Advertisement

Tulu Movie: ಎರಡು ಭಾಗದಲ್ಲಿ ಬರುತ್ತಿದೆ ತುಳು ಸಿನಿಮಾ; ಹೊಸಚಿತ್ರಕ್ಕೆ ಮುಹೂರ್ತ

03:51 PM Nov 21, 2024 | Team Udayavani |

ಪಡುಬಿದ್ರಿ: ಶುಭಾ ಶೆಟ್ಟಿ ಪ್ರೊಡಕ್ಷನ್ಸ್ ಲಾಂಛನದಡಿಯಲ್ಲಿ ಧನರಾಜ್ ಶೆಟ್ಟಿ, ಉಮೇಶ್ ಶೆಟ್ಟಿ ಸಿನಿಮಾ ನಿರ್ಮಾಣ ಮಾಡುತ್ತಿರುವ, ಶರತ್ ಪೂಜಾರಿ ಬಗ್ಗತೋಟ ನಿರ್ದೇಶನದ ಹೊಸ ತುಳು ಚಿತ್ರಕ್ಕೆ ಗುರುವಾರ (ನ.21) ಮುಹೂರ್ತ ನಡೆಯಿತು.

Advertisement

ಗುರುವಾರ ಬೆಳಗ್ಗೆ ಪಡುಬಿದ್ರಿ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಜರುಗಿತು.

ಇನ್ನೂ ಹೆಸರಿಡದ ಚಿತ್ರವು ಎರಡು ಭಾಗಗಳಲ್ಲಿ ತೆರೆಗೆ ಬರಲಿದೆ. ಮೊದಲ ಭಾಗದ ಚಿತ್ರೀಕರಣ ಮುಗಿದ ಬಳಿಕ ಟೈಟಲ್‌ ಪೋಸ್ಟರ್‌ ಬಿಡುಗಡೆ ಮಾಡುವ ಉದ್ದೇಶದಲ್ಲಿದೆ ಚಿತ್ರತಂಡ.

ನವ ನಟ ಶೋಧನ್ ಶೆಟ್ಟಿ ನಾಯಕನಾಗಿ ನಟಿಸುತ್ತಿದ್ದ, ಚಿತ್ರದಲ್ಲಿ ನವೀನ್ ಡಿ. ಪಡೀಲ್, ಅರವಿಂದ್ ಬೋಳಾರ್, ಪ್ರಸನ್ನ ಶೆಟ್ಟಿ ಬೈಲೂರು, ರಮೇಶ್ ಶೆಟ್ಟಿ, ಸೂರಜ್ ಸನಿಲ್, ನಿತೇಶ್ ಶೆಟ್ಟಿ, ಕೀರ್ತನಾ ಸಾಲಿಯಾನ್, ಶೋಭಾ ಪ್ರಿಯಾ ನಾಯರ್, ಸಂದೀಪ್ ಪೂಜಾರಿ ಬಣ್ಣ ಹಚ್ಚಲಿದ್ದಾರೆ.

ಕಾರ್ಯಕ್ರಮದಲ್ಲಿ ಮಾತಾಡಿದ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, “ತುಳು ಭಾಷೆ, ಸಂಸ್ಕೃತಿ, ಆಹಾರ ಪದ್ಧತಿಯನ್ನು ವಿಶ್ವದಗಲ ಮೆಚ್ಚಿಕೊಂಡ ಅಸಂಖ್ಯ ಜನರಿದ್ದಾರೆ. ತುಳು ಭಾಷೆಯ ಬೆಳವಣಿಗೆಗೆ ತುಳು ನಾಟಕ, ಸಿನಿಮಾ ಮತ್ತು ತುಳು ಕಲಾವಿದರು ಬಹಳಷ್ಟು ಪ್ರಯತ್ನ ಪಡುತ್ತಿದ್ದಾರೆ. ಪಡುಬಿದ್ರಿಯ ಮಹಾಗಣಪತಿ ಸನ್ನಿಧಿಯಲ್ಲಿ ಪ್ರಾರ್ಥನೆ ಮಾಡಿದರೆ ನಮ್ಮ ಇಷ್ಟಾರ್ಥ ಸಿದ್ಧಿಯಾಗುತ್ತದೆ. ಈ ಸಿನಿಮಾ ಯಶಸ್ಸು ಕಾಣಲಿ. ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅತೀವ ಸಂತಸವಾಗುತ್ತಿದೆ” ಎಂದು ಶುಭ ಹಾರೈಸಿದರು.

Advertisement

ಹಿರಿಯ ರಂಗಕರ್ಮಿ ವಿಜಯ ಕುಮಾರ್ ಕೊಡಿಯಾಲ್ ಬೈಲ್ ಮಾತಾಡಿ, ”ತುಳು ಚಿತ್ರರಂಗಕ್ಕೆ ಈಗ ಪರ್ವಕಾಲ. ಮಂಗಳೂರಿನಲ್ಲಿ ಒಂಬತ್ತು ಸಿನಿಮಾಗಳಿಗೆ ಚಿತ್ರೀಕರಣ ನಡೆಯುತ್ತಿವೆ. ಒಳ್ಳೊಳ್ಳೆ ಸಿನಿಮಾಗಳನ್ನು ಜನರು ಖಂಡಿತ ಸ್ವೀಕರಿಸುತ್ತಾರೆ. ಸಿನಿಮಾ ತಂಡದ ಪ್ರಯತ್ನಕ್ಕೆ ತುಳುವರು ಬೆಂಬಲ ನೀಡಬೇಕು, ಚಿತ್ರತಂಡಕ್ಕೆ ಶುಭವಾಗಲಿ” ಎಂದರು.

ಕುಸೆಲ್ದರಸೆ ನವೀನ್ ಡಿ. ಪಡೀಲ್ ಮಾತನಾಡಿ,”ಸಿನಿಮಾ ಯಶಸ್ಸು ಕಾಣಲಿ. ತುಳುನಾಡಿನಲ್ಲಿ ಸಿನಿಮಾ ಒಳ್ಳೆಯ ಹೆಸರು ಮಾಡಲಿ” ಎಂದರು.

ನಾಯಕ ನಟ ಶೋಧನ್ ಶೆಟ್ಟಿ ಮಾತನಾಡಿ, ”2019ರಲ್ಲಿಯೇ ಸಿನಿಮಾ ಮಾಡಲು ತಯಾರಿ ಮಾಡಿದ್ದೆ. ಆದರೆ ಕಾರಣಾಂತರದಿಂದ ವಿಳಂಬವಾಯಿತು. ಈಗ ಕಾಲ ಕೂಡಿಬಂದಿದೆ. ನಿಮ್ಮೆಲ್ಲರ ಸಹಕಾರದಿಂದ ಸಿನಿಮಾ ಚೆನ್ನಾಗಿ ಮೂಡಿಬರಲಿದೆ. ಭಾಗ 1ರ ಚಿತ್ರೀಕರಣ ಮುಗಿದ ಬಳಿಕ ಟೈಟಲ್ ಲಾಂಚ್ ಮಾಡಲಿದ್ದೇವೆ” ಎಂದರು.

ಶುಭಾ ಶೆಟ್ಟಿ ಪ್ರೊಡಕ್ಷನ್ಸ್ ನಲ್ಲಿ ಧನರಾಜ್ ಶೆಟ್ಟಿ, ಉಮೇಶ್ ಶೆಟ್ಟಿ ಚಿತ್ರಕ್ಕೆ ಬಂಡವಾಳ ಹೂಡಿದ್ದು, ಶರತ್ ಪೂಜಾರಿ ಬಗ್ಗತೋಟ ಆಕ್ಷನ್‌ ಕಟ್ ಹೇಳಲಿದ್ದಾರೆ. ಸಂದೀಪ್ ಉಡುಪಿ ಕೆಮರಾ ಕ್ಯಾಮರಾ ಕೈಚಳಕ ಈ ಚಿತ್ರಕ್ಕಿದೆ. ಪ್ರಸಾದ್ ಕೆ.ಶೆಟ್ಟಿ ಸಂಗೀತ ಸಂಯೋಜನೆ, ರವಿರಾಜ್ ಗಾಣಿಗ ಸಂಕಲನವಿದೆ. ಕಟೀಲು, ಪಡುಬಿದ್ರಿ ಸುತ್ತಮುತ್ತಲಿನ ಸುಂದರ ತಾಣಗಳಲ್ಲಿ ಚಿತ್ರೀಕರಣ ನಡೆಯಲಿದೆ.

Advertisement

Udayavani is now on Telegram. Click here to join our channel and stay updated with the latest news.

Next