Advertisement
ಈ ಸಭೆಯ ಅಧ್ಯಕ್ಷತೆಯನ್ನು ಬಂಟರ ಸಂಘದ ಅಧ್ಯಕ್ಷ ಪದ್ಮನಾಭ ಎಸ್. ಪಯ್ಯಡೆ ಅವರು ವಹಿಸಿ ಮಾತನಾಡಿ, ಬಂಟರ ಸಂಘದ ಮಹಾದಾನಿಯಾಗಿ ಸಂಘದ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಯೋಜನೆಗೆ ಪ್ರತೀವರ್ಷ ರೂ. 5 ಲಕ್ಷ ರೂ. ಗಳಂತೆ ನೆರವು ನೀಡುತ್ತಾ ಬಂದಿರುವ ಕೆ. ಪ್ರಕಾಶ್ ಶೆಟ್ಟಿಯವರು ಸಂಘದ ಬೆನ್ನೆಲುಬಾಗಿ ವಿವಿಧ ಯೋಜನೆಗಳಿಗೂ ನೆರವಿನ ಹಸ್ತ ನೀಡಿದವರು. ಅವರ 60 ರ ಹುಟ್ಟುಹಬ್ಬದ ಸಂದರ್ಭದಲ್ಲಿಯೇ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ದೊರೆತಿರುವುದು ಯೋಗಾನುಯೋಗವೇ ಸರಿ. ಸಮಾಜದ ಕಷ್ಟ-ಸುಖಗಳಿಗೆ ಸದಾ ಸ್ಪಂದಿಸುತ್ತಿರುವ ಅವರ ಅಭಿನಂದನಾ ಸಮಾರಂಭದಲ್ಲಿ ಮುಂಬಯಿ ಬಂಟರು, ತುಳು-ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಕರೆನೀಡಿದರು.
Related Articles
Advertisement
ಕಾರ್ಯಾಧ್ಯಕ್ಷೆ ರಂಜನಿ ಸುಧಾಕರ ಹೆಗ್ಡೆ ಮಾತನಾಡಿ, ಕೆ. ಪ್ರಕಾಶಣ್ಣ ಅವರದ್ದು ಸಾಮರಸ್ಯದ ಬದುಕು. ಎಷ್ಟೋ ಮಂದಿಯನ್ನು ಕತ್ತಲೆಯಿಂದ ಬೆಳಕಿನತ್ತ ಕೊಂಡೊಯ್ದ ಅವರು
ತಮ್ಮ ವಿಶೇಷ ವ್ಯಕ್ತಿತ್ವದಿಂದ ಎಲ್ಲರ ಪ್ರೀತಿ,ಗೌರವಕ್ಕೆ ಪಾತ್ರರಾಗಿದ್ದಾರೆ ಎಂದರು. ಮಾತೃಭೂಮಿ ಕೋ. ಆಪರೇಟಿವ್‌ಸೊಸೈಟಿಯ ಕಾರ್ಯಾಧ್ಯಕ್ಷ ರತ್ನಾಕರ ಶೆಟ್ಟಿ ಮುಂಡ್ಕೂರು ಅವರು ಮಾತನಾಡಿ, ಕೆ. ಪ್ರಕಾಶ್ ಶೆಟ್ಟಿ ಅವರ ಅಭಿನಂದನಾ ಸಮಾಲೋಚನಾ ಸಭೆಯು ತುಳು-ಕನ್ನಡಿಗ ಸಂಘ-ಸಂಸ್ಥೆಗಳ ಜೊತೆಗೆ ಮಗದೊಮ್ಮೆ ನಡೆಯಲಿದೆ. ಮುಂಬಯಿಯಿಂದ ಬಸ್ ಮತ್ತು ರೈಲ್ವೇ ವ್ಯವಸ್ಥೆ ಮಾಡಲಾಗುವುದು. ಕಾರ್ಯಕ್ರಮದಲ್ಲಿ ಭಾಗವಹಿಸುವವರಿಗೆ ಮುಂದೆ ತಿಳಿಸಲಾಗುವುದು ಎಂದರು.
ಆರಂಭದಲ್ಲಿ ದೀಪಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಪ್ರಮೀಳಾ ಶೆಟ್ಟಿ ಪ್ರಾರ್ಥನೆಗೈದರು. ಬಂಟರವಾಣಿಯ ಗೌರವ ಸಂಪಾದಕ ಅಶೋಕ್ ಪಕ್ಕಳ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು. ವೇದಿಕೆಯಲ್ಲಿ ಬಂಟರ ಸಂಘದ ಗೌರವ ಪ್ರಧಾನ ಕಾರ್ಯದರ್ಶಿ ಸಿಎ ಸಂಜೀವ ಶೆಟ್ಟಿ, ಗೌರವ ಕೋಶಾಧಿಕಾರಿ ಪ್ರವೀಣ್ ಭೋಜ ಶೆಟ್ಟಿ, ಜತೆ ಕಾರ್ಯದರ್ಶಿ ಮಹೇಶ್ ಎಸ್. ಶೆಟ್ಟಿ, ಜತೆ ಕೋಶಾಧಿಕಾರಿ ಗುಣಪಾಲ್ ಶೆಟ್ಟಿ ಐಕಳ, ಯುವ ವಿಭಾಗದ ಕಾರ್ಯಾಧ್ಯಕ್ಷ ಶರತ್ ವಿ. ಶೆಟ್ಟಿ ಉಪಸ್ಥಿತರಿದ್ದರು. ಬಂಟರ ಸಂಘದ ಮಾಜಿ ಅಧ್ಯಕ್ಷರುಗಳಾದ ಸಿಎ ಶಂಕರ್ ಶೆಟ್ಟಿ, ಪ್ರಭಾಕರ ಎಲ್. ಶೆಟ್ಟಿ, ಒಕ್ಕೂಟದ ನಿರ್ದೇಶಕರು, ಸಂಘದ ಕಾರ್ಯಕಾರಿ ಸಮಿತಿಯ ಸದಸ್ಯರು, ಉಪ ಸಮಿತಿಗಳ ಕಾರ್ಯಾಧ್ಯಕ್ಷರು, ಪ್ರಾದೇಶಿಕ ಸಮಿತಿಗಳ ಪದಾಧಿಕಾರಿಗಳು, ಮಹಿಳಾ ವಿಭಾಗ,ಯುವ ವಿಭಾಗದ ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಇದೇ ಸಂದರ್ಭದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಉಪಾಧ್ಯಕ್ಷ ಕರ್ನಿರೆವಿಶ್ವನಾಥ ಶೆಟ್ಟಿ ಅವರ ಹುಟ್ಟುಹಬ್ಬವನ್ನು ಆಚರಿಸಿ ಅಭಿನಂದಿಸಲಾಯಿತು. ಸಂಘದ ಮಹಾಪ್ರಬಂಧಕ ಪ್ರವೀಣ್ ಶೆಟ್ಟಿ ವರಂಗ, ಪ್ರಬಂಧಕ ಸುಕುಮಾರ್ ಶೆಟ್ಟಿ ಸಹಕರಿಸಿದರು.
ಚಿತ್ರ-ವರದಿ : ಪ್ರೇಮನಾಥ್ ಶೆಟ್ಟಿ ಮುಂಡ್ಕೂರು.