Advertisement

ಉಕ್ರೇನ್ ನಲ್ಲಿ ರಸ್ತೆ ಮಾರ್ಗದಲ್ಲಿ ವಿದ್ಯಾರ್ಥಿಗಳ ಸ್ಥಳಾಂತರ ಪ್ರಯತ್ನ: ಸಿಎಂ

10:47 AM Feb 25, 2022 | Team Udayavani |

ಬೆಂಗಳೂರು : ಉಕ್ರೇನ್ ನಲ್ಲಿ ಸಿಕ್ಕಿಕೊಂಡಿರುವ ರಾಜ್ಯದ ವಿದ್ಯಾರ್ಥಿಗಳೆಲ್ಲರೂ ಸುರಕ್ಷಿತವಾಗಿ ಇದ್ದಾರೆ, ಎಲ್ಲರ ಜತೆ ನಮ್ಮ ರಾಯಭಾರಿ ಕಚೇರಿ ಅಧಿಕಾರಿಗಳು ಸಂಪರ್ಕದಲ್ಲಿ ಇದ್ದಾರೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಶುಕ್ರವಾರ ತಿಳಿಸಿದ್ದಾರೆ.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ನಾನು ಇವತ್ತು‌ ನಮ್ಮ ವಿದೇಶಾಂಗ ಸಚಿವ ಜೈಶಂಕರ್ ಅವರ ಜತೆ ಮಾತಾಡಿದ್ದೇನೆ. ಸಂಪೂರ್ಣ ವಿವರಗಳನ್ನು ಅವರು ಪಡೆದುಕೊಂಡಿದ್ದಾರೆ. ಕರ್ನಾಟಕದ ಬಹಳಷ್ಟು ಮಕ್ಕಳು ಮೆಡಿಕಲ್ ಕಲಿಯಲು ಹೋಗಿದ್ದಾರೆ. ಆ ವಿದ್ಯಾರ್ಥಿಗಳು ನಮ್ಮ ಸಂಪರ್ಕದಲ್ಲಿ ಇದ್ದಾರೆ. ಅವರು ಸದ್ಯಕ್ಕೆ ಸುರಕ್ಷಿತ ಸ್ಥಳದಲ್ಲಿರಬೇಕು. ಭಾರತ ಸರ್ಕಾರ ಹಲವು ಪ್ರಯತ್ನಗಳನ್ನು ಮಾಡುತ್ತಿದೆ ಎಂದರು.

ರಷ್ಯಾ ಭಾಷೆ ಮಾತಾಡುವ ರಾಯಭಾರಿಗಳನ್ನು ಉಕ್ರೇನ್ ಗೆ ಕಳುಹಿಸಿದ್ದಾರೆ. ಅಲ್ಲಿಂದ ವಿದ್ಯಾರ್ಥಿಗಳನ್ನು ರಸ್ತೆಯ ಮಾರ್ಗದಲ್ಲಿ ಸ್ಥಳಾಂತರ ಮಾಡುವ ಪ್ರಯತ್ನಗಳು ಆಗುತ್ತಿವೆ. ವಾಯು ಮಾರ್ಗದ ಮೂಲಕ ಸ್ಥಳಾಂತರ ಆಗುತ್ತಿಲ್ಲ. ಈ ಸಂಬಂಧ ವಿದೇಶಾಂಗ ಮಟ್ಟದಲ್ಲಿ ಮಾತುಕತೆಗಳು ನಡೆಯುತ್ತಿವೆ. ಉಕ್ರೇನಿನ ಪಶ್ಚಿಮ ಭಾಗದಲ್ಲಿರುವವ ರಸ್ತೆ ಮಾರ್ಗದ ಮೂಲಕ‌ ಸ್ಥಳಾಂತರ ಮಾಡಬಹುದೆಂಬ ಚಿಂತನೆ ನಡೆಯುತ್ತಿದೆ ಎಂದರು.

ಭಾರತೀಯ ರಾಯಭಾರಿ ಕಚೇರಿ ಹೇಳದ ಹೊರತು ಯಾರೂ ಹೋಗಬಾರದು. ಇಂಥ ಸಂದರ್ಭದಲ್ಲಿ ಸುಮ್ಮಸುಮ್ಮನೆ ಯಾರೂ ಬರಬಾರದು. ಸರಿಯಾದ ಸಂದರ್ಭ ನೋಡಿಕೊಂಡು ನಮ್ಮ ರಾಯಭಾರಿ ಕಚೇರಿ ಸಂದೇಶ ಕೊಡಲಿದೆ ಎಂದರು.

ನಮ್ಮವರಿಗೆ ಊಟ, ತಿಂಡಿಯ ವ್ಯವಸ್ಥೆ ಮಾಡುವಂತೆ ಹೇಳಿದ್ದೇವೆ. ನಮ್ಮ ಸರ್ಕಾರವೂ ಹೆಲ್ಪ್ ಲೈನ್ ಆರಂಭಿಸಿದೆ. ಭಾರತ ಸರ್ಕಾರವೂ ಹೆಲ್ಪ್ ಲೈನ್ ಆರಂಭಿಸಿದೆ. ಯುದ್ಧದ ಪರಿಸ್ಥಿತಿ ತಿಳಿಗೊಳ್ಳುವರೆಗೂ ಎಲ್ಲರೂ ಎಚ್ಚರಿಕೆಯಿಂದಿರಬೇಕೆಂದು ವಿದೇಶಾಂಗ ಇಲಾಖೆಯಿಂದ ಸೂಚನೆ ನೀಡಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next