Advertisement

ಮಹಾದೇವಪ್ಪಗೆ ಟೀಯೆಸ್ಸಾರ್‌ ಸ್ಮಾರಕ ಪತ್ರಿಕೋದ್ಯಮ ಪ್ರಶಸ್ತಿ

10:53 PM Dec 13, 2019 | Lakshmi GovindaRaj |

ಬೆಂಗಳೂರು: ಕನ್ನಡ ಪತ್ರಿಕೋದ್ಯಮದಲ್ಲಿ ಅನುಪಮ ಸೇವೆ ಸಲ್ಲಿಸಿರುವವರಿಗೆ ನೀಡಲಾಗುವ ಪ್ರತಿಷ್ಠಿತ ಟೀಯೆಸ್ಸಾರ್‌ ಸ್ಮಾರಕ ಪತ್ರಿಕೋದ್ಯಮ ಪ್ರಶಸ್ತಿ ಹಾಗೂ ಒಂದು ಕನ್ನಡ ಪತ್ರಿಕೆಯನ್ನು ಹುಟ್ಟು ಹಾಕಿ ಬೆಳೆಸಿದವರಿಗೆ ನೀಡಲಾಗುವ ವಿಶೇಷ ಗೌರವದ ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿಗಳನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ.

Advertisement

2017ನೇ ಸಾಲಿನ ಟೀಯೆಸ್ಸಾರ್‌ ಸ್ಮಾರಕ ಪತ್ರಿಕೋದ್ಯಮ ಪ್ರಶಸ್ತಿಯು ಸಂಯುಕ್ತ ಕರ್ನಾಟಕ ಹಾಗೂ ಕರ್ಮವೀರ ಪತ್ರಿಕೆಯ ನಿವೃತ್ತ ಸಂಪಾದಕ ಧೃವರಾಜ್‌ ವೆಂಕಟರಾವ್‌ ಮುತಾಲಿಕ್‌ ದೇಸಾಯಿ ಅವರಿಗೆ ಹಾಗೂ 2018ನೇ ಸಾಲಿನ ಪ್ರಶಸ್ತಿಯು ಮೈಸೂರಿನ “ಕನ್ನಡಿಗರ ಪ್ರಜಾನುಡಿ’ ಪತ್ರಿಕೆ ಸಂಪಾದಕ ಡಿ.ಮಹಾದೇವಪ್ಪ ಅವರಿಗೆ ಲಭಿಸಿದೆ. ಮಹಾದೇವಪ್ಪ ಅವರು ವಿಜಯ ಕರ್ನಾಟಕ ಪತ್ರಿಕೆ ಸಂಪಾದಕರಾಗಿದ್ದರು.

ಕನ್ನಡ ಪ್ರಭ ಮತ್ತಿತರ ಪತ್ರಿಕೆಗಳಲ್ಲೂ ಕಾರ್ಯನಿರ್ವಹಿಸಿದ್ದರು. 2017ನೇ ಸಾಲಿನ ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿಗೆ ತುಮಕೂರು ಪ್ರಾದೇಶಿಕ ಪತ್ರಿಕೆಯ ಸಂಪಾದಕ ಎನ್‌. ನಾಗಣ್ಣ ಹಾಗೂ 2018ನೇ ಸಾಲಿನ ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಸುದ್ದಿ ಬಿಡುಗಡೆ ಪತ್ರಿಕೆಯ ಪ್ರಧಾನ ಸಂಪಾದಕ ಡಾ.ಯು. ಪಿ. ಶಿವಾನಂದ ಅವರು ಭಾಜನರಾಗಿದ್ದಾರೆ.

ತಲಾ ಎರಡು ಲಕ್ಷ ರೂ. ನಗದು, ಸ್ಮರಣಿಕೆ ಹಾಗೂ ಫ‌ಲ-ತಾಂಬೂಲ ಒಳಗೊಂಡ ಈ ಎರಡೂ ಪ್ರಶಸ್ತಿಗಳಿಗೆ ಕರ್ನಾಟಕ ಉತ್ಛ ನ್ಯಾಯಲಯದ ನಿವೃತ್ತ ಮೂರ್ತಿಗಳಾದ ನ್ಯಾ.ಡಿ. ವಿ. ಶೈಲೇಂದ್ರ ಕುಮಾರ್‌ ಅವರ ಅಧ್ಯಕ್ಷತೆಯಲ್ಲಿ ರಾಜ್ಯ ಸರ್ಕಾರ ಆಯ್ಕೆ ಸಮಿತಿಯನ್ನು ರಚಿಸಿತ್ತು. ಜನವರಿ ಮೊದಲನೇ ವಾರದಲ್ಲಿ ನಡೆಯಲಿರುವ ವಿಶೇಷ ಸಮಾರಂಭದಲ್ಲಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಈ ಪ್ರಶಸ್ತಿಗಳನ್ನು ಪ್ರದಾನ ಮಾಡಲಿದ್ದಾರೆ.

2016ನೇ ಸಾಲಿನ ಟೀಯೆಸ್ಸಾರ್‌ ಸ್ಮಾರಕ ಪತ್ರಿಕೋದ್ಯಮ ಪ್ರಶಸ್ತಿಗೆ ಆಯ್ಕೆಯಾಗಿರುವ ಪ್ರಜಾವಾಣಿ ಪತ್ರಿಕೆಯ ನಿವೃತ್ತ ಸಹ ಸಂಪದಾಕ ನಾಗೇಶ್‌ ಹೆಗಡೆ ಹಾಗೂ ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿಗೆ ಭಾಜನರಾಗಿರುವ ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಮುಂಜಾವು ದಿನ ಪತ್ರಿಕೆಯ ಸಂಪಾದಕ ಗಂಗಾಧರ ಹಿರೇಗುತ್ತಿ ಅವರಿಗೂ ತಲಾ ಎರಡು ಲಕ್ಷ ರೂ. ನಗದು ಒಳಗೊಂಡ ಪ್ರಶಸ್ತಿಗಳನ್ನು ಮುಖ್ಯಮಂತ್ರಿಯವರು ಪ್ರದಾನ ಮಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next