Advertisement
ಎದೆ ನೋವು, ತೂಕ ಕಡಿಮೆಯಾಗುವುದು, ಕಫದಲ್ಲಿ ರಕ್ತ ಬೀಳುವುದು, ಹಲವಾರು ದಿನಗಳಿಂದ ಕೆಮ್ಮು, ಜ್ವರದ ಬಾಧೆಯಿಂದ ಬಳಲುತ್ತಿರುವ ವ್ಯಕ್ತಿಗಳನ್ನು ಆಸ್ಪತ್ರೆಗೆ ದಾಖಲಿಸಿ ನಿಯಮಿತ ಅವಧಿವರೆಗೆ ಚಿಕಿತ್ಸೆ ಪಡೆದರೆ ಕ್ಷಯರೋಗ ಸಂಪೂರ್ಣ ಗುಣಪಡಿಸಬಹುದು ಎಂದರು.
Related Articles
Advertisement
ಸನ್ಮಾನ: ಇದೇ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಕ್ಷಯರೋಗ ಬಗ್ಗೆ ಅತ್ಯುತ್ತಮ ಸೇವೆ ಸಲ್ಲಿಸಿದ ಆರೋಗ್ಯ ಸಿಬ್ಬಂದಿ, ಕಿರಿಯ ಆರೋಗ್ಯ ಸಹಾಯಕರು ಹಾಗೂ ಆಶಾ ಕಾರ್ಯಕರ್ತೆಯರು ಮತ್ತು ಕ್ಷಯರೋಗ ಕುರಿತು ಏರ್ಪಡಿಸಿದ್ದ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದ ವಿದ್ಯಾರ್ಥಿಗಳಿಗೆಸನ್ಮಾನ ಮಾಡಲಾಯಿತು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ| ಇಂದುಮತಿ ಕಾಮಶೆಟ್ಟಿ, ಜಿಲ್ಲಾ ಕ್ಷಯರೋಗ ನಿರ್ಮೂಲನಾ ಧಿಕಾರಿ ಡಾ| ಲಕ್ಷಿಕಾಂತ್, ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ| ಭಗವಂತ ಅನ್ವರ, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ನಾಗರಾಜ ಬಿ. ಪಾಟೀಲ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಮುಬಷೀರ ಅಹ್ಮದ್ ಸಾಜೀದ್, ಐಎಂಎ ಅಧ್ಯಕ್ಷ ಸಿ.ಎಂ ಪಾಟೀಲ್ ಸೇರಿದಂತೆ ಇತರರು ಇದ್ದರು. ಜಾಗೃತಿ ಜಾಥಾಕ್ಕೆ ಜಿಪಂ ಸಿಇಒ ಚಾಲನೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆವರಣದಲ್ಲಿ ಜಾಗೃತಿ ಜಾಥಾಕ್ಕೆ ಜಿಪಂ ಸಿಇಒ ಶಿಲ್ಪಾ ಶರ್ಮಾ ಚಾಲನೆ ನೀಡಿದರು. ಕ್ಷಯರೋಗ ಗುಣಪಡಿಸಬಹುದಾದ ಕಾಯಿಲೆ, ಧೂಮಪಾನದಿಂದ ಆರೋಗ್ಯಕ್ಕೆ ಹಾನಿಕಾರಕ, ಕೆಮ್ಮುವಾಗ ಬಾಯಿಗೆ ಕರವಸ್ತ್ರ ಅಡ್ಡವಿಟ್ಟುಕೊಳ್ಳಬೇಕು, ಕ್ಷಯ ರೋಗ ಪರೀಕ್ಷೆ ಮತ್ತು ಚಿಕಿತ್ಸೆ ಉಚಿತ, ಇವೇ ಮೊದಲಾದ ಭಿತ್ತಿ ಫಲಕ ಹಿಡಿದು ಆರೋಗ್ಯ ಇಲಾಖೆ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರು ಮೆರವಣಿಗೆಯಲ್ಲಿ ಸಾಗಿದರು. ಜಾಥಾ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿಯಿಂದ ನಗರಸಭೆ ರಸ್ತೆ ಮೂಲಕ ಗಾಂಧಿ ವೃತ್ತದವರೆಗೂ ತಲುಪಿತು.