ಬಂಟ್ವಾಳ: ಇಲ್ಲಿನ ವಸತಿ ಸಂಕೀರ್ಣವೊಂದರಲ್ಲಿ ತುಳು ಚಲನಚಿತ್ರ ನಟ ಸುರೇಂದ್ರ ಬಂಟ್ವಾಳ್ ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಬಂಟ್ವಾಳ ಬಂಢಾರಿಬೆಟ್ಟು ನಿವಾಸಿಯಾಗಿದ್ದ ಸುರೇಂದ್ರ ಬಂಟ್ವಾಳ್ ಅವರು ಬಿಸಿ ರೋಡ್ ನ ಫ್ಲ್ಯಾಟ್ ನಲ್ಲಿ ವಾಸವಾಗಿದ್ದು, ಅಲ್ಲೇ ಕೊಲೆ ಮಾಡಲಾಗಿದೆ.
ಮಂಗಳವಾರ ರಾತ್ರಿ ಕೊಲೆಯಾಗಿರಬಹುದು ಎನ್ನಲಾಗಿದ್ದು, ಇಂದು ಮಧ್ಯಾಹ್ನ ಪ್ರಕರಣ ಬೆಳಕಿಗೆ ಬಂದಿದೆ. ಈ ಹಿಂದೆ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಸುರೇಂದ್ರ ಬಂಟ್ವಾಳ್ ನಂತರ ಸಂಘಟನೆ ತೊರೆದಿದ್ದರು.
ಇದನ್ನೂ ಓದಿ:ಮಲ್ಪೆ: ಬಲೆಗೆ ಬಿತ್ತು ಭಾರಿ ಗಾತ್ರದ ಎರಡು ಕೊಂಬು ತೊರಕೆ ಮೀನು
ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಆಗಮಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
2018ರಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಬಂಟ್ವಾಳ ಪೇಟೆಯಲ್ಲಿ ತಲವಾರು ದಾಳಿ ಮಾಡಿದ ಪ್ರಕರಣದಲ್ಲಿ ಸುರೇಂದ್ರ ಬಂಟ್ವಾಳ್ ಹೆಸರು ಕೇಳಿಬಂದಿತ್ತು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ನಂತರ ಸುರೇಂದ್ರ ಬಂಟ್ವಾಳ್ ರನ್ನು ಪೊಲೀಸರು ಕುಂಬ್ಳೆಯಲ್ಲಿ ಬಂಧಿಸಿದ್ದರು.