Advertisement

ತುಳು ಕರ್ನಾಟಕದ ಎರಡನೇ ಅಧಿಕೃತ ಭಾಷೆ?: ಸಚಿವ ಸುನಿಲ್ ಟ್ವೀಟ್

07:06 PM Jan 30, 2023 | Team Udayavani |

ಬೆಂಗಳೂರು : ತುಳು ಭಾಷೆಯನ್ನು ಕರ್ನಾಟಕದ ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸುವ ಸಂಬಂಧ ಅಧ್ಯಯನ ನಡೆಸಲು ರಾಜ್ಯ ಸರಕಾರ ಮುಂದಾಗಿದೆ.

Advertisement

ಈ ಕುರಿತು ಸೋಮವಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್ ಅವರು ಟ್ವೀಟ್ ಮಾಡಿದ್ದಾರೆ. ”ತುಳು ಭಾಷೆಯನ್ನು ಕರ್ನಾಟಕದ ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸುವ ಸಂಬಂಧ,ಅಧ್ಯಯನ ನಡೆಸಿ ಸೂಕ್ತ ಶಿಫಾರಸ್ಸಿನೊಂದಿಗೆ ವರದಿ ನೀಡಲು ಡಾ| ಮೋಹನ್ ಆಳ್ವ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದ್ದು, ಈ ಸಮಿತಿಗೆ ಒಂದು ವಾರದಲ್ಲಿ ವರದಿ ನೀಡಲು ಸೂಚಿಸಲಾಗಿದೆ” ಎಂದು ಹೇಳಿಕೊಂಡಿದ್ದಾರೆ.

ಪಂಚ ದ್ರಾವಿಡ ಭಾಷೆಗಳಲ್ಲಿ ಒಂದಾದ ತುಳು ದಕ್ಷಿಣ ಕನ್ನಡ, ಉಡುಪಿ ಮತ್ತು ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಗಳಲ್ಲಿ ಹೆಚ್ಚಾಗಿ ಜನರು ಮಾತನಾಡುತ್ತಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next