ಮುಂಬಯಿ: ನಲಸೋಪರ ತುಳು-ಕನ್ನಡಿಗರ ಆಶೋತ್ತರಗಳಿಗೆ ಸ್ಪಂದಿ ಸುವ ಉದ್ದೇಶದಿಂದ ಸ್ಥಾಪನೆಗೊಂಡ ನೂತನ ತುಳುಕೂಟ ನಲಸೋಪರ ಇದರ ಉದ್ಘಾ ಟನಾ ಸಮಾರಂಭವು ಮಾ. 25ರಂದು ನಲಸೋಪರ ಪಶ್ಚಿಮದ ಎಸ್‌ಟಿ ಬಸ್ ಡಿಪ್ಪೋ ಎದುರುಗಡೆಯ ಹೊಟೇಲ್ ಗ್ಯಾಲಕ್ಸಿ ಸಭಾಗೃಹದಲ್ಲಿ ವೈವಿಧ್ಯಮಯ ಕಾರ್ಯಕ್ರಮ ಗಳೊಂದಿಗೆ ಅದ್ದೂರಿಯಾಗಿ ನಡೆಯಿತು.
ಸಮಾರಂಭದ ಅಧ್ಯಕ್ಷತೆಯನ್ನು ತುಳುಕೂಟ ನಲಸೋಪರ ಅಧ್ಯಕ್ಷ ರಮೇಶ್ ವಿ. ಶೆಟ್ಟಿ ಕಾಪು ಇವರು ವಹಿಸಿದ್ದು, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಇವರು ದೀಪಪ್ರಜ್ವಲಿಸಿ ನೂತನ ಸಂಸ್ಥೆಗೆ ಚಾಲನೆ ನೀಡಿದರು. ಸಮಾರಂಭದ ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ವಸಾಯಿ-ವಿರಾರ್ ಮಹಾನಗರ ಪಾಲಿಕೆಯ ಮೇಯರ್ ರೂಪೇಶ್ ಜಾಧವ್, ಅತಿಥಿಯಾಗಿ ವಸಾಯಿ-ವಿರಾರ್ ಮಹಾನಗರ ಪಾಲಿಕೆಯ ಮಾಜಿ ಉಪ ಮೇಯರ್ ಉಮೇಶ್ ನಾಯ್ಕ ಇವರು ಉಪಸ್ಥಿತರಿದ್ದರು.
ಸಮಾರಂಭದಲ್ಲಿ ಗೌರವ ಅತಿಥಿಗಳಾಗಿ ಬಂಟರ ಸಂಘ ವಸಾಯಿ-ಡಹಾಣೂ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ಜಯಂತ್ ಆರ್. ಪಕ್ಕಳ, ಬೋಂಬೆ ಬಂಟ್ಸ್ ಅಸೋಸಿಯೇಶನ್ ಗೌರವ ಪ್ರಧಾನ ಕಾರ್ಯದರ್ಶಿ ಸಿಎ ಸುರೇಂದ್ರ ಶೆಟ್ಟಿ, ತುಳುಕೂಟ ಐರೋಲಿ ಅಧ್ಯಕ್ಷ ಹರೀಶ್ ಶೆಟ್ಟಿ ಪಡುಬಿದ್ರೆ, ಜ್ಯೋತಿ ಕೋ. ಆಪರೇಟಿವ್ ಕ್ರೆಡಿಟ್ ಸೊಸೈಟಿಯ ಕಾರ್ಯಾಧ್ಯಕ್ಷ ಗಿರೀಶ್ ಬಿ. ಸಾಲ್ಯಾನ್, ಮಣಿಕಂಠ ಸೇವಾ ಸಮಿತಿ ವಸಾಯಿ ಗೌರವಾಧ್ಯಕ್ಷ ಕರ್ನೂರು ಶಂಕರ ಆಳ್ವ, ಉದ್ಯಮಿ, ಸಮಾಜ ಸೇವಕ ಮಂಜುನಾಥ ಶೆಟ್ಟಿ ವಸಾಯಿ, ರಜಕ ಸಂಘ ಮೀರಾರೋಡ್-ವಿರಾರ್ ಪ್ರಾದೇಶಿಕ ಸಮಿತಿಯ ಮಾಜಿ ಕಾರ್ಯಾಧ್ಯಕ್ಷ ದೇವೇಂದ್ರ ಬುನ್ನನ್ ಅವರು ಆಗಮಿಸಿ ನೂತನ ಸಂಸ್ಥೆಗೆ ಶುಭಹಾರೈಸಿದರು.
ತುಳುಕೂಟ ನಲಸೋಪರ ಸಂಸ್ಥೆಯ ಗೌರವಾಧ್ಯಕ್ಷ ಶಶಿಧರ ಕೆ. ಶೆಟ್ಟಿ, ಅಧ್ಯಕ್ಷ ರಮೇಶ್ ವಿ. ಶೆಟ್ಟಿ, ಸಲಹಾ ಸಮಿತಿಯ ಕಾರ್ಯಾಧ್ಯಕ್ಷ ಹರೀಶ್ ಶೆಟ್ಟಿ ಗುರ್ಮೆ, ಉಪಾಧ್ಯಕ್ಷ ಗಣೇಶ್ ವಿ. ಸುವರ್ಣ, ಕಾರ್ಯದರ್ಶಿ ಜಗನ್ನಾಥ ಡಿ. ಶೆಟ್ಟಿ, ಕೋಶಾಧಿಕಾರಿ ಸುರೇಂದ್ರ ವಿ. ಶೆಟ್ಟಿ, ಜತೆ ಕಾರ್ಯದರ್ಶಿ ಯಶವಂತ್ ಸಾಲ್ಯಾನ್, ಜತೆ ಕೋಶಾಧಿಕಾರಿ ದಿವಾಕರ ಶೆಟ್ಟಿ ನಿಟ್ಟೆ, ಸಾಂಸ್ಕೃತಿಕ ಸಮಿತಿಯ ಕಾರ್ಯಾಧ್ಯಕ್ಷ ತಾರಾನಾಥ ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಮಲ್ಲಿ ಕೆ. ಚೌಟ ಮೊದಲಾದವರು ಉಪಸ್ಥಿತರಿದ್ದರು.
ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ತುಳುಕೂಟದ ಸದಸ್ಯ ಬಾಂಧವರಿಂದ ನೃತ್ಯ ವೈವಿಧ್ಯ, ಸ್ವಾಗತ ನೃತ್ಯ, ಏಕಪಾತ್ರಾಭಿನಯ ಇನ್ನಿತರ ವಿವಿಧ ವಿನೋದಾವಳಿಗಳು ಹಾಗೂ ಎಂಕ್ ಪುರೊÕತ್ತಿಜ್ಜಿ ತುಳು ನಾಟಕ ಪ್ರದರ್ಶನಗೊಂಡಿತು. ಇತರ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರ ನೇತೃತ್ವದಲ್ಲಿ ಸಮಾರಂಭವು ಜರಗಿದ್ದು, ಪರಿಸರದ ನೂರಾರು ಸಂಖ್ಯೆಯಲ್ಲಿ ತುಳು-ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸಮಾರಂಭದ ಯಶಸ್ಸಸಿಗೆ ಸಹಕರಿಸಿದರು. ಕಾರ್ಯಕ್ರಮದಲ್ಲಿ ಲಘು ಉಪಾಹಾರ ಮತ್ತು ಕೊನೆಯಲ್ಲಿ ಭೋಜನದ ವ್ಯವಸೆœಯನ್ನು ಆಯೋಜಿಸಲಾಗಿತ್ತು.