Advertisement

ಮಂಗಳವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

07:52 AM Oct 05, 2021 | Team Udayavani |

ಮೇಷ: ಹಿರಿಯರಿಂದ ಸುಖ ಸಂತೋಷ. ಸರಕಾರಿ ಕೆಲಸಗಳಲ್ಲಿ ಪ್ರಗತಿ. ಗಣ್ಯರ ಸಂಪರ್ಕ ಮಾನ್ಯತೆ. ಸ್ವಸಾಮರ್ಥಯದಿಂದ ಧನ ಸಂಪಾದನೆ. ಸಹೋದ್ಯೋಗಿಗಳ ಸಹಕಾರ ಭೂಮ್ಯಾದಿ ವ್ಯವಹಾರಗಳಲ್ಲಿ ಪ್ರಗತಿ.

Advertisement

ವೃಷಭ: ಧೈರ್ಯ, ಶೌರ್ಯ ಪರಾಕ್ರಮದಿಂದ ಕೂಡಿದ ಸ್ವಾಭಿಮಾನಕ್ಕೆ ಧಕ್ಕೆಯಾಗದಂತೆ ಕಾರ್ಯವೈಖರಿ. ಸಂಪತ್ತುವೃದ್ಧಿ.ದಾನಧರ್ಮದಲ್ಲಿಆಸಕ್ತಿ ಶ್ರದ್ಧೆ.ಬಂಧು-ಮಿತ್ರರ ಸಹಕಾರ. ಸಾಮಾಜಿಕ ಚಟುವಟಿಕೆಗಳಲ್ಲಿ ಭಾಗಿ.

ಮಿಥುನ: ಸಂಶೋಧನಾತ್ಮಕ ಪ್ರವೃತ್ತಿ. ಆರೋಗ್ಯ ಗಮನಿಸಿ. ವ್ಯವಹರಿಸುವಾಗ ಮಾತಿನಲ್ಲಿ ಕಠೊರತೆಗೆ ಆಸ್ಪದ ನೀಡದಿರಿ. ಹಣಕಾಸಿನ ಸಂಪತ್ತಿನ ವಿಚಾರದಲ್ಲಿ ಸಾಹಸ ಪ್ರವೃತ್ತಿ ಸಲ್ಲದು. ಅನಿರೀಕ್ಷಿತ ಧನಾಗಮನ ಸಂಭವ.

ಕರ್ಕ:ಸಾಂಸಾರಿಕಸುಖವೃದ್ಧಿದಂಪತಿಗಳಲ್ಲಿಅನುರಾಗ ಹೆಚ್ಚಾದೀತು. ದೀರ್ಘ‌ ಪ್ರಯಾಣ ಸಂಭವ. ಉತ್ತಮ ಜನರ ಒಡನಾಟದಿಂದ ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ವಿದ್ಯಾರ್ಥಿಗಳಿಗೆ ಹೆಚ್ಚಿನ ಸೌಲಭ್ಯ ಪ್ರಾಪ್ತಿ .

ಸಿಂಹ: ಆರೋಗ್ಯತೃಪ್ತಿದಾಯಕ.ಸದಾವಿದ್ಯಾರ್ಜನೆಯಲ್ಲಿ ಆಸಕ್ತಿ. ಉತ್ತಮ ಗೌರವದಿಂದ ಕೂಡಿದ ಧನ ಸಂಪತ್ತಿನ ವೃದ್ಧಿ. ಮಕ್ಕಳಿಗೆ ವಿಶೇಷ ಪ್ರೀತಿ ಸುಖ ಸಂತೋಷ. ದೂರದ ವ್ಯವಹಾರದಲ್ಲಿಪ್ರಗತಿ. ಸ್ಥಾನ ಸುಖಾಧಿಲಭ್ಯ.

Advertisement

ಕನ್ಯಾ: ಪರರಿಗೆ ಸಹಾಯ ಮಾಡುವಾಗ ಪೂರ್ವಪರ ವಿಚಾರಮಾಡಿನಿರ್ಣಯಮಾಡಿ.ಉದ್ಯೋಗ,ಸಂಪತ್ತು ವಿಚಾರದಲ್ಲಿ ಉತ್ತಮ ಪ್ರಗತಿದಾಯಕ ಬದಲಾವಣೆ ತೋರಿ ಬರುವುದು. ಸಂಶೋಧಕರಿಗೆ ಅನುಕೂಲಕರ ಪರಿಸ್ಥಿತಿ.

ತುಲಾ: ದೇವತಾ ಕಾರ್ಯಗಳಲ್ಲಿ ತತ್ಪರತೆ. ಭಾಗ್ಯ ವೃದ್ಧಿ. ಉತ್ತಮ ವಾಕ್‌ ಚತುರತೆಯಿಂದ ಕೂಡಿದ ಕಾರ್ಯವೈಖರಿ. ಕೀರ್ತಿ ಸ್ಥಾನ ಸುಖಾದಿ ಪ್ರಾಪ್ತಿ ಸಂಸಾರಿಕ ಸುಖ ವೃದ್ಧಿ. ಆಸ್ತಿ ವಿಚಾರದಲ್ಲಿ ಮುನ್ನಡೆ. ನೂತನ ಬಂಧು-ಮಿತ್ರರ ಸಹಕಾರ.

ವೃಶ್ಚಿಕ: ಬಹು ಐಶ್ವರ್ಯ ಸಿಗುವ ಸಂಭವ. ರಾಜಕೀಯ ಸರಕಾರಿ ಕಾರ್ಯಗಳಲ್ಲಿ ಮುನ್ನಡೆ. ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು ಸಾಧಿಸಿದರಿಂದ ತೃಪ್ತಿ. ದೀರ್ಘ‌ ಸಂಚಾರ. ಉದ್ಯೋಗ ವ್ಯವಹಾರಗಳಲ್ಲಿ ಮೇಲಧಿಕಾರಿಗಳ ಸಹಕಾರ ಪ್ರೋತ್ಸಾಹ ಲಭ್ಯ.

ಧನು: ಉತ್ತಮ ಆರೋಗ್ಯ. ತಾಳ್ಮೆ ಸಹನೆಯಿಂದ ನಿರ್ವಹಿಸಿದ ಕಾರ್ಯದಿಂದ ಕೀರ್ತಿ ಯಶಸ್ಸು ಲಭಿಸಿದ್ದರಿಂದ ಸಂತೋಷ. ನಿರಂತರ ಧನಾರ್ಜನೆ ಗುರುಹಿರಿಯರ ಸಹಕಾರ ಪ್ರೋತ್ಸಾಹದಿಂದ ಹೆಚ್ಚಿನ ಸ್ಥಾನಮಾನ. ದಾಂಪತ್ಯ ತೃಪ್ತಿಕರ.

ಮಕರ: ತಂದೆ ತಾಯಿಯಿಂದ ಸುಖ ಪ್ರಾಪ್ತಿ. ಬಂಧು- ಮಿತ್ರರ ಆಗಮನದಿಂದ ಗೃಹದಲ್ಲಿ ಸಂತಸದ ವಾತಾವರಣ. ಭೋಜನಾದಿ ಸಂಭ್ರಮ. ಆಸ್ತಿ ವಿಚಾರದಲ್ಲಿ ಮುನ್ನಡೆ.ದಾಂಪತ್ಯ ತೃಪ್ತಿಕರ. ಪಾಲುದಾರಿಕೆಯಲ್ಲಿಹೆಚ್ಚಿನಪ್ರಗತಿ.

ಕುಂಭ: ನೂತನ ಮಿತ್ರರ ಭೇಟಿ. ಧಾರ್ಮಿಕ ಚಟುವಟಿಕೆಗಳಿಗಾಗಿ ಪ್ರಯಾಣ. ದೂರದ ವ್ಯವಹಾರದಲ್ಲಿ ಹೆಚ್ಚಿನ ವರಮಾನ. ಪಾಲುದಾರಿಕಾ ಕ್ಷೇತ್ರದಲ್ಲಿ ಗೌರವ ವೃದ್ಧಿ . ಆರೋಗ್ಯದಲ್ಲಿ ಉತ್ತಮ ಬದಲಾವಣೆ.

ಮೀನ: ದೂರ ಪ್ರಯಾಣ. ಜನರ ಸಹಕಾರ ಸಹಾಯ ದಿಂದ ನಿರೀಕ್ಷಿತ ಸ್ಥಾನ ಗೌರವಾದಿ ಲಭ್ಯ. ಉದ್ಯೋಗ ವ್ಯವಹಾರದಲ್ಲಿ ಪ್ರಗತಿ. ಅನಿರೀಕ್ಷಿತಧನಾಗಮನ. ಅವಿವಾಹಿತರಿಗೆ ವಿವಾಹಭಾಗ್ಯ.ವಿದ್ಯಾರ್ಥಿಗಳಿಗೆ ಸರ್ವ ಸೌಲಭ್ಯ ಪ್ರಾಪ್ತಿ

Advertisement

Udayavani is now on Telegram. Click here to join our channel and stay updated with the latest news.

Next