Advertisement
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಕ್ಷಯ ರೋಗ ನಿಯಂತ್ರಣಾಧಿಕಾರಿ ಡಾ|| ಎ.ಸಿ. ಶಿವಕುಮಾರ್ ಅವರು, ಜಿಲ್ಲೆಯಲ್ಲಿ ಒಟ್ಟು 6,06829 ಜನಸಂಖ್ಯೆಯಿದ್ದು, ರಾಜ್ಯ ಕ್ಷಯ ರೋಗದ ಮಾರ್ಗಸೂಚಿಯನ್ವಯ ಈ ಪೈಕಿ ಶೇ.20ರಷ್ಟು ಜನಸಂಖ್ಯೆಯನ್ನು ಸಮೀಕ್ಷೆಗಾಗಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ ಎಂದರು.
Related Articles
Advertisement
ಪ್ರಸಕ್ತ ಜಿಲ್ಲಾಸ್ಪತ್ರೆಯಲ್ಲೇ ಕಫದ ಮಾದರಿ ಪರೀಕ್ಷೆಗೆ ಅಗತ್ಯವಿರುವ ತಂತ್ರಜ್ಞಾನವಿರುವುದಾಗಿ ತಿಳಿಸಿದ ಅವರು, ಕ್ಷಯ ರೋಗದ ಲಕ್ಷಣ ಕಂಡು ಬಂದವರಿಗೆ 6-8 ತಿಂಗಳವರೆಗೆ ಉಚಿತವಾಗಿ ಚಿಕಿತ್ಸೆ ನೀಡಲಾಗುವುದಲ್ಲದೆ, ಕ್ಷಯ ರೋಗಕ್ಕೆ ಚಿಕಿತ್ಸೆ ಪಡೆಯುವವರಿಗೆ ಪೌಷ್ಠಿಕಾಂಶದ ಆಹಾರ ಸೇವನೆಗಾಗಿ ಕೇಂದ್ರ ಸರಕಾರ ಮಾಸಿಕ 500 ರೂ.ಗಳ ಪೋ›ತ್ಸಾಹಧನವನ್ನೂ ನೀಡಲಿದೆ ಎಂದವರು ತಿಳಿಸಿದರು.
ಜಿಲ್ಲೆಯಲ್ಲಿ ಕಳೆದ ಆರ್ಥಿಕ ವರ್ಷದಲ್ಲಿ 412ಮಂದಿ ಕ್ಷಯ ರೋಗಿಗಳನ್ನು ಪತ್ತೆ ಮಾಡಲಾಗಿದ್ದು, ಈ ಪೈಕಿ ಶೇ. 85ರಷ್ಟು ಮಂದಿ ಗುಣಮುಖರಾಗಿದ್ದಾರೆ. ಶೇ.5ರಷ್ಟು ಮಂದಿ ವಿವಿಧ ಕಾರಣಗಳಿಗಾಗಿ ಅರ್ಧದಲ್ಲೇ ಚಿಕಿತ್ಸೆಯನ್ನು ಸ್ಥಗಿತಗೊಳಿಸಿದ್ದು,ಶೇ. 5ರಷ್ಟು ಮಂದಿ ಸಾವಿಗೀಡಾಗಿದ್ದಾರೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ವಿಶ್ವ ಸಂಸ್ಥೆಯು 2035ರ ವೇಳೆಗೆ ವಿಶ್ವವನ್ನು ಕ್ಷಯರೋಗ ಮುಕ್ತಗೊಳಿಸುವ ಗುರಿ ಹೊಂದಿದೆ. ಆದರೆ ಪ್ರಧಾನಿ ನರೇಂದ್ರ ಮೋದಿ ಅವರು ಅದಕ್ಕಿಂತ 10 ವರ್ಷ ಮುಂಚಿತವಾಗಿಯೇ ಭಾರತವನ್ನು ಕ್ಷಯ ರೋಗ ಮುಕ್ತ ದೇಶವನ್ನಾಗಿ ಮಾಡುವ ಸಂಕಲ್ಪ ತೊಟ್ಟಿದ್ದು, ಈ ಹಿನ್ನೆಲೆಯಲ್ಲಿ ವರ್ಷಕ್ಕೆ ಎರಡು ಬಾರಿ ಕ್ಷಯ ರೋಗಿಗಳನ್ನು ಪತ್ತೆ ಮಾಡಿ ಚಿಕಿತ್ಸೆ ನೀಡುವ ಆಂದೋಲವನ್ನು ನಡೆಸಲಾಗುತ್ತಿದೆ ಎಂದು ಅವರು ಹೇಳಿದರಲ್ಲದೆ, ಇದೇ ಉದ್ದೇಶದಿಂದ ಕೇಂದ್ರ ಸರಕಾರ ಚಿಕಿತ್ಸೆ ಪಡೆದುಕೊಳ್ಳುವವರಿಗೆ ಪೋ›ತ್ಸಾಧನವನ್ನೂ ನೀಡುತ್ತಿದೆ ಎಂದು ತಿಳಿಸಿದರು.ಸುದ್ದಿಗೋಷ್ಠಿಯಲ್ಲಿ ಸಿಬಂದಿ ಕಾರ್ಯಪ್ಪ ಅವರು ಉಪಸ್ಥಿತದ್ದರು.