Advertisement
ಲಂಡನ್ ಮೂಲದ ಪ್ರತಿಷ್ಠಿತ ವಲ್ಡ್೯ ರೆಕಾರ್ಡ್ ಸಂಸ್ಥೆಯು ತುಳಸಿ ಹೆಗಡೆ ಹೆಸರನ್ನು ತನ್ನ ವಿಶ್ವದಾಖಲೆಯ ಪಟ್ಟಿಯಲ್ಲಿ ಸೇರ್ಪಡೆಗೊಳಿಸಿಕೊಂಡಿದೆ. ಯಕ್ಷಗಾನ ಕಲಾ ಪ್ರಕಾರದ ಮೂಲಕ ವಿಶ್ವಶಾಂತಿಗೆ ಈವರೆಗೆ 9 ಕಲಾ ಕುಸುಮದ ಮೂಲಕ ನೀಡುತ್ತಿರುವ ಕೊಡುಗೆಗಳನ್ನು ಗಮನಿಸಿ ಮಕ್ಕಳ ವಿಭಾಗದ ತನ್ನ ದಾಖಲಾತಿಯಲ್ಲಿ ಸೇರಿಸಿಕೊಂಡಿದೆ.
Related Articles
Advertisement
ಈಗಾಗಲೇ ಇಂಡಿಯಾ ಬುಕ್ ಆಪ್ ರೆಕಾರ್ಡನಲ್ಲಿಯೂ ದಾಖಲಾಗಿದ್ದು, ಕರ್ನಾಟಕ ಬಾಲ ವಿಕಾಸ ಅಕಾಡೆಮಿ ನೀಡುವ ರಾಜ್ಯ ಮಟ್ಟದ ಬಾಲ ಗೌರವ ಪ್ರಶಸ್ತಿ, ಟೈಮ್ಸಆಫ್ ಇಂಡಿಯಾದ ದೇಶ ಮಟ್ಟದ 21 ವರ್ಷದೊಳಗಿನ ಅನ್ ಸ್ಟಾಪೇಬಲ್ 21 ಅವಾರ್ಡ ಸೇರಿದಂತೆ ಅನೇಕ ಪ್ರಶಸ್ತಿ, ಪುರಸ್ಕಾರಗಳು ಅರಸಿ ಬಂದಿವೆ.
ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಗೂ ಅವಕಾಶ ಸಿಕ್ಕಿತ್ತು. ಈಗಿನ ವಿಶ್ವ ದಾಖಲಾತಿಗೆ ಸೇರಲು ದಿ ಟೈಮ್ಸ್ ಆಫ್ ಇಂಡಿಯಾ ಬಳಗ ಕಳೆದ ಅಕ್ಟೋಬರ್ ನಲ್ಲಿ ನೀಡಿದ ಅನ್ ಸ್ಟಾಪೇಬಲ್ 21 ಪ್ರಶಸ್ತಿ ನೆರವಾಗಿದೆ ಎಂಬುದೂ ಉಲ್ಲೇಖನೀಯ.
ಇಂಥದೊಂದು ಗುರುತು ಸಿಕ್ಕಿದ್ದು ಖುಷಿ, ಸಂಭ್ರಮ. ಯಕ್ಷಗಾನದಿಂದಲೇ ಈ ಅವಕಾಶ ಸಿಕ್ಕಿದ್ದು ಅದಕ್ಕೇ ಇದನ್ನು ಅರ್ಪಿಸುವೆ. ಈ ದಾರಿಯಲ್ಲಿ ಸಹಕಾರ ನೀಡಿದ ಎಲ್ಲರಿಗೂ ಪ್ರೀತಿಯ ಕೃತಜ್ಞತೆ.– ತುಳಸಿ ಹೆಗಡೆ, ಕಲಾವಿದೆ. ಇದನ್ನೂ ಓದಿ: ಅನುದಾನದ ಹಂಚಿಕೆ ವಿಚಾರ: ಪ.ಪಂ.ಸಭೆಯಲ್ಲಿ ಆಡಳಿತಾಧಿಕಾರಿ, ಸದಸ್ಯರ ನಡುವೆ ಜಟಾಪಟಿ