Advertisement
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಆರೋಗ್ಯ ಸೌಧದಲ್ಲಿ ನಡೆದ, ‘ವಿಶ್ವ ಕ್ಷಯರೋಗ ದಿನ’ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ರಾಜ್ಯದಲ್ಲಿ ಕೋವಿಡ್ ನಿಂದ ಗುಣಮುಖರಾದವರಿಗೆ ಮೊಟ್ಟ ಮೊದಲ ಬಾರಿಗೆ ಸರ್ಕಾರದಿಂದಲೇ ಕ್ಷಯ ಪರೀಕ್ಷೆ ಮಾಡಲಾಗಿದೆ. ಪರೀಕ್ಷೆಗೊಳಪಟ್ಟ 25 ಲಕ್ಷ ಜನರಲ್ಲಿ 144 ಜನರಿಗೆ ಕ್ಷಯ ದೃಢಪಟ್ಟಿದೆ. ಕೋವಿಡ್ ಬಂದ ಬಳಿಕವೇ ಇವರಿಗೆ ಕ್ಷಯ ಬಂದಿದೆ. ಹೀಗಾಗಿ ಈ ಬಗ್ಗೆ ಹೆಚ್ಚು ಅಧ್ಯಯನ ಮಾಡಿ ವರದಿ ಸಿದ್ಧಪಡಿಸಲು ಸೂಚಿಸಲಾಗಿದೆ. ರಾಜ್ಯವನ್ನು ಕ್ಷಯ ಮುಕ್ತ ಮಾಡುವ ಗುರಿಯನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದರು.
Related Articles
Advertisement
ರೋಗಿಯನ್ನು ದೂರ ಮಾಡಬಾರದು
ಸಾಂಕ್ರಾಮಿಕ ರೋಗವೆಂದರೆ, ರೋಗಿಯ ವಿರುದ್ಧ ಯುದ್ಧ ಆರಂಭವಾಗಿಬಿಡುತ್ತದೆ. ಈ ರೀತಿಯ ಪರಿಸ್ಥಿತಿ ಸಮಾಜದಲ್ಲಿ ಉಂಟಾಗಬಾರದು. ಇದರಿಂದಾಗಿ ರೋಗಿಗಳು ಮಾನಸಿಕವಾಗಿ ಬಳಲುತ್ತಾರೆ. ಇಂತಹವರಿಗೆ ಮಾನಸಿಕ ಸ್ಥೈರ್ಯ ತುಂಬುವ ಕೆಲಸ ಮಾಡಬೇಕು. ಕೋವಿಡ್ ಬಂದ ಬಳಿಕ ನಿಮ್ಹಾನ್ಸ್ ಸಂಸ್ಥೆಯು 25 ಲಕ್ಷ ಜನರಿಗೆ ಆಪ್ತ ಸಮಾಲೋಚನೆ ನಡೆಸಿದೆ. ಇದೇ ರೀತಿ, ಕ್ಷಯದ ಚಿಕಿತ್ಸೆಯ ಜೊತೆಗೆ ರೋಗಿಗೆ ಹಾಗೂ ಕುಟುಂಬದವರಿಗೆ ಆಪ್ತ ಸಮಾಲೋಚನೆ ಮಾಡಬೇಕಿದೆ. ಕ್ಷಯ ಕಂಡುಬಂದ ಬಳಿಕ ಆ ಸೋಂಕು ರೋಗಿಯ ಮನೆಯವರಿಗೆ ಹರಡದಂತೆ ಎಚ್ಚರ ವಹಿಸಲು ಮಾರ್ಗದರ್ಶನ ನೀಡಬೇಕು ಎಂದರು.
ಕ್ಷಯ ನಿಯಂತ್ರಣ
ಕ್ಷಯ ನಿಯಂತ್ರಣದಲ್ಲಿ ರಾಜ್ಯದ ಐದು ಜಿಲ್ಲೆಗಳಿಗೆ ಬೆಳ್ಳಿ ಪದಕ ಬಂದಿದೆ. ಈ ಜಿಲ್ಲೆಗಳಲ್ಲಿ ಹಿಂದಿನ ಸಾಲಿಗೆ ಹೋಲಿಸಿದರೆ ಈ ವರ್ಷ ಕ್ಷಯ ಪ್ರಕರಣಗಳ ಪ್ರಮಾಣ ಶೇ.40 ರಷ್ಟು ಇಳಿಕೆಯಾಗಿದೆ. ಇದೇ ರೀತಿ 9 ಜಿಲ್ಲೆಗಳಿಗೆ ಕಂಚಿನ ಪದಕ ಲಭಿಸಿದೆ. ಒಟ್ಟು 14 ಜಿಲ್ಲೆಗಳಲ್ಲಿ ಕ್ಷಯ ನಿಯಂತ್ರಣದಲ್ಲಿ ಗಮನಾರ್ಹ ಸಾಧನೆಯಾಗಿರುವುದು ಶ್ಲಾಘನೀಯ. ಮುಂದಿನ ವರ್ಷಗಳಲ್ಲಿ ಇನ್ನಷ್ಟು ಹೆಚ್ಚು ಕ್ರಮ ಕೈಗೊಂಡು ಚಿನ್ನದ ಪದಕ ಪಡೆಯುವಂತಾಗಬೇಕು ಎಂದು ಸಲಹೆ ನೀಡಿದರು.