Advertisement

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ನಂ.1 ಸ್ಥಾನ ತಲುಪಲು ಯತ್ನ

07:26 AM Feb 22, 2019 | Team Udayavani |

ನೆಲಮಂಗಲ: ಬೆಂಗಳೂರು ಗ್ರಾಮಾಂತರ ಜಿಲ್ಲೆ ಎಸ್‌.ಎಸ್‌.ಎಲ್‌.ಸಿ. ಪರೀಕ್ಷೆಯಲ್ಲಿ ಈ ಹಿಂದೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದು, ಮತ್ತೆ ನಂ.1 ಸ್ಥಾನಕ್ಕೆ ತಲುಪಲು ಸಾಕಷ್ಟು ಶ್ರಮ ವಹಿಸಲಾಗುತ್ತಿದೆ ಎಂದು ಜಿಲ್ಲಾ ಪಂಚಾಯತಿ ಕಾರ್ಯನಿರ್ವಾಹಣಾಧಿಕಾರಿ ಲತಾ ಹೇಳಿದರು.

Advertisement

ಪಟ್ಟಣದ ಹರ್ಷ ಸಂಸ್ಥೆಯ ಸಭಾಂಗಣದಲ್ಲಿ ಪ್ರೌಢಶಾಲಾ ಮುಖ್ಯೋಪಾಧ್ಯಾಯರು ಮತ್ತು ಪದವಿ ಪೂರ್ವ ಕಾಲೇಜು ಉಪ ಪ್ರಾಂಶುಪಾಲರ ಸಂಘದ ವತಿಯಿಂದ ಆಯೋಜಿಸಲಾಗಿದ್ದ ಶೈಕ್ಷಣಿಕ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.

ಸರ್ಕಾರಿ ಶಾಲೆಯ ಮಕ್ಕಳಿಗೆ ಕಲಿಕೆಯಲ್ಲಿ ಬಹಳಷ್ಟು ಆಸಕ್ತಿಯಿದ್ದು, ಉತ್ತಮವಾಗಿ ಕಲಿಸುವ ಪ್ರಯತ್ನವಾಗಬೇಕು. ಈ ಬಾರಿ ನಾನೇ ಶಾಲೆಗಳಿಗೆ ಭೇಟಿ ನೀಡಿ ಶಿಕ್ಷಕರ ಕಲಿಸುವಿಕೆ ಮತ್ತು ವಿದ್ಯಾರ್ಥಿಗಳ ಕಲಿಕೆಯ ಬಗ್ಗೆ ಗಮನಿಸಿದ್ದೇನೆ.

ಈ ಬಾರಿ ಎಸ್‌.ಎಸ್‌.ಎಲ್‌.ಸಿ. ಪರೀಕ್ಷೆ ಎದುರಿಸುವ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸವಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆಯುವುದರಲ್ಲಿ ಯಾವುದೇ ಸಂದೇವಿಹವಿಲ್ಲ. ಆದರೆ ಮುಖ್ಯಶಿಕ್ಷಕರು ಮತ್ತು ಶಿಕ್ಷಕರು ಬಹಳಷ್ಟು ಗಮನ ವಹಿಸಬೇಕು ಎಂದರು. 

ರಾಜ್ಯಕ್ಕೆ ಪ್ರಥಮ ಸ್ಥಾನದ ಭರವಸೆ: ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೃಷ್ಣಮೂರ್ತಿ ಮಾತನಾಡಿ, ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಶೇ.100ರಷ್ಟು ಫ‌ಲಿತಾಂಶ ಬರುವ ದೃಷ್ಟಿಯಿಂದ ವರ್ಷದ ಆರಂಭದಿಂದಲೇ ವಿದ್ಯಾರ್ಥಿಗಳಿಗೆ ಶಿಕ್ಷಣ ತಜ್ಞರಿಂದ ಹಾಗೂ ವಿಶೇಷ ಉಪನ್ಯಾಸಕರಿಂದ ತರಬೇತಿ ನೀಡಲಾಗಿದೆ. ಉತ್ತಮ ಅಂಕ ಗಳಿಸಲು ವಿದ್ಯಾರ್ಥಿಗಳಿಗೆ ಉಪನ್ಯಾಸ ನೀಡಲಾಗಿದ್ದು, ಈ ಬಾರಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆಯುವ ಭರವಸೆಯಿದೆ ಎಂದು ತಿಳಿಸಿದರು.

Advertisement

ಸನ್ಮಾನ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 2017-18ನೇ ಸಾಲಿನ ಎಸ್‌.ಎಸ್‌.ಎಲ್‌.ಸಿ.ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ನೆಲಮಂಗಲದ ಶ್ರೀನಿವಾಸ್‌, ಮಮತಾ, ಸುದೀಪ್‌ಕುಮಾರ್‌, ದೊಡ್ಡಬಳ್ಳಾಪುರದ ತೇಜಸ್ವಿನಿ, ಅಭಿಷೇಕ್‌, ವಂದನಾ, ದೇವನಹಳ್ಳಿಯ ಮಹೇಂದ್ರ, ಚೈತನ್ಯಾ, ಸೃಜನ್‌, ಹೊಸಕೋಟೆಯ ಮೋನಿಕಾ, ರಶ್ಮಿ, ನಿಖೀತಾ ಅವರಿಗೆ ಹಾಗೂ ಜಿಲ್ಲೆಯಲ್ಲಿ ನಿವೃತ್ತರಾದ 28 ಮಂದಿ ಮುಖ್ಯ ಶಿಕ್ಷಕರಿಗೆ ವಿಧಾನ ಪರಿಷತ್‌ ಸದಸ್ಯ ಅ.ದೇವೇಗೌಡ ಹಾಗೂ ಜಿಲ್ಲಾ ಪಂಚಾಯತಿ ಕಾರ್ಯನಿರ್ವಾಹಣಾಧಿಕಾರಿ ಲತಾ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಶಿಕ್ಷಣ ತಜ್ಞ ಡಾ.ಎನ್‌.ಶಿವರಾಮರೆಡ್ಡಿ, ಡಾ.ಆರ್‌.ನಾಗರಾಜಯ್ಯ, ಹರ್ಷ ಸಂಸ್ಥೆ ಅಧ್ಯಕ್ಷ ಶಿವಕುಮಾರ್‌, ಕ್ಷೇತ್ರ ಶಿಕ್ಷಣಾಧಿಕಾರಿ ಅಲ್ಮಾಸ್‌ ಪರ್ವೀನ್‌ ತಾಜ್‌, ಗಾಯತ್ರಿ, ಶಿಕ್ಷಣಾಧಿಕಾರಿ ಹನುಮಂತಪ್ಪ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಪ್ರಕಾಶ್‌, ಬಿ.ಆರ್‌.ಸಿ.ನರಸಿಂಹಯ್ಯ,

ಪ್ರೌಢಶಾಲಾ ಮುಖ್ಯೋಪಾಧ್ಯಾಯ ಮತ್ತು ಪದವಿ ಪೂರ್ವ ಕಾಲೇಜು ಉಪ ಪ್ರಾಂಶುಪಾಲರ ಸಂಘದ ಅಧ್ಯಕ್ಷ ಕೃಷ್ಣಮೂರ್ತಿ, ಪ್ರಧಾನ ಕಾರ್ಯದರ್ಶಿ ಟಿ.ಕೆ.ರವಿಕುಮಾರ್‌, ಖಜಾಂಚಿ ಎನ್‌.ರಾಜಾರೆಡ್ಡಿ, ಸಂಘಟನಾ ಕಾರ್ಯದರ್ಶಿ ಆರ್‌.ನಾರಾಯಣಸ್ವಾಮಿ, ನಿರ್ದೇಶಕರಾದ ಎಚ್‌.ಟಿ.ಹೇಮಕುಮಾರ್‌, ಕೆ.ಆರ್‌.ಗಂಗರಾಮಯ್ಯ, ಶಂಕರಪ್ಪ, ಚಂದ್ರಶೇಖರ್‌ ಮತ್ತಿತರರು ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next