್ಯವನ್ನು ಜನರಿಗೆ ತಿಳಿಸಿ ಹೇಳಬೇಕಿದೆ ಎಂದರು.
ಸಭೆಯಲ್ಲಿ ಮಾಜಿ ಸಂಸದ ಆಯನೂರು ಮಂಜುನಾಥ್, ಮಾಜಿ ಸಚಿವ ಕುಮಾರ್ ಬಂಗಾರಪ್ಪ, ಪ್ರಮುಖರಾದ ಗೋಪಾಲಕೃಷ್ಣ ಬೇಳೂರು, ಆರ್. ಕೆ. ಸಿದ್ದರಾಮಣ್ಣ, ಎಸ್. ದತ್ತಾತ್ರಿ, ಗಿರೀಶ್ ಪಟೇಲ್, ಬಿ. ಸ್ವಾಮಿರಾವ್, ಭಾರತೀ ಶೆಟ್ಟಿ, ಪವಿತ್ರ ರಾಮಯ್ಯ, ಗುರುಮೂರ್ತಿ, ದೇವದಾಸ್ ನಾಯಕ್, ಭವಾನಿ ರಾವ್ ಮೋರೆ, ಗಣೇಶರಾವ್ ಮತ್ತಿತರರು ಇದ್ದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಸಮಿತಿಗೆ ಉಪಾಧ್ಯಕ್ಷರಾಗಿ ನೇಮಕಗೊಂಡ ನಗರಸಭೆ ಮಾಜಿ ಅಧ್ಯಕ್ಷ ಎಂ. ಶಂಕರ್ ಹಾಗೂ ಹಿರಿಯ ಸಹಕಾರಿ ಧುರೀಣ ಶ್ರೀಪಾದ ಹೆಗಡೆ ನಿಸರಾಣಿ ಅವರನ್ನು ಗೌರವಿಸಲಾಯಿತು. ಸಭೆಗೆ ಮೊದಲು ಇತ್ತೀಚಿಗೆ ನಿಧನರಾದ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಬಿ.ಬಿ. ಶಿವಪ್ಪ ಹಾಗೂ ಉತ್ತರ ಪ್ರದೇಶದ ಆಸ್ಪತ್ರೆಯಲ್ಲಿ ಸಾವನ್ನಿಪ್ಪಿದ ಮಕ್ಕಳ ನಿಧನಕ್ಕೆ ಮೌನಾಚರಿಸಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.