Advertisement

ತುಳು ಅಕಾಡೆಮಿ ಭವನದ ಕಾಮಗಾರಿಗೆ ವೇಗ: ಡಾ|ಸಿ. ಸೋಮಶೇಖರ್‌ ಸೂಚನೆ

11:50 PM Feb 21, 2023 | Team Udayavani |

ಮಂಗಳೂರು: ಮಂಗಳೂರಿನ ತುಳು ಸಾಹಿತ್ಯ ಅಕಾಡೆಮಿ ಭವನದಲ್ಲಿ ನಡೆಯುತ್ತಿ ರುವ ಕಾಮಗಾರಿಗಳಿಗೆ ವೇಗ ನೀಡುವಂತೆ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ| ಸಿ. ಸೋಮಶೇಖರ್‌ ಅಧಿಕಾರಿಗಳಿಗೆ ನಿರ್ದೇಶಿಸಿದರು.

Advertisement

ಜಿಲ್ಲಾಧಿಕಾರಿ ಕಚೇರಿಯಲ್ಲಿ ಗಡಿ ಪ್ರದೇಶ ಅಭಿವೃದ್ಧಿ ಕಾರ್ಯಕ್ರಮ ಕುರಿತು ಮಂಗಳವಾರ ಹಮ್ಮಿ ಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮಂಗಳೂರಿನಲ್ಲಿ ನಿರ್ಮಾಣವಾ ಗುತ್ತಿರುವ ತುಳು ಸಾಹಿತ್ಯ ಅಕಾಡೆಮಿ ಭವನಕ್ಕೆ 3.60 ಕೋ.ರೂ. ಮಂಜೂರು ಮಾಡಲಾಗಿದೆ. ಕಾಮಗಾರಿ ನಿರ್ವಹಿಸುತ್ತಿರುವ ಲೋಕೋಪಯೋಗಿ ಇಲಾಖೆ
ಮಾರ್ಚ್‌ನೊಳಗೆ ಪೂರ್ಣಗೊಳಿಸಬೇಕು. ನಿಗದಿ ಪಡಿಸಿದ ಕಾಲಮಿತಿ ಯಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಲೋಕೋಪ ಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ ಚಂದ್ರಶೇಖರಯ್ಯ ಅವರಿಗೆ ಸೂಚನೆ ನೀಡಿದರು.

ಶೇ. 75ರಷ್ಟು ಪೂರ್ಣ
ಜಿಲ್ಲಾಧಿಕಾರಿ ರವಿಕುಮಾರ್‌ ಎಂ.ಆರ್‌. ಮಾತನಾಡಿ, ತುಳು ಭವನದಲ್ಲಿ ಈಗಾಗಲೇ ಶೇ. 75ರಿಂದ 80ರಷ್ಟು ಕಾಮಗಾರಿಗಳು ಪೂರ್ಣಗೊಂಡಿದ್ದು, ನಿಗದಿತ ಅವಧಿಯಲ್ಲಿ ಕಾಮಗಾರಿ ಪೂರ್ಣ ಗೊಳ್ಳುವ ವಿಶ್ವಾಸವಿದೆ ಎಂದರು.

ನಗರದಲ್ಲಿ ನಿರ್ಮಾಣ ವಾಗುತ್ತಿರುವ ಕೊಂಕಣಿ ಸಾಹಿತ್ಯ ಅಕಾಡೆಮಿ ಭವನಕ್ಕೆ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದಿಂದ 3 ಕೋಟಿ ರೂ. ಅನುದಾನ ನೀಡಲಾಗಿದೆ. ಆ ಕಟ್ಟಡದ ಮೂಲಸೌಕರ್ಯಗಳಿಗೆ ಅಗತ್ಯವಿರುವ ಹಣವನ್ನು ಸಿಎಸ್‌ಆರ್‌ ಫಂಡ್‌ನ‌ಡಿಯೂ ಪಡೆಯಲು ಅವಕಾಶವಿದೆ. ಬ್ಯಾರಿ ಅಕಾಡೆಮಿ ಕಟ್ಟಡ ನಿರ್ಮಿಸಲು ಸೂಕ್ತ ನಿವೇಶನ ಹುಡುಕುವಂತೆ ಸೂಚಿಸಿದರು. ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ| ಕುಮಾರ್‌, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್‌ ಉಪಸ್ಥಿತರಿದ್ದರು.

Advertisement

ಜಿಲ್ಲಾ ರಂಗಮಂದಿರ: 5 ಕೋ.ರೂ ಬಿಡುಗಡೆ
ಜಿಲ್ಲಾ ರಂಗಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದಿಂದ 5 ಕೋ.ರೂ. ಬಿಡುಗಡೆಯಾಗಿದೆ. ಸರಕಾರದಿಂದ ಪರಿಷ್ಕೃತ ಆಡಳಿತಾತ್ಮಕ ಮಂಜೂರಾತಿಯನ್ನು ಮಂಗಳೂರು ಪಾಲಿಕೆ ಪಡೆದುಕೊಳ್ಳಬೇಕು. ಕಾಸರಗೋಡಿನಲ್ಲಿ ನಾಡೋಜ ಕಯ್ನಾರ ಕಿಞ್ಞಣ್ಣ ರೈ ಹೆಸರಿನಲ್ಲಿ ಕನ್ನಡ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಂಬಂಧಿಸಿದಂತೆ 9 ಸದಸ್ಯರನ್ನೊಳಗೊಂಡ ಸಮಿತಿಯನ್ನು ಈಗಾಗಲೇ ರಚಿಸಲಾಗಿದೆ. ಅವರೊಂದಿಗೆ ಚರ್ಚಿಸಿ ಕಾರ್ಯಪ್ರವೃತ್ತರಾಗುವಂತೆ ಅಧಿಕಾರಿಗಳಿಗೆ ಡಾ| ಸಿ. ಸೋಮಶೇಖರ್‌ ಸೂಚಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next