Advertisement

ತುಳಸಿದಾಸ್‌ ಆಸ್ಪತ್ರೆ ಕೋವಿಡ್‌ಗೇ ಮೀಸಲು‌

05:31 AM Jun 28, 2020 | Lakshmi GovindaRaj |

ಮೈಸೂರು: ಜಿಲ್ಲೆಯಲ್ಲಿ ಕೋವಿಡ್‌ ಪ್ರಕರಣ ಹೆಚ್ಚುತ್ತಿರುವ ಕಾರಣ ತುಳಸಿ ದಾಸ್‌ ತಾಯಿ ಮತ್ತು ಮಗುವಿನ ಆಸ್ಪತ್ರೆ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ ಎರಡನೇ ಕೋವಿಡ್‌ ಆಸ್ಪತ್ರೆಯಾಗಿ ಮಾಡಲಾಗುವುದು ಎಂದು  ಸಂಸದ ಪ್ರತಾಪ್‌ಸಿಂಹ ಹೇಳಿದರು.

Advertisement

ನಗರದ ಜೆಎಲ್‌ಬಿ ರಸ್ತೆಯಲ್ಲಿ ನೂತನವಾಗಿ ನಿರ್ಮಿಸಿರುವ ತುಳಸಿದಾಸ್‌ ಆಸ್ಪತ್ರೆ ಕಟ್ಟಡ ಪರಿಶೀಲಿಸಿ ಮಾತನಾಡಿ, ಮೈಸೂರಿನ ತುಳಸಿದಾಸ್‌ ಆಸ್ಪತ್ರೆ ವ್ಯಾಪ್ತಿಯಲ್ಲಿ ಕೇಂದ್ರ ಸರ್ಕಾರದ ಅನುದಾನದಲ್ಲಿ  ಹೊಸದಾಗಿ ನಿರ್ಮಿಸುತ್ತಿರುವ ತಾಯಿ ಮತ್ತು ಮಗುವಿನ ಆಸ್ಪತ್ರೆ ಕಾಮಗಾರಿ ಪೂರ್ಣಗೊಳಿಸುವ ಹಂತಕ್ಕೆ ಬಂದಿದ್ದು, ಎರಡನೇ ಕೋವಿಡ್‌ ಆಸ್ಪತ್ರೆಯನ್ನಾಗಿ ಮೀಸಲಿಡಲಾಗುವುದು ಎಂದರು.

ಒಂದೂವರೆ ತಿಂಗಳಲ್ಲಿ ಆಸ್ಪತ್ರೆ ಕಾಮಗಾರಿ  ಮುಗಿಯತ್ತೆ. ಕೋವಿಡ್ 19 ಸೋಂಕಿತರ ಸಂಖ್ಯೆ ಹೆಚ್ಚಾದ ಸಂದರ್ಭದಲ್ಲಿ 2ನೇ ಕೋವಿಡ್‌ ಆಸ್ಪತ್ರೆಯಾಗಿ ಬಳಸಿಕೊಳ್ಳಲು ಅನುಕೂಲವಾಗಲಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next