Advertisement
ಸ್ಥಳೀಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಜರುಗಿದ ಸಕ್ರಿಯ ಕ್ಷಯರೋಗ ಪತ್ತೆ ಮತ್ತು ಚಿಕಿತ್ಸೆ ಆಂದೋಲನದ ಪೂರ್ವಭಾವಿ ಸಿದ್ಧತೆ ಪರಿಶೀಲನೆ ನಡೆಸಿ, ಪ್ರಚಾರ ಸಾಮಗ್ರಿಗಳನ್ನು ಬಿಡುಗಡೆಗೊಳಿಸಿ ಮಾತನಾಡಿದರು. 2020-25ರ ವೇಳೆಗೆ ಕ್ಷಯರೋಗವನ್ನು ನಿರ್ಮೂಲನೆ ಮಾಡುವ ಗುರಿ ಹಾಕಿಕೊಳ್ಳಲಾಗಿದ್ದು, ಸಾಮಾಜಿಕ ಹಾಗೂ ಆರ್ಥಿಕ ದುರ್ಬಲವರ್ಗದವರನ್ನು ಕೇಂದ್ರೀಕೃತವಾಗಿಸಿಕೊಂಡು ಮನೆ ಮನೆ ಭೇಟಿಯ ಮೂಲಕ ಸಕ್ರಿಯವಾಗಿ ಕ್ಷಯರೋಗ ಪ್ರಕರಣಗಳನ್ನು ಪತ್ತೆ ಹಚ್ಚಿ ಚಿಕಿತ್ಸೆ ನೀಡಲಾಗುತ್ತದೆ ಎಂದರು.
Related Articles
Advertisement
ಕ್ಷಯರೋಗಕ್ಕೆ ಅತ್ಯುತ್ತಮ ಗುಣಮಟ್ಟದ ಔಷಧಗಳು ಸರ್ಕಾರದಿಂದ ಪೂರೈಕೆಯಾಗುತ್ತಿದೆ. ಐದು ಲಕ್ಷ ರೂ. ವೆಚ್ಚದವರೆಗೆ ಪ್ರತಿ ರೋಗಕ್ಕೆ ಸರ್ಕಾರದಿಂದ ಉಚಿತವಾಗಿ ಔಷಧ ಒದಗಿಸಲಾಗುವುದು. ಖಾಸಗಿ ಆಸ್ಪತ್ರೆಗಳಿಗೂ ಉಚಿತವಾಗಿ ಔಷಧ ನೀಡಲು ಅವಕಾಶವಿದೆ. ಕ್ಷಯರೋಗವನ್ನು ಗೌಪ್ಯವಾಗಿಡದೇ ಮಾಹಿತಿಯನ್ನು ಆರೋಗ್ಯ ಇಲಾಖೆಯೊಂದಿಗೆ ಹಂಚಿಕೊಳ್ಳಬೇಕು ಎಂದು ತಿಳಿಸಿದರು.
ಹಾವೇರಿ ಜಿಲ್ಲೆಯಲ್ಲಿ 2019-20ನೇ ಸಾಲಿನಲ್ಲಿ 2076 ಕ್ಷಯರೋಗಿಗಳು ಪತ್ತೆಯಾಗಿದ್ದು, 1586 ರೋಗಿಗಳು ಗುಣಮುಖರಾಗಿದ್ದಾರೆ. 125 ರೋಗಳು ಮರಣ ಹೊಂದಿದ್ದು, 37 ರೋಗಿಗಳು ಮಧ್ಯದಲ್ಲಿ ಚಿಕಿತ್ಸೆ ನಿಲ್ಲಿಸಿದ್ದಾರೆ. ಇಂತಹ ರೋಗಿಗಳನ್ನು ಪತ್ತೆ ಹಚ್ಚಿ ಮತ್ತೆ ಚಿಕಿತ್ಸೆಗೆ ಒಳಪಡಿಸಲು ಸೂಚನೆ ನೀಡಿದರು. ಜಿಲ್ಲೆಯ ಏಳು ತಾಲೂಕುಗಳಲ್ಲಿ ಡಿಸೆಂಬರ್‌ನಲ್ಲಿ ಬೇರೆ ಬೇರೆ ದಿನಾಂಕಗಳಂದು ನಡೆಯಲಿದೆ. ಜಿಲ್ಲೆಯಲ್ಲಿ 2,86,637 ಜನರನ್ನು ಸಮೀಕ್ಷೆಗೆ ಒಳಪಡಿಸವ ಗುರಿ ಹೊಂದಲಾಗಿದೆ. ಇದಕ್ಕಾಗಿ 615 ತಂಡಗಳನ್ನು ರಚಿಸಲಾಗಿದೆ. ಸುಮಾರು 1230 ಕಾರ್ಯಕರ್ತರು ಕಾರ್ಯನಿರ್ವಹಿಸಲಿದ್ದಾರೆ ಎಂದರು.
ಸಭೆಯಲ್ಲಿ ಜಿಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ರಮೇಶ ದೇಸಾಯಿ, ಡಾ| ಜಯಾನಂದ, ಡಾ| ಹಂಸವೇಣಿ ಒಳಗೊಂಡಂತೆ ವಿವಿಧ ವೈದ್ಯರು ಹಾಗೂ ಸ್ವಯಂಸೇವಾ ಸಂಘದ ಸದಸ್ಯರು ಉಪಸ್ಥಿತರಿದ್ದರು.
ಕ್ಷಯರೋಗ ಪತ್ತೆ ಮತ್ತು ಸೂಕ್ತ ಚಿಕಿತ್ಸೆ ಮೂಲಕ ನಿರ್ಮೂಲನೆಗಾಗಿ ಖಾಸಗಿ ವೈದ್ಯರು ಸೇರಿದಂತೆ ಸಾರ್ವಜನಿಕರ ಸಹಕಾರ ಅಗತ್ಯವಿದೆ. ಖಾಸಗಿ ವೈದ್ಯರಿಗೂ ಈ ಕುರಿತು ಅರಿವು ಮೂಡಿಸಿ ಜಿಲ್ಲೆಯಲ್ಲಿ ಕ್ಷಯರೋಗ ನಿರ್ಮೂಲನೆ ಹಾಗೂ ಇದರಿಂದ ಎದುರಾಗುತ್ತಿರುವ ಮರಣ ಪ್ರಮಾಣ ಕಡಿಮೆ ಮಾಡಲು ಎಲ್ಲರೂ ಶ್ರಮಿಸಬೇಕು. –ಸಂಜಯ ಶೆಟ್ಟೆಣ್ಣವರ, ಜಿಲ್ಲಾಧಿಕಾರಿಗಳು