Advertisement
ಅದರಂತೆ ಟಿಟಿಡಿಯ ಹಿಂದೂಯೇತರ ಉದ್ಯೋಗಿಗಳು ಸ್ವಯಂ ನಿವೃತ್ತಿ (ವಿಆರ್‌ಎಸ್) ತೆಗೆದುಕೊಳ್ಳಬೇಕು. ಇಲ್ಲದಿದ್ದರೆ ಆಂಧ್ರಪ್ರದೇಶ ಸರಕಾರದ ಇತರ ಇಲಾಖೆಗಳಿಗೆ ವರ್ಗಾವಣೆ ಆಗಬೇಕು ಎಂದು ಸೂಚಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ. ಅಷ್ಟೇ ಅಲ್ಲದೆ ದೇಗುಲದ ಆವರಣದಲ್ಲಿ ಹಿಂದೂ ವ್ಯಾಪಾರಿಗಳಿಗೆ ಮಾತ್ರ ಅಂಗಡಿಗಳನ್ನು ಇಡಲು ಅವಕಾಶ ಕಲ್ಪಿಸಲಾಗುವುದು. ಅಲ್ಲೂ ಇತರ ಧರ್ಮೀಯರಿಗೆ ಅವಕಾಶ ಇಲ್ಲ ಎಂಬ ತೀರ್ಮಾನಕ್ಕೆ ಬರಲಾಗಿದೆ.
Related Articles
Advertisement
ರಾಜ್ಯ ಸರಕಾರಕ್ಕೆ ಪತ್ರತಿರುಮಲದಲ್ಲಿ ಕೆಲಸ ಮಾಡುತ್ತಿರುವ ಹಿಂದೂಯೇತರರ ಬಗ್ಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳುವಂತೆ ರಾಜ್ಯ ಸರಕಾರಕ್ಕೆ ಪತ್ರ ಬರೆಯುತ್ತೇವೆ. ಟಿಟಿಡಿ ಹಿಂದೂ ಧಾರ್ಮಿಕ ಸಂಸ್ಥೆಯಾಗಿದ್ದು, ದೇವಸ್ಥಾನದಲ್ಲಿ ಕೆಲಸ ಮಾಡಲು ಹಿಂದೂಯೇತರರ ನೇಮಿಸಿಕೊಳ್ಳಬಾರದು ಎಂದು ಮಂಡಳಿ ಅಭಿಪ್ರಾಯಪಟ್ಟಿದೆ. ಅವರನ್ನು ಬೇರೆ ಬೇರೆ ಇಲಾಖೆಗಳಲ್ಲಿ ಸೇರಿಸಿಕೊಳ್ಳಲು ಅಥವಾ ಅವರಿಗೆ ಸ್ವಯಂ ನಿವೃತ್ತಿ ಯೋಜನೆ ನೀಡಲು ನಾವು ಸರ್ಕಾರಕ್ಕೆ ಪತ್ರ ಬರೆಯುತ್ತೇವೆ ಎಂದು ಬಿ.ಆರ್ ನಾಯ್ದು ಹೇಳಿದ್ದಾರೆ. ಟಿಟಿಡಿಯಿಂದ ಭೂಮಿಯನ್ನು ಗುತ್ತಿಗೆಗೆ ಪಡೆದಿರುವ ವಿಶಾಖ ಶಾರದಾ ಪೀಠವು ಹಲವಾರು ಉಲ್ಲಂಘನೆಗಳ ಮಾಡಿದೆ ಎಂದು ಪ್ರತಿಪಾದಿಸಿದ ಅವರು, ಜಮೀನು ಗುತ್ತಿಗೆ ರದ್ದುಗೊಳಿಸಲಾಗುವುದು ಮತ್ತು ಭೂಮಿಯಲ್ಲಿ ನಿರ್ಮಿಸಲಾದ ಕಟ್ಟಡ ನೆಲಸಮಗೊಳಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಟಿಟಿಡಿ ಮಂಡಳಿ ನಿರ್ಣಯಗಳು
– ದೇಗುಲದ ಆವರಣದಲ್ಲಿ ಹಿಂದೂಯೇತರರ ಮಳಿಗೆಗಳಿಗೆ ನಿಷೇಧ – ದರ್ಶನದ ಕಾಯುವಿಕೆ ಅವಧಿ ಇಳಿಸಲು ತಜ್ಞರ ಸಮಿತಿ ರಚನೆ – ಖಾಸಗಿ ಬ್ಯಾಂಕ್‌ಗಳಲ್ಲಿರುವ ದೇಗುಲದ ಠೇವಣಿ ರಾಷ್ಟ್ರೀಕೃತ ಬ್ಯಾಂಕ್‌ಗಳಿಗೆ ವರ್ಗ – ದೇಗುಲಕ್ಕೆ ಭೇಟಿ ನೀಡುವ ರಾಜಕೀಯ ನಾಯಕರು ಅಲ್ಲಿ ರಾಜಕೀಯ ಹೇಳಿಕೆ ನೀಡುವುದಕ್ಕೆ ನಿಷೇಧ – ಈ ನಿಯಮ ಉಲ್ಲಂಘಿಸಿದವರ ವಿರುದ್ಧ ಕಾನೂನಿನ ಅನ್ವಯ ಕ್ರಮಕ್ಕೆ ಟಿಟಿಡಿ ತೀರ್ಮಾನ – ಪವಿತ್ರ ಲಡ್ಡು ತಯಾರಿಕೆಗೆ ಉತ್ತಮ ಗುಣಮಟ್ಟದ ತುಪ್ಪ ಖರೀದಿಗೆ ಹೊಸ ಟೆಂಡರ್ ಕರೆಯಲು ತೀರ್ಮಾನ